ತುಮಕೂರು | ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಸಂಯುಕ್ತ ಹೋರಾಟದಿಂದ ಪ್ರತಿಭಟನೆ : ಅಧಿವೇಶನದಲ್ಲಿ ಧ್ವನಿ ಎತ್ತಲು ಆಗ್ರಹ

Date:

Advertisements

ತುಮಕೂರು ಜಿಲ್ಲೆಗೆ ಮರಣ ಶಾಸನವಾಗಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯನ್ನು ಸರಕಾರ ಕೂಡಲೇ ನಿಲ್ಲಿಸಬೇಕು.ಜಿಲ್ಲೆಯ ಶಾಸಕರು ಪಕ್ಷಭೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ ಇದರ ವಿರುದ್ದ ಧ್ವನಿ ಎತ್ತಬೇಕೆಂದು ಆಗ್ರಹಿಸಿ ಇಂದು ಸಂಯುಕ್ತ ಹೋರಾಟ-ಕರ್ನಾಟಕ ತುಮಕೂರು ಜಿಲ್ಲಾ ಘಟಕದವತಿ ಯಿಂದ ಪ್ರತಿಭಟನಾ ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಲಾಯಿತು.

1000747088

ಸಂಯುಕ್ತ ಹೋರಾಟ-ಕರ್ನಾಟಕದ ಸಂಚಾಲಕ ಸಿ.ಯತಿರಾಜು,ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು,ಪ್ರಾಂತ ರೈತ ಸಂಘದ ಬಿ.ಉಮೇಶ್,ಎಐಕೆಎಸ್‌ನ ಗಿರೀಶ್,ಎಐಕೆಕೆಎಸ್‌ನ ಎಸ್.ಎನ್.ಸ್ವಾಮಿ ಹಾಗೂ ಇತರೆ ರೈತಮುಖಡರುಗಳ ನೇತೃತ್ವದಲ್ಲಿ ನಗರದ ಸ್ವಾತಂತ್ರ ಚೌಕದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೊಳಿಗೆ ಕಪ್ಪುಪಟ್ಟಿ ಧರಿಸಿ,ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಬಳಿ ಧರಣಿ ಸತ್ಯಾಗ್ರಹ ನಡೆಸಿದರು.

ಈ ವೇಳೆ ಮಾತನಾಡಿದ ರೈತ ಸಂಘದ ಎ.ಗೋವಿಂದರಾಜು, ಜಿಲ್ಲೆಯ ಹಲವಾರು ಹಿರಿಯರ ಹೋರಾಟದ ಫಲವಾಗಿ ಹೇಮಾವತಿ ನೀರು ತುಮಕೂರು ಜಿಲ್ಲೆಗೆ ಹರಿದಿದೆ.ಆದರೆ ಕುಣಿಗಲ್ ತಾಲೂಕು ತೋರಿಸಿ, ನಮ್ಮ ಜಿಲ್ಲೆಯ ನೀರನ್ನು ಕದಿಯುವ ಪ್ರಯತ್ನವನ್ನು ಸರಕಾರ ಮಾಡುತ್ತಿದೆ.ಆರಂಭದಲ್ಲಿ ಇದನ್ನು ವಿರೋಧಿಸಿ, ಜಿ.ಪಂ. ಕೆಡಿಪಿ ಸಭೆಯಲ್ಲಿ ನಿರ್ಣಯ ಮಂಡಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್,ಈಗ ಸರಕಾರದ ನಿರ್ಧಾರಕ್ಕೆ ಬದ್ದ ಎಂದು ಹೇಳುವ ಮೂಲಕ ಇಡೀ ಜಿಲ್ಲೆಯ ರೈತರು ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ.ಸರಕಾರ ಹೇಮಾವತಿ ಎಕ್ಸ್ ಪ್ರೆಸ್  ಕೆನಾಲ್ ಯೋಜನೆಯಿಂದ ಹಿಂದೆ ಸರಿಯದಿದ್ದರೆ, ಮುಂಬರುವ ಜಿ.ಪಂ., ತಾ.ಪಂ., ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಗಳಲ್ಲಿ ರೈತರು ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

Advertisements
1000747092

ಕಳೆದ ಎಂಟು ತಿಂಗಳಿನಿಂದ ವಿವಿಧ ಹಂತದ ಹೋರಾಟಗಳು ಎಕ್ಸ್ ಪ್ರೆಸ್  ಲಿಂಕ್ ಕೆನಾಲ್ ವಿರೋಧಿ ನಡೆಯುತ್ತಿವೆ. ಅಂದಿನಿಂದಲೂ ಜಿಲ್ಲಾಡಳಿತ ರೈತರು,ಸಾರ್ವಜನಿಕರೊಂದಿಗೆ ಮಾತುಕತೆ ನಡೆಸುವಂತೆ ಒತ್ತಾಯ ಮಾಡುತ್ತಲೇ ಬಂದಿದ್ದರೂ ಕಣ್ಣು,ಕಿವಿ ಇಲ್ಲದಂತೆ ವರ್ತಿಸುತ್ತಿದೆ.ಇಂದು ತಾಂತ್ರಿಕ ಸಮಿತಿ ವರದಿ ಕುರಿತು ಪತ್ರಿಕಾಗೋಷ್ಠಿಯನ್ನು ಬೆಂಗಳೂರಿನಲ್ಲಿ ಏರ್ಪಡಿಸಿದ್ದಾರೆ.ಜಿಲ್ಲೆಯ ಸಮಸ್ಯೆಯೇ ಗೊತ್ತಿರದ ಪತ್ರಕರ್ತರು ಯಾವ ಪ್ರಶ್ನೆ ಕೇಳಲು ಸಾಧ್ಯ. ಈ ರೀತಿಯ ಬೇಕಾಬಿಟ್ಟಿ ವರ್ತನೆ ಸರಿಯಲ್ಲ. ಸರಕಾರ ಕೂಡಲೇ ಯೋಜನೆಯನ್ನು ಕೈಬಿಡಬೇಕು.ಹಾಗೆಯೇ ಜಿಲ್ಲೆಯ ಎಲ್ಲಾ ಶಾಸಕರು,ಸಚಿವರು ಪಕ್ಷಬೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ ಧ್ವನಿಎತ್ತಿ ಜಿಲ್ಲೆಯ ಹಿತ ಕಾಯಬೇಕೆಂದು ಎ.ಗೋವಿಂದರಾಜು ಆಗ್ರಹಿಸಿದರು.

1000747091

ಸಂಯುಕ್ತ ಹೋರಾಟದ ಸಂಚಾಲಕ ಸಿ.ಯತಿರಾಜು ಮಾತನಾಡಿ,ಜನರಿಗೆ ನೀರು ಪ್ರಾಥಮಿಕ ಅದ್ಯತೆ.ಕುಡಿಯಲು ಮತ್ತು ಕೃಷಿಗೆ ನೀರು ಅತಿ ಅವಶ್ಯ.ಆದರೆ ಆಳುವ ಸರಕಾರಗಳ ಇಚ್ಚಾಶಕ್ತಿಯ ಕೊರತೆಯಿಂದ ಸ್ವಾತಂತ್ರ ಬಂದು 75 ವರ್ಷ ಕಳೆದರೂ ಸರಕಾರ ಇದನ್ನು ಖಾತ್ರಿ ಪಡಿಸಿಲ್ಲ.ಚುನಾವಣಾ ಗಿಮಿಕ್‌ಗಳಾಗಿ ನೀರಾವರಿ ಯೋಜನೆಗಳು ಬಳಕೆಯಾಗುತ್ತಿವೆ. ಇದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ.ಜಿಲ್ಲೆ, ಜಿಲ್ಲೆಗಳ ನಡುವೆ ಜಗಳಕ್ಕೆ ಕಾರಣವಾಗಿದೆ.ಹೇಮಾವತಿ ನಾಲೆಯಿಂದ ಜಿಲ್ಲೆಗೆ ನಿಗಧಿಪಡಿಸಿರುವ ಪ್ರಮಾಣದ ಸಂಪೂರ್ಣ ನೀರು, ಯೋಜನೆ ಪ್ರಾರಂಭವಾಗಿ 40 ವರ್ಷ ಕಳೆದರೂ ಒಮ್ಮೆಯೂ ಹರಿದಿಲ್ಲ. ಹೀಗಿರುವಾಗ, ಮೂಲನಾಲೆಯ ಅರ್ಧ ಭಾಗದಿಂದ ನೀರು ತೆಗೆದುಕೊಂಡು ಹೋಗುವ ಮೂಲಕ ಇಡೀ ಜಿಲ್ಲೆಗೆ ಅನ್ಯಾಯ ಎಸಗಲಾಗುತ್ತಿದೆ. ಇದರ ವಿರುದ್ದ ರೈತರು, ಸಾರ್ವಜನಿಕರು ಧ್ವನಿ ಎತ್ತಬೇಕಾಗಿದೆ ಎಂದರು.

1000747089

ಪ್ರಾಂತ ರೈತ ಸಂಘದ ಬಿ.ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ,ತುಮಕೂರು ಜಿಲ್ಲೆಗೆ ಹೇಮಾವತಿ ಹರಿಯುವಲ್ಲಿ ಕೆಲವರ ಶ್ರಮವಿದೆ.ಅದರೆ ಕೆಲ ಶಾಸಕರು ಸ್ವಯಂ ಘೋಷಿತ ಭಗೀರಥರಾಗಿದ್ದಾರೆ.ಏಕ್ಸ್ ಪ್ರೆಸ್  ಕೆನಾಲ್ ಸಾಧಕ, ಭಾಧಕಗಳ ಕುರಿತು ತಾಂತ್ರಿಕ ವರದಿಯನ್ನು ಜನಸಾಮಾನ್ಯರಿಂದ ಮುಚ್ಚಿಟ್ಟು ಕಾಮಗಾರಿ ಮಾಡಲು ಹೊರಟಿರುವುದು ಸರಿಯಲ್ಲ.ಎಕ್ಸ್ ಪ್ರಸ್ ಕೆನಾಲ್ ಆರಂಭಗೊಂಡರೇ, ಮೊದಲ ಬಲಿಪಶು ತುಮಕೂರು ನಗರ.ಹಾಗಾಗಿ ಜನರು ಹೆಚ್ಚಿನ ರೀತಿಯಲ್ಲಿ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

1000747090

ಹೇಮಾವತಿ ಎಕ್ಸ್ ಪ್ರೆಸ್  ಕೆನಾಲ್ ವಿರೋಧಿ ಮುಷ್ಕರದಲ್ಲಿ ರೈತ ಮುಖಂಡರಾದ ಎಸ್.ಎನ್.ಸ್ವಾಮಿ,ಜಿ.ಶಂಕರಪ್ಪ,ಗಿರೀಶ್, ಕಂಬೇಗೌಡ, ಸೈಯದ್ ಮುಜೀಬ್ ಸೇರಿದಂತೆ ಹಲವು ನಾಯಕರು ಮಾತನಾಡಿದರು. ಮುಷ್ಕರದಲ್ಲಿ ರೈತ ಸಂಘದ ಚಿಕ್ಕಬೋರೇಗೌಡ, ಗುಬ್ಬಿಯ ಲೋಕೇಶ್, ಕೊರಟಗೆರೆಯ ಶಬ್ಬೀರ್, ಮಹಿಳಾ ಘಟಕದ ನಾಗರತ್ನಮ್ಮ, ಭಾಗ್ಯಮ್ಮ, ಅಜ್ಜಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.  

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X