ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತುಮಕೂರು ಜಿಲ್ಲೆಯ ಹುಲಿಯೂರುದುರ್ಗ ಬಳಿಯ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಬಾಲಮಂಜುನಾಥ ಸ್ವಾಮೀಜಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಆಪ್ತ ಸಹಾಯಕ ಅಭಿಲಾಷ್ ಎಂಬಾತನನ್ನೂ ಕೂಡ ಬಂಧಿಸಲಾಗಿದೆ.
ಬೆಂಗಳೂರಿನ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ತುಮಕೂರು ಎಸ್ಪಿ ಅಶೋಕ್ ಕೆ.ವಿ ನೇತೃತ್ವದಲ್ಲಿ ಗುರುವಾರ ರಾತ್ರಿ ಮಠಕ್ಕೆ ತೆರಳಿದ್ದ ಪೊಲೀಸರು ಸ್ವಾಮೀಜಿ ಮತ್ತು ಅವರ ಆಪ್ತ ಸಹಾಯಕನನ್ನು ಬಂಧಿಸಿದ್ದಾರೆ. ಇಬ್ಬರ ವಿರುದ್ಧವೂ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಇತ್ತೀಚೆಗೆ, ಚರ್ಮ ರೋಗಕ್ಕೆ ಚಿಕಿತ್ಸೆ ನೀಡುವ ನೆಪದಲ್ಲಿ ನನ್ನ ಬೆತ್ತಲೆ ವಿಡಿಯೋ ಮಾಡಿ, ಬೆದರಿಸಿ ಹಣ ಬೇಡಿಕೆ ಇಟ್ಟಿದ್ದಾರೆ ಎಂದು ಕೆಲವರ ವಿರುದ್ಧ ಸ್ವಾಮೀಜಿ ತುಮಕೂರು ಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಇದೀಗ, ಸ್ವಾಮೀಜಿಯೇ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಾರೆ.
Yata niche I swamy ji