ತುಮಕೂರು | ಮೈದಾಳ ಕೆರೆ ಕಟ್ಟೆಯಲ್ಲಿ ನೀರು ಸೋರಿಕೆ : ಸ್ಥಳಕ್ಕೆ ಡಿಸಿ ಭೇಟಿ

Date:

    ತುಮಕೂರು ನಗರದ ಸಮೀಪದಲ್ಲಿರುವ ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕ್ಕೆಯಾಗುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್  ಭೇಟಿ ನೀಡಿ ಪರಿಶೀಲಿಸಿದರು. 

- Advertisement -

     ನಂತರ ಮಾತನಾಡಿದ ಅವರು ನೀರು ಸೋರಿಕೆಯಾಗುತ್ತಿದ್ದ ಸ್ಥಳಕ್ಕೆ ಈಗಾಗಲೇ ಮಣ್ಣನ್ನು ಹಾಕುವ ಕಾರ್ಯ ಪೂರ್ಣಗೊಂಡಿದ್ದು, ನೀರಿನ ಸೋರಿಕೆ ಪ್ರಮಾಣವನ್ನೂ ನಿಯಂತ್ರಿಸಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

     ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

     ಮೈದಾಳ ಕೆರೆ ಕಟ್ಟೆಯಲ್ಲಿ ನೀರು ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಸಂಚರಿಸಿದ ಅವರು, ತಕ್ಷಣವೇ ಪಿಡಿಒ ಹಾಗೂ ಸಂಬಂಧಪಟ್ಟ ತಾಂತ್ರಿಕ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

     ಮಳೆ ಪ್ರಮಾಣ ಹೆಚ್ಚಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಬಲಪಡಿಸಬೇಕು. ಕೆರೆ ಹತ್ತಿರ ಇರುವ ಮನೆ, ಶಾಲೆಗಳು ಮತ್ತು ಇತರೆ ಸಾರ್ವಜನಿಕ ಸ್ಥಳಗಳಿಗೆ ಯಾವುದೇ ಹಾನಿ ಉಂಟಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

     ಅವರು ಮುಂದುವರಿದು ಕಟ್ಟೆ ಬಲಪಡಿಸುವ ತುರ್ತು ಕಾಮಗಾರಿಗಳನ್ನು ಕೈಗೊಳ್ಳಿ, ಮಳೆ ನೀರು ಹರಿಸುವ ವ್ಯವಸ್ಥೆಯನ್ನು ಸುಗಮಗೊಳಿಸಿ. ರೈತರ ಜಮೀನುಗಳಿಗೆ ನೀರು ನುಗ್ಗದಂತೆ ಸ್ಥಳೀಯ ಗ್ರಾಮ ಅಧಿಕಾರಿಗಳು ಸಂಯೋಜಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

 ಈ ಸಂದರ್ಭದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಪಾಲಕ ಇಂಜಿನಿಯರ್ ಅನಿಲ್ ರಾಥೋಡ್, ಪಿಡಿಒ ದಯಾನಂದ ಎಸ್. ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತ ಶ್ರೀನಿವಾಸ ಎ. ಕೊಳ್ಳೇಗಾಲ ನಿಧನ

ಕಿರಿಯ ವಯಸ್ಸಿನಲ್ಲೇ ಹೃದಯಾಘಾತದಿಂದ ಪತ್ರಕರ್ತ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ...

ಶಿಕಾರಿಪುರದಲ್ಲಿ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ

ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ‘ಭಾರತ್ ಜೋಡೋ...

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...