ತುಮಕೂರು | ಸತ್ಯನಾರಾಯಣ ಪೂಜೆಗೂ ಲಿಂಗಾಯತ, ವೀರಶೈವರಿಗೂ ಏನು ಸಂಬಂಧ ? : ಸಿದ್ಧಲಿಂಗ ಸ್ವಾಮೀಜಿ ಪ್ರಶ್ನೆ

Date:

ವೀರಶೈವ, ಲಿಂಗಾಯತ ಧರ್ಮದ ಆಚರಣೆ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಅಂಗೈನಲ್ಲಿ ಲಿಂಗಧರಿಸಿ ನಿತ್ಯವೂ ಪೂಜೆ ಸಲ್ಲಿಸುವ ಸಂಪ್ರದಾಯ ಕಡಿಮೆಯಾಗಿದೆ. ಸತ್ಯನಾರಾಯಣ ಪೂಜೆಗೂ ಲಿಂಗಾಯತ, ವೀರಶೈವರಿಗೂ ಏನು ಸಂಬಂಧ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಪ್ರಶ್ನಿಸಿದರು

- Advertisement -

ತುಮಕೂರು ನಗರದಲ್ಲಿ ನಡೆದ ಸೇವಾಧೀಕ್ಷೆ, ಸಾಧಕರಿಗೆ ಸನ್ಮಾನ ಮತ್ತು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವೀರಶೈವರು ಮತ್ತೊಂದು ಧರ್ಮದ ಅನುಸರಣೆ ಮಾಡುವುದು ಸರಿಯಲ್ಲ. ಪರಧರ್ಮದ ಸಹಿಷ್ಣುತೆ ಇರಲಿ. ಆದರೆ ನಮ್ಮ ಧರ್ಮದ ಆಚರಣೆ ಬಿಡಬಾರದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಯಾರು ಲಿಂಗಧಾರಣೆ ಮಾಡಿಕೊಂಡಿಲ್ಲವೋ, ಅವರಿಗೆ ಸೇವಾಧೀಕ್ಷೆ ಮಾಡುವುದರಲ್ಲಿ ಅರ್ಥವಿಲ್ಲ. ನಮ್ಮಲ್ಲಿ ಒಗ್ಗಟ್ಟು ಕೇವಲ ರಾಜಕೀಯ ಅಧಿಕಾರಕ್ಕಾಗಿ ಮಾತ್ರ ಆದರೆ ಸಾಲದು. ಎಲ್ಲಾ ರಂಗದಲ್ಲಿಯೂ ವೀರಶೈವ, ಲಿಂಗಾಯತರು ಮುಂದೆ ಬರುವಂತೆ ಆಗಬೇಕು ಎಂದರು

ಅಖಿಲ ಭಾರತ ವೀರಶೈವ ಮಹಾ ಸಭಾ ರಾಜ್ಯ ಘಟಕದ ಅಧ್ಯಕ್ಷ ಶಂಕರ್ ಬಿದರಿ ಮಾತನಾಡಿ, ಭಾರತದ ಒಟ್ಟಾರೆ ಜನಸಂಖ್ಯೆಯ ಶೇಕಡಾ 3ರಷ್ಟಿರುವ ಬ್ರಾಹ್ಮಣರೇ ಇಡೀ ದೇಶವನ್ನು ಲೀಡ್‌ ಮಾಡುತ್ತಿದ್ದಾರೆ. ಬ್ರಾಹ್ಮಣ ಸಮುದಾಯ ರಾಜಕೀಯವಾಗಿ, ಅರ್ಥಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಸಿಂಹಪಾಲು ಪಡೆದಿದೆ. ಕೇಂದ್ರದ ಮಂತ್ರಿ ಮಂಡಲದಲ್ಲಿ 18 ಜನ ಕ್ಯಾಬಿನೆಟ್‌ ದರ್ಜೆ ಸಚಿವರಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿ ನಮ್ಮ ಸಮುದಾಯಕ್ಕೆ ಕ್ಯಾಬಿನ್ ದರ್ಜೆ ಸಚಿವ ಸ್ಥಾನ ಸಿಕ್ಕಿಲ್ಲ.  ಒಗ್ಗಟ್ಟಿಲ್ಲದೆ ಹಿಂಳಿದಿದ್ದೇವೆ. ಐಎಎಸ್‌, ಐಪಿಎಸ್‌, ರಾಜ್ಯಪಾಲರ ಹುದ್ದೆಗಳಲ್ಲಿ ಬ್ರಾಹ್ಮಣ ಸಮುದಾಯವೇ ಹೆಚ್ಚಿದೆ. ಇದಕ್ಕೆ ಸಂಘಟನೆಯ ಕೊರತೆಯೇ ಕಾರಣ  ಎಂದರು

ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳು ಹೇಳಿದಂತೆ ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ. ಎರಡೂ ಒಂದೇ. ನಮ್ಮ ನಡುವಿನ ವ್ಯತ್ಯಾಸವೆಂದರೆ ವೀರಶೈವರೆಂದರೆ ಸಂಸ್ಕೃತ, ಲಿಂಗಾಯತರೆಂದರೆ ಕನ್ನಡ. ಜಾಗತಿಕ ಲಿಂಗಾಯತ ಮಹಾಸಭಾದವರು ನಮ್ಮನ್ನು ಏನು ಟೀಕಿಸಿದರೂ ಅದಕ್ಕೆ ತಲೆ ಕೆಡಿಸಿಕೊಳ್ಳುವುದು ಬೇಡವೆಂದು ಶಂಕರ ಬಿದರಿ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ, ಲಿಂಗಾಯಿತ ಮಹಾಸಭಾರಾಜ್ಯ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜು, ಹಿರೇಮಠಾಧ್ಯಕ್ಷ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಬೆಟ್ಟದಳ್ಳಿ ಚಂದ್ರಶೇಖರ ಸ್ವಾಮೀಜಿ, ದೊಡ್ಡಗುಣಿ ಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಅಂಕನಹಳ್ಳಿ ಮಠದ ಡಾ. ಶಿವರುದ್ರಶಿವಾಚಾರ್ಯ ಸ್ವಾಮೀಜಿ, ಮಹಾ ಸಭಾದ ಜಿಲ್ಲಾಧ್ಯಕ್ಷ ಡಾ.ಎಸ್‌. ಪರಮೇಶ್‌, ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...