ತುಮಕೂರು | ನಗರ ಸ್ಥಳೀಯ ಸಂಸ್ಥೆ : ಅನಧಿಕೃತ ಆಸ್ತಿಗಳನ್ನು ಬಿ-ಖಾತೆಯಲ್ಲಿ ದಾಖಲಿಸಲು 3 ತಿಂಗಳ ಕಾಲಾವಕಾಶ

Date:

ತುಮಕೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತ ಆಸ್ತಿಗಳನ್ನು ಹೊಂದಿರುವವರು ಬಿ-ಖಾತಾಗೆ ದಾಖಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು.

- Advertisement -

 ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಆಸ್ತಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯನ್ನು ಕೊಟ್ಟಿದೆ. ಬಿ-ಖಾತಾ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅನಧಿಕೃತ ಬಡಾವಣೆಗಳ ಕಟ್ಟಡ ಮಾಲೀಕರು/ನಿವೇಶನದಾರರು ಮೂರು ತಿಂಗಳೊಳಗೆ ಬಿ-ಖಾತಾಗೆ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಸೂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿ-ಖಾತಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಬಡಾವಣೆಗಳ ಕಟ್ಟಡ ಮಾಲೀಕರು/ನಿವೇಶನದಾರರಿಗೆ ಬಿ-ಖಾತಾ ನೀಡಲು ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 18 ರಿಂದ ಮೂರು ತಿಂಗಳೊಳಗೆ ನಗರ ಸ್ಥಳೀಯ ಸಂಸ್ಥೆಯ ಅನಧಿಕೃತ ಬಡಾವಣೆಯಲ್ಲಿನ ನಿವೇಶನದಾರರಿಗೆ ಬಿ-ಖಾತಾ ನೀಡುವ ಕಾರ್ಯವನ್ನು ಆಂದೋಲನ ರೀತಿಯಲ್ಲಿ ಆರಂಭಿಸಿದ್ದೇವೆ ಎಂದು ಹೇಳಿದರು. 

1001069844

 ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸುಮಾರು 70,000ಕ್ಕೂ ಅಧಿಕ ಅನಧಿಕೃತ ಆಸ್ತಿಗಳಿದ್ದು, ಅರ್ಹವಾದ ಆಸ್ತಿಗಳಿಗೆ ಬಿ-ಖಾತಾ ನೀಡಲು ಫೆ.18ರಿಂದ ಆಯಾ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಯಲ್ಲಿ ಪ್ರತ್ಯೇಕ ಕೌಂಟರ್ ತೆರೆದು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. 

 ಆಸ್ತಿದಾರರು 2024ರ ಸೆಪ್ಟೆಂಬರ್ 10ಕ್ಕಿಂತ ಮುಂಚೆ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗಿರುವವರು ಮಾತ್ರ ಬಿ-ಖಾತಾ ಮಾಡಿಸಲು ಅರ್ಹರಿರುತ್ತಾರೆ. ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ಹಾಗೂ ಭೂಪರಿವರ್ತನೆಯಾಗದೆ ಉಪವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ/ಕಟ್ಟಡಗಳನ್ನು ಅನಧಿಕೃತ ಆಸ್ತಿಗಳೆಂದು ಪರಿಗಣಿಸಿ ಬಿ-ಖಾತಾದಲ್ಲಿ ನಮೂದಿಸಲಾಗುವುದು ಎಂದು ತಿಳಿಸಿದರು. 

 ಬಿ-ಖಾತಾದಲ್ಲಿ ದಾಖಲಿಸಲಾಗುವ ಆಸ್ತಿಗಳಿಗೆ ಮೊದಲ ಬಾರಿಗೆ ಸ್ವತ್ತು ತೆರಿಗೆಯ 2ರಷ್ಟು ತೆರಿಗೆಯನ್ನು ಹಾಗೂ ನಂತರದ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸಲಾಗುವುದು. ಬಿ-ಖಾತಾದಲ್ಲಿ ದಾಖಲಿಸಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸ್ವಾಧೀನಪಡಿಸುವ ನೋಂದಾಯಿತ ಮಾರಾಟ ಪತ್ರ/ದಾನ ಪತ್ರ/ವಿಭಾಗ ಪತ್ರಗಳನ್ನು ಹೊಂದಿರಬೇಕು. ಸರ್ಕಾರಿ ಜಾಗದಲ್ಲಿರುವ ಸ್ವತ್ತು, ಸರ್ಕಾರದ ನಿಗಮ ಮಂಡಳಿಗಳ ಜಾಗ, ನಗರ ಸ್ಥಳೀಯ ಸಂಸ್ಥೆಗಳ ಜಾಗದಲ್ಲಿರುವ ಸ್ವತ್ತುಗಳನ್ನು ಬಿ-ಖಾತಾದಲ್ಲಿ ನಮೂದಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು. 

1001069842

 ಮಹಾನಗರಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ ಮಾತನಾಡಿ, ಅನಧಿಕೃತ ಸ್ವತ್ತುಗಳಿಗೆ ನಮೂನೆ-2ಎ/3ಎ ನೀಡಿದ್ದಲ್ಲಿ ಸದರಿ ಆಸ್ತಿಯನ್ನು ಸಕ್ರಮಗೊಳಿಸಲಾಗಿದೆ ಎಂದು ಆಸ್ತಿ ಮಾಲೀಕರು ಭಾವಿಸುವಂತಿಲ್ಲ. ಬಿ-ಖಾತಾಗೆ ಅನಧಿಕೃತ ಆಸ್ತಿಯನ್ನು ದಾಖಲಿಸಲಿಚ್ಛಿಸುವವರಿಗಾಗಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗುವುದು. ಈ ಕೌಂಟರ್‌ಗಳು ರಜಾ ದಿನಗಳಂದೂ ಸಹ ಕಾರ್ಯನಿರ್ವಹಿಸಲಿವೆ. ಆಸ್ತಿದಾರರು ಬಿ-ಖಾತೆಗೆ ದಾಖಲಿಸಲು ಮದ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಕೌಂಟರ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.  

ಆಸ್ತಿದಾರರು ಬಿ-ಖಾತಾಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ತುಮಕೂರು ಮಹಾನಗರ ಪಾಲಿಕೆ (9945212919 / 9449872599), ತಿಪಟೂರು ನಗರಸಭೆ(9448596379), ಸಿರಾ ನಗರಸಭೆ(8133270041), ಕುಣಿಗಲ್ ಪುರಸಭೆ(08132-220225), ಪಾವಗಡ ಪುರಸಭೆ (9742821910), ಚಿಕ್ಕನಾಯಕನಹಳ್ಳಿ ಪುರಸಭೆ (8660353951), ಮಧುಗಿರಿ ಪುರಸಭೆ (6361773631) ಕೊರಟಗೆರೆ ಪಟ್ಟಣ ಪಂಚಾಯಿತಿ (9964645923) ಗುಬ್ಬಿ ಪಟ್ಟಣ ಪಂಚಾಯಿತಿ (7406644909), ತುರುವೇಕೆರೆ ಪಟ್ಟಣ ಪಂಚಾಯಿತಿ (7026250340) ಹುಳಿಯಾರು ಪಟ್ಟಣ ಪಂಚಾಯಿತಿ(8133256056)ಯನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ...

ತುಮಕೂರು | ಎಸ್‌ಸಿ–ಎಸ್‌ಟಿ ಸಂಪಾದಕರ ಸಂಘದ ರಾಜ್ಯದ ಮೊದಲ ಜಿಲ್ಲಾ ಘಟಕ ರಚನೆ: ಪರಮೇಶ್ ಅಧ್ಯಕ್ಷ, ರಘು ಪ್ರಧಾನ ಕಾರ್ಯದರ್ಶಿ

ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...