ತುಮಕೂರು | ಸಿಎಂ ಹೇಳಿಕೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಖಂಡನೆ

Date:

ಪಾಕಿಸ್ತಾನದ ಮೇಲೆ ಯುದ್ದ ಸಾರುವ ಅಗತ್ಯವಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿರುವ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು, ಸಿದ್ದರಾಮಯ್ಯನವರು ಅನುಭವಿ ರಾಜಕಾರಣಿ. ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಮಾತನಾಡಬೇಕು. ದೇಶ ಇದ್ದರೆ ನಾವು, ನಾವ್ಯಾರೂ ದೇಶಕ್ಕಿಂತ ದೊಡ್ಡವರಲ್ಲ ಎಂದು ಹೇಳಿದರು.

- Advertisement -

ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿರುವ ತಮ್ಮ ಕಚೇರಿಯಲ್ಲಿಂದು ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿ ನಡೆದ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಯಾವ ರೀತಿ ಮಾತನಾಡಿದ್ದಾರೆ ಎನ್ನುವುದನ್ನು ಸಿದ್ದರಾಮಯ್ಯನವರು ಅರ್ಥ ಮಾಡಿಕೊಳ್ಳಬೇಕು. ಅನಾವಶ್ಯಕವಾಗಿ ಭಾರತ ಮಾತೆಗೆ ಅಪಚಾರ ಮಾಡುವ ರೀತಿ ಮಾತನಾಡುವನ್ನು ಯಾರೂ ಸಹಿಸುವುದಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಿದ್ದರಾಮಯ್ಯ,  ಸಿದ್ದರಾಮಯ್ಯನವರಾಗಿದ್ದರೇ ಒಳ್ಳೆಯದು. ಅವರು ಸಿದ್ದರಾಮಯ್ಯನವರಾಗದೇ ಬೇರೊಂದು ಸಮುದಾಯದ ಓಲೈಕೆಯಲ್ಲೇ ಮಾತನಾಡಿದರೆ ಅದು ಅವರಿಗೆ ಶೋಭೆ ತರುವುದಿಲ್ಲ. ದೇಶದ ಅಭದ್ರತೆಗೆ ಕಾರಣವಾಗುವ ಈ ರೀತಿಯ ಹೇಳಿಕೆಗಳನ್ನು ಅವರು ಕೊಡಬಾರದು ಎಂದು ಅವರು ಹೇಳಿದರು.

ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರನ್ನು ಧರ್ಮ ಕೇಳಿ ಕೊಲೆ ಮಾಡುತ್ತಾರೆ ಎಂದರೆ ಏನರ್ಥ. ಉಗ್ರರ ದಾಳಿ ಬಗ್ಗೆ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೊಂಚ ಲೋಪವಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಹೀಗಿದ್ದರೂ ಸಹ ಅವಶ್ಯಕತೆ ಇಲ್ಲದ ಹೇಳಿಕೆಗಳನ್ನು ನೀಡುವುದೆಲ್ಲ ಸರಿಯಲ್ಲ, ಕ್ಷುಲ್ಲಕ ಭಾಷೆ ಬಳಕೆ ಮಾಡಿ ಜನರಲ್ಲಿ ಕ್ರೋಧ ಉಂಟು ಮಾಡಬಾರದು ಎಂದರು. 

ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಕಾಶ್ಮೀರದ ಮೇಲಿದ್ದ 370ನೇ ವಿಧಿಯನ್ನು ತೆಗೆದ ಮೇಲೆ ಪ್ರವಾಸೋದ್ಯಮದಿಂದ 9-10 ಸಾವಿರ ಕೋಟಿ ಬಂದಿದೆ. ಅದನ್ನೆಲ್ಲಾ ಕಾಶ್ಮೀರದ ಅಭಿವೃದ್ಧಿಗೆ ಬಳಕೆ ಮಾಡಿದ್ದಾರೆ. ಅಲ್ಲಿನ ಜನ ಖುಷಿಯಾಗಿದ್ದಾರೆ ಎಂದರು.

ಈಗಾಗಲೇ ಕೇಂದ್ರ ಸರ್ಕಾರ ಪಾಕ್ ಪ್ರಜೆಗಳು ದೇಶ ತೊರೆಯುವಂತೆ ಆದೇಶಿಸಿದೆ. ಈ ದೇಶವನ್ನು ರಾಜ್ಯ ಸರ್ಕಾರಗಳು ಪಾಲನೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯಗಳ ಗೃಹ ಸಚಿವರುಗಳು ಕಾರ್ಯೋನ್ಮುಖರಾಗಿದ್ದಾರೆ ಎಂದು ಅವರು ಹೇಳಿದರು.

ಏ. 30 ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಸವ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಬಸವ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದ್ದು, ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಸವಣ್ಣನ ಅನುಯಾಯಿಗಳು ಭಾಗಹಿಸಬೇಕು ಎಂದು ಅವರು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಮಾಜಿ ಸಂಸದ ಜಿ.ಎಸ್. ಬಸವರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಮತ್ತಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...