ತುಮಕೂರು | ಸಂಶೋಧನಾರ್ಥಿಗಳ ಮೇಲೆ ವಿವಿ ಆಡಳಿತಾತ್ಮಕ ದಬ್ಬಾಳಿಕೆ; ಯುಜಿಸಿ ನಿಯಮ ಉಲ್ಲಂಘನೆಯ ಆರೋಪ

Date:

Advertisements

ಯುಜಿಸಿ ನಿಯಮಾವಳಿ 2022ರ ಅನ್ವಯ ಯುಜಿಸಿಯಿಂದ ಸಂಶೋಧನಾ ವೇತನ ಪಡೆಯುತ್ತಿರುವ ಎಲ್ಲ ಪೂರ್ಣಕಾಲಿಕ ಸಂಶೋಧನಾರ್ಥಿಗಳು ಕಡ್ಡಾಯವಾಗಿ ವಿಶ್ವವಿದ್ಯಾಲಯದ ವಿಜ್ಞಾನ ಹಾಗೂ ಕಲಾ ಕಾಲೇಜುಗಳಲ್ಲಿ ವಾರಕ್ಕೆ ಕನಿಷ್ಟ 4 ಗಂಟೆಗಳ ಬೋಧನ ಕಾರ್ಯಭಾರವನ್ನು ನಿವರ್ಹಿಸಬೇಕು ಎಂದು ತುಮಕೂರು ವಿಶ್ವವಿದ್ಯಾಲಯ ಆದೇಶಿಸಿದೆ. ಅಲ್ಲದೆ, ಇದಕ್ಕೆ ಬದ್ಧರಾಗದವರ ಮೇಲೆ ಸೂಕ್ತ ಶಿಸ್ತು ಕ್ರಮ ಜರಗಿಸುವುದಾಗಿ ‘ಅಂತಿಮ ಎಚ್ಚರಿಕೆ ಪತ್ರ’ವನ್ನೂ ಕಳುಹಿಸಿರುವುದು ಸಂಶೋಧನಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಸಂಶೋಧನಾರ್ಥಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಯುಜಿಸಿ ನಿಯಮಾವಳಿಯ ಕ್ಲಾಸ್ 9(2) ಪ್ರಕಾರ ಬೋಧನ ಕಾರ್ಯಭಾರದ ಅಗತ್ಯ ಕೋರ್ಸ್ ವರ್ಕ್ ಸಂದರ್ಭಕ್ಕಷ್ಟೇ ಸೀಮಿತವಾಗಿದ್ದು, ಕೋರ್ಸ್ ವರ್ಕ್ ಮುಗಿಸಿದ ಸಂಶೋಧನಾರ್ಥಿಗಳು ಬೋಧನ ಕಾರ್ಯಭಾರ ನಿರ್ವಹಿಸುವ ಅಗತ್ಯವಿಲ್ಲ. ಈ ವಿಚಾರವಾಗಿ ವಿಶ್ವವಿದ್ಯಾಲಯಕ್ಕೆ ಅನೇಕ ಮನವಿ ಪತ್ರಗಳನ್ನು ಸಲ್ಲಿಸಿದ್ದರೂ, ಅವುಗಳಿಗೆ ಸೂಕ್ತ ಉತ್ತರ ನೀಡದೆ, ಮೊದಲು ಬೋಧನೆ ಆಮೇಲೆ ಸಂಶೋಧನೆ ಎಂಬ ಧಾಟಿಯಲ್ಲಿ ಉತ್ತರಿಸಿದೆ. ಇದರಿಂದ ನಮ್ಮ ಸಂಶೋಧನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ” ಎಂದು ಅವಲತ್ತುಕೊಂಡಿದ್ದಾರೆ.

“ಕ್ಲಾಸ್ 9(2) ವಿಚಾರದಲ್ಲಿ ಸ್ಪಷ್ಟೀಕರಣ ಕೋರಿ ಯುಜಿಸಿಗೆ ಇಮೇಲ್ ಮಾಡಿದ್ದರೂ ಈವರೆಗೆ ಯುಜಿಸಿಯಿಂದ ಯಾವ ಪ್ರತಿಕ್ರಿಯೆಯೂ ಬಂದಿಲ್ಲ. ವಿಶ್ವವಿದ್ಯಾನಿಲಯ ಹಾಗೂ ಯುಜಿಸಿಯ ಈ‌ ನಡೆಯಿಂದ‌ ಸಂಶೋಧನಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ವಿಶ್ವವಿದ್ಯಾಲಯವು ದುರುದ್ದೇಶಪೂರಿತವಾಗಿ ಹಾಗೂ ನಿಯಮಬಾಹಿರವಾಗಿ, ಯುಜಿಸಿಯಿಂದ ಸಂಶೋಧನ ವೇತನ‌ ಪಡೆಯುತ್ತಿದ್ದೇವೆ ಎಂಬುದನ್ನಷ್ಟೇ ಗುರಿಯಾಗಿಸಿಕೊಂಡು, ತಮ್ಮನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ” ಎಂದು ಸಂಶೋಧನಾರ್ಥಿಗಳು ಆರೋಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಳ್ತಂಗಡಿ| ಬಾಲಕಿಯ ಮಾನಭಂಗ ಯತ್ನ: ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಕೇಸ್ ದಾಖಲು

ತುಮಕೂರು ವಿಶ್ವವಿದ್ಯಾಲಯದ ಕುಲಸಚಿವ ಮಹೇಶ್ ಈ ದಿನ.ಕಾಮ್‌ನೊಂದಿಗೆ ಪ್ರತಿಕ್ರಿಯಿಸಿದ್ದು, “ಎಲ್ಲಾವನ್ನು ನಿಯಮಾನುಸಾರವೇ ಮಾಡಿದ್ದೇವೆ. ಯಾವುದನ್ನು ನಿಯಮ ಬಿಟ್ಟು ಮಾಡಿಲ್ಲ” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X