ತುಮಕೂರು | ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ : ಟಿ. ಬಿ. ಜಯಚಂದ್ರ

Date:

ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಈ ನಿಟ್ಟಿನಲ್ಲಿ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿ-ನೌಕರರು ಶ್ರಮಿಸಬೇಕು ಎಂದು ನವದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಕರೆ ನೀಡಿದರು. 

- Advertisement -

 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಶುಕ್ರವಾರ ನಗರದ ಜಿಲ್ಲಾ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಅನುಮೋದನಾ ಪತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಅಧಿಕಾರಿ-ನೌಕರರು ಹಿಂದುಳಿಯಬಾರದು. ಪಂಚಾಯತಿ ವ್ಯಾಪ್ತಿಯ ಜನರು ಉದ್ಯೋಗವಿಲ್ಲದೆ ಹಸಿವಿನಿಂದ ಬಳಲಬಾರದೆಂಬ ದೃಷ್ಟಿಯಿಂದ ಮಾಜಿ ಪ್ರಧಾನಿ ದಿ. ಮನ್‌ಮೋಹನ್ ಸಿಂಗ್ ಅವರು ಜಾರಿಗೆ ತಂದಿರುವ “ಮಹಾತ್ಮಗಾಂಧಿ ಉದ್ಯೋಗ ಖಾತ್ರಿ(ನರೇಗಾ)” ಯೋಜನೆಯಿಂದ ಎಷ್ಟೋ ಬಡಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಪಾರಾಗಿವೆ. ನರೇಗಾದಂತಹ ವಿಶೇಷ ಯೋಜನೆ ಜಾರಿಗೆ ಸಂಬಂಧಿಸಿದಂತೆ ಪ್ರಾರಂಭದಲ್ಲಿ ಹಲವಾರು ಟೀಕೆಗಳು ವ್ಯಕ್ತವಾದರೂ ಯೋಜನೆ ಯಶಸ್ವಿಯಾಗಿ ಅನುಷ್ಟಾನವಾಗುತ್ತಿದೆ. ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 750 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿಗಳನ್ನು ಅನುಷ್ಠಾನ ಮಾಡುತ್ತಿರುವುದು ಯೋಜನೆಯ ಯಶಸ್ಸಿಗೆ ನಿದರ್ಶನವಾಗಿದೆ. ಬಡವರಿಗೆ, ನಿರ್ಗತಿಕರಿಗೆ ಈ ಯೋಜನೆ ಶಕ್ತಿ ನೀಡಿದೆ ಎಂದು ತಿಳಿಸಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದ್ದು, ಶಾಲಾಭಿವೃದ್ದಿ ಕಾಮಗಾರಿಗಳಾದ ಕಾಂಪೌಂಡ್, ಶೌಚಾಲಯ, ಆಟದ ಮೈದಾನ, ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳಾದ ಚರಂಡಿ, ರಸ್ತೆ, ಅಂಗನವಾಡಿ, ಆಸ್ಪತ್ರೆಗಳನ್ನು ಅಭಿವೃದ್ದಿ ಪಡಿಸುವ ಮೂಲಕ ಜಿಲ್ಲೆಯು ರಾಜ್ಯದಲ್ಲಿ ಮಾದರಿಯಾಗಿದೆ ಎಂದು ತಿಳಿಸಿದರು. 

1001114449

ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 766 ಸಿಬ್ಬಂದಿಯವರಿಗೆ ಅನುಮೋದನೆ ಪತ್ರ ನೀಡುವ ಮೂಲಕ ಖಾಯಂಗೊಳಿಸಿರುವುದಕ್ಕೆ ಜಿಲ್ಲಾ ಪಂಚಾಯತಿಗೆ ಅಭಿನಂದಿಸುತ್ತೇನೆ. ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ 766 ಜನಕ್ಕೆ ಅನುಮೋದನಾ ಪತ್ರ ನೀಡಿರುವುದು ಜಿಲ್ಲೆಗೆ ಹೆಮ್ಮೆ ತಂದಿದೆ. ಇತರೆ ಜಿಲ್ಲೆಗಳಲ್ಲಿಯೂ ಇಂತಹ ಕಾರ್ಯಕ್ರಮ ಏರ್ಪಡಿಸಿ ಪಂಚಾಯತಿ ನೌಕರರಿಗೆ ಅನುಮೋದನೆ ಪತ್ರ ನೀಡುವಂತಾಗಬೇಕು ಎಂದು ತಿಳಿಸಿದರು. 

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ  ಲಭಿಸಿ 77 ವರ್ಷಗಳು ಕಳೆದಿದ್ದರೂ ದೇಶದ ಎಲ್ಲಾ ಗ್ರಾಮಗಳು ಅಭಿವೃದ್ಧಿಯಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಸಿಕ್ಕಿದಂತಾಗುತ್ತದೆ. ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನಾವೆಲ್ಲಾ ನನಸು ಮಾಡಬೇಕು. ಅಧಿಕಾರ ವಿಕೇಂದ್ರೀಕರಣಕ್ಕಾಗಿ ಪಂಚಾಯತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿ-ನೌಕರರು ಗ್ರಾಮವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ಬೇಸಿಗೆ ಸಮೀಪಿಸಿರುವುದರಿಂದ ತಮ್ಮ ವ್ಯಾಪ್ತಿಯ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಸಲಹೆ ನೀಡಿದರು. 

 ಗ್ರಾಮದ ಆರೋಗ್ಯ, ಮಕ್ಕಳ ಶಿಕ್ಷಣ, ಕ್ರೀಡೆ, ಸ್ವಚ್ಛತೆಯತ್ತ ಗಮನಹರಿಸಬೇಕು. ಸ್ವಾಸ್ಥ ಗ್ರಾಮವನ್ನಾಗಿ ರೂಪಿಸಬೇಕು. ಸಕಾಲದಲ್ಲಿ ತೆರಿಗೆ ಸಂಗ್ರಹಿಸಿ ಗ್ರಾಮ ಪಂಚಾಯತಿಯನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು ಎಂದು ತಿಳಿಸಿದರು. 

 ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಕುಡಿಯುವ ನೀರು, ಚರಂಡಿ, ರಸ್ತೆ, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪಂಚಸೂತ್ರಗಳಡಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಪಂಚಾಯತಿ ಮಟ್ಟದಲ್ಲಿ 90 ಕೋಟಿ ರೂ.ಗಳನ್ನು ವೆಚ್ಚದಲ್ಲಿ 9ಲಕ್ಷ ಮೀಟರ್ ಚರಂಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ 63 ಕೋಟಿ ರೂ. ವೆಚ್ಚದಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ 2017ರ ಅಕ್ಟೋಬರ್ 31ರ ಪೂರ್ವದಲ್ಲಿ ಸ್ವಚ್ಛತಾಗಾರರು, ನೀರು ವಿತರಕರು, ಜವಾನರು, ಕರ ವಸೂಲಿಗಾರರು, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 766 ಸಿಬ್ಬಂದಿಗಳಿಗೆ ಇಂದು ಅನುಮೋದನೆ ಪತ್ರ ನೀಡಲಾಗುತ್ತಿದೆ ಎಂದು ತಿಳಿಸಿದರಲ್ಲದೆ, ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಸಲುವಾಗಿ 16 ಕ್ರೀಡೆಗಳಿಗೆ ಸಂಬಂಧಿಸಿದಂತೆ 30 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು. 

1001114450

ಕಾರ್ಯಕ್ರಮದಲ್ಲಿ ಅಥ್ಲೆಟಿಕ್, ವಾಲಿಬಾಲ್, ಪುಟ್ ಬಾಲ್, ಕುಸ್ತಿ, ಟೈಪೊಂಡು, ಶೂಟಿಂಗ್, ಕಬ್ಬಡ್ಡಿ, ಖೋಖೋ ಸೇರಿದಂತೆ ಕ್ರೀಡಾ ಪಟುಗಳಿಗೆ ವಿವಿಧ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಿ, ಕ್ರೀಡಾ ಪೋಷಕರು ಹಾಗೂ ತರಬೇತುದಾರರನ್ನು ಸನ್ಮಾನಿಸಲಾಯಿತು.

ನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಮಾಡಿರುವ ಉತ್ತಮ ತಾಲ್ಲೂಕು, ಅನುಷ್ಠಾನ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಟಿಕೃಷ್ಣಪ್ಪ, ಅಥ್ಲೆಟಿಕ್ಸ್ ಮುಖ್ಯಸ್ಥ ಪ್ರಭಾಕರ್, ಕಬಡ್ಡಿ ಅಸೋಸಿಯೇಷನ್ಸ್ ಕೃಷ್ಣೇಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಅಭಿವೃದ್ಧಿ), ಉಪ ಕಾರ್ಯದರ್ಶಿ (ಆಡಳಿತ), ಯೋಜನಾ ನಿರ್ದೇಶಕರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯತಿ ಅಧ್ಯಕ್ಷ/ಉಪಾಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...