ತುಮಕೂರು | ಮಹಿಳೆಯ ಕೊಲೆ: ಮೃತದೇಹವನ್ನು ಕತ್ತರಿಸಿ ರಸ್ತೆಯುದ್ದಕ್ಕೂ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Date:

ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಯುದ್ದಕ್ಕೂ ಎಸೆದು ವಿಕೃತಿ ಮೆರೆದಿರುವ ಭೀಕರ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದೆ.

- Advertisement -

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಸಮೀಪದ ಮುತ್ಯಾಲಮ್ಮ ದೇವಾಲಯದ ಬಳಿ ಈ ಭೀಕರ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಲಿಂಗಾಪುರದ ಸೇತುವೆ ಬಳಿ ಮಹಿಳೆಯ ಕೊಲೆಯಾದ ಬಳಿಕ ಹೊಟ್ಟೆಯ ಭಾಗ, ಚಿಂಪುಗಾನಹಳ್ಳಿ ಸೇತುವೆ ಬಳಿ ಕರುಳು, ಕೈ ಮತ್ತು ಮುತ್ಯಾಲಮ್ಮ ದೇವಾಲಯದ ಎದುರು ಮತ್ತೊಂದು ಕೈನ ಭಾಗಗಳು ಕಾಣಿಸಿಕೊಂಡಿವೆ. ಇದರ ಜತೆಗೆ ಗರುಡಚಲ ನದಿ ದಡದಲ್ಲಿ ಮೂಟೆಯೊಂದು ಪತ್ತೆಯಾಗಿದೆ. ಬೇರೆ ಕಡೆ ಕೊಲೆ ಮಾಡಿದ್ದು, ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೂಟೆಯಲ್ಲಿ ತುಂಬಿ ಎಸೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಆರಂಭದಲ್ಲಿ ದೇಹದ ಭಾಗಗಳು ಮಹಿಳೆಯದ್ದ, ಪುರುಷನದ್ದ ಎಂದು ಹುಡುಕಾಟ ನಡೆಸಲಾಗಿತ್ತು. ಕೈ, ಹೊಟ್ಟೆ ಭಾಗ, ಕರುಳಿನ ಭಾಗಗಳು ಸಿಕ್ಕಿವೆ. ಶವದ ವಾಸನೆ ಬಂದ ಹಿನ್ನೆಲೆ ಸ್ಥಳೀಯರು ದೂರು ನೀಡಿದ್ದರು.

ಮಹಿಳೆಯ ಕೊಲೆ ಮಾಡಿದ ನಂತರ ಮೃತ ದೇಹವನ್ನು ತುಂಡು ತುಂಡಾಗಿ ಬೇರ್ಪಡಿಸಿ ಕೈಕಾಲು ಒಂದು ಕಡೆ, ಹೃದಯದ ಭಾಗ ಮತ್ತೊಂದು ಕಡೆ, ಹೊಟ್ಟೆ ಮತ್ತು ಕರುಳಿನ ಭಾಗ ಇನ್ನೊಂದು ಕಡೆ, ತಲೆಬುರುಡೆ ಮತ್ತು ಮುಖವೇ ಕಾಣದಂತೆ ಕತ್ತರಿಸಿ ಕಪ್ಪು ಬಣ್ಣದ ಕವರ್‌ನಲ್ಲಿ ಹಾಕಿ ರಸ್ತೆಯುದ್ದಕ್ಕೂ ಎಸೆಯಲಾಗಿದೆ.

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಹೇಳಿಕೆ ನೀಡಿದ್ದು, “ಬೆಳಿಗ್ಗೆ 8.30ಸುಮಾರಿಗೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ಬಗ್ಗೆ ಮಾಹಿತಿ ಬಂದ ಪ್ರಕಾರ ಹೊಳವನಹಳ್ಳಿ ಹೋಬಳಿಯ ಲಿಂಗಾಪುರ, ಚಿಂಪುಗಾನಹಳ್ಳಿ ಗ್ರಾಮಗಳಲ್ಲಿನ ರಸ್ತೆ ಪಕ್ಕದ ಜಮೀನುಗಳಲ್ಲಿ ಮನುಷ್ಯನ ಕೈ, ಹೊಟ್ಟೆಭಾಗದ ಕತ್ತರಿಸಿ ಭಾಗಗಳು ಸಿಕ್ಕಿವೆ. ಅವುಗಳನ್ನು ಎಫ್‌ಎಸ್‌ಐಗೆ ಕಳುಹಿಸಲಾಗಿದೆ. ದೇಹ ಗುರುತುಪಡಿಸಲ್ಲಾಗಿಲ್ಲ, ಇದು ಯಾವಾಗ ತಂದು ಹಾಕಿರುವುದು ಎಂಬುದೂ ತಿಳಿದುಬಂದಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದ ಆರೋಪಿ

“ತಕ್ಷಣ ತನಿಖೆ ಚುರುಕುಗೊಳಿಸಿ ಅದಷ್ಟು ಬೇಗ ಆರೋಪಿಯನ್ನು ಪತ್ತೆಹಚ್ಚಿ, ನಡೆದಿರುವ ಘಟನೆ ಬಗ್ಗೆ ತಿಳಿಸುತ್ತೇವೆ. ಸದ್ಯಕ್ಕೆ ಅದು ಮಹಿಳೆ ಅಥವಾ ಪುರುಷನ ದೇಹವೇ ಎಂಬುದು ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಮಹಿಳೆಯ ದೇಹದ ಭಾಗಗಳೆಂದು ಕಂಡುಬಂದಿದೆ. ಜಿಲ್ಲೆ ಸೇರಿದಂತೆ ಹೊರರಾಜ್ಯ ಆಂದ್ರಪ್ರದೇಶದ ಕಾಣೆಯಾದ ಪ್ರಕರಣಗಳ ಬಗ್ಗೆ ತಿಳಿದುಕೊಂಡು ಹೆಚ್ಚಿನ ತನಿಖೆ ನಡೆಸಿ, ಎಫ್‌ಎಸ್‌ಇ ವರದಿಗಳು ಬಂದ ನಂತರ ಹಚ್ಚಿನ ಮಾಹಿತಿಯನ್ನು ನೀಡಲಾಗುತ್ತದೆ, ದೇಹದ ಬಿಡಿ ಭಾಗಗಳು ಸಿಕ್ಕಿರುವುದು ಕಂಡರೆ ಈ ಕೃತ್ಯ ನಡೆದು ಸುಮಾರು ಆರೇಳು ದಿನಗಳಾಗಿರುವ ಶಂಕೆ ಇದೆ” ಎಂದು ಹೇಳಿದರು.

ಘಟನಾ ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್, ತಿಪಟೂರು ಡಿವೈಎಸ್‌ಪಿ ಕುಮಾರಶರ್ಮ, ಕೊರಟಗೆರೆ ಸಿಪಿಐ ಅನಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...