ತುಮಕೂರು | 14,360 ಬಿಪಿಎಲ್ ಕಾರ್ಡ್‌ಗಳಿಗೆ ಕೋಕ್, ಅರ್ಹರ ಹೊಸ ಅರ್ಜಿಗಳಿಗಿಲ್ಲ ಸ್ಪಂದನೆ

Date:

ತುಮಕೂರು ಜಿಲ್ಲೆಯಲ್ಲಿ ಪಡಿತರ ಚೀಟಿಗಳ ಪರಿಶೀಲನೆ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದಾಯ ಮಿತಿ ಮೀರಿದವರು, ಅಧಿಕ ಜಮೀನು ಹೊಂದಿರುವವರು ಹಾಗೂ ನಕಲಿ ಕಾರ್ಡ್‌ದಾರರ ಕಾರ್ಡ್‌ಗಳು ರದ್ದಾಗುತ್ತಿದ್ದರೂ, ನಿಜವಾದ ಫಲಾನುಭವಿಗಳ ಅಹವಾಲುಗಳಿಗೂ ಇಲಾಖೆ ಸ್ಪಂದಿಸಬೇಕಿದೆ, ಈ ನಡುವೆ 6,501 ಹೊಸ ಪಡಿತರ ಚೀಟಿ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿರುವುದು ವ್ಯವಸ್ಥೆಯ ಮತ್ತೊಂದು ಮುಖವನ್ನು ತೆರೆದಿಟ್ಟಿದೆ.

- Advertisement -

ಅನ್ನಭಾಗ್ಯದ ಅಕ್ಕಿ ಪಡೆಯುವ ಹಕ್ಕು ಕಳೆದುಕೊಂಡ ಸಾವಿರಾರು ಕುಟುಂಬಗಳು; ಅರ್ಹತೆ ಸಾಬೀತುಪಡಿಸಿ ಮತ್ತೆ ಬಿಪಿಎಲ್ ಪಟ್ಟಿಗೆ ಮರಳಿದ ನೂರಾರು ಮಂದಿ ಇದ್ದು, ಒಂದೆಡೆ ಅನರ್ಹ ಪಡಿತರ ಚೀಟಿಗಳ ಬೇಟೆ ನಡೆಯುತ್ತಿದೆ. ಮತ್ತೊಂದೆಡೆ ಅರ್ಹ ಕುಟುಂಬಗಳು ಹೊಸ ಕಾರ್ಡ್‌ಗಾಗಿ ವರ್ಷಗಳಿಂದ ಕಾದು ಕುಳಿತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅರ್ಹತೆ ಮೀರಿದ ಕಾರಣಕ್ಕೆ ಜಿಲ್ಲೆಯಲ್ಲಿ ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ ಮತ್ತು ರದ್ದುಪಡಿಸುವ ಪ್ರಕ್ರಿಯೆ ಮುಂದುವರಿದಿದ್ದು, ಇದುವರೆಗೆ 14,360 ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ ಎಪಿಎಲ್‌ಗೆ ಪರಿವರ್ತಿಸಲಾಗಿದೆ. ಆದರೆ, ಆರ್ಥಿಕವಾಗಿ ದುರ್ಬಲರಾಗಿದ್ದರೂ ಕಾರ್ಡ್ ಕಳೆದುಕೊಂಡ ಕುಟುಂಬಗಳ ಮನವಿಗೆ ಸ್ಪಂದಿಸಿರುವ ಅಧಿಕಾರಿಗಳು 715 ಪಡಿತರ ಚೀಟಿಗಳನ್ನು ಮರುಚಾಲನೆಗೊಳಿಸಿದ್ದಾರೆ.

ಸದ್ಯ ಜಿಲ್ಲೆಯಲ್ಲಿ 6,22,869 ಪಡಿತರ ಚೀಟಿಗಳು ಚಾಲ್ತಿಯಲ್ಲಿದ್ದು, 22.02 ಲಕ್ಷ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪಡೆಯುತ್ತಿದ್ದಾರೆ.

ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷ ಮೀರಿದ್ದರೆ, ನಾಲ್ಕು ಚಕ್ರದ ವಾಹನ ಹೊಂದಿದ್ದರೆ, ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಹಾಗೂ 7.5 ಎಕರೆಗಿಂತ ಹೆಚ್ಚು ಜಮೀನು ಹೊಂದಿದ್ದರೆ ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸುವ ಮಾನದಂಡವನ್ನು ಅನುಸರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಆದಾಯ ಮಿತಿ ಮೀರಿದ ಕಾರಣಕ್ಕೆ 12,970 ಕಾರ್ಡ್‌ಗಳು ರದ್ದಾಗಿವೆ. 7.5 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವ 385 ಕಾರ್ಡ್‌ಗಳು ಹಾಗೂ 331 ನಕಲಿ ಕಾರ್ಡ್‌ಗಳು ಪರಿಶೀಲನೆ ವೇಳೆ ಪತ್ತೆಯಾಗಿವೆ.

ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ಪರಿವರ್ತಿಸುವಲ್ಲಿ ತುಮಕೂರು ತಾಲೂಕು ಅತಿ ಹೆಚ್ಚು 3,578 ಕಾರ್ಡ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿರುವ ಕುಣಿಗಲ್‌ನಲ್ಲಿ 1,903 ಕಾರ್ಡ್‌ಗಳನ್ನು ಎಪಿಎಲ್‌ಗೆ ಪರಿವರ್ತಿಸಲಾಗಿದ್ದು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಜಿಲ್ಲೆಯಾದ್ಯಂತ ಪಡಿತರ ಚೀಟಿಗಳ ಅರ್ಹತೆ ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಮೃತಪಟ್ಟ ಫಲಾನುಭವಿಗಳ ಪೈಕಿ 20,129 ಹೆಸರುಗಳನ್ನು ಪಡಿತರ ಚೀಟಿಗಳಿಂದ ತೆಗೆದುಹಾಕಲಾಗಿದೆ. ಇನ್ನೂ 2,299 ಹೆಸರುಗಳನ್ನು ಡಿಲೀಟ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.

ಬಿಪಿಎಲ್ ಕಾರ್ಡ್ ರದ್ದಾದ ಬಳಿಕ ತಾವು ಆರ್ಥಿಕವಾಗಿ ದುರ್ಬಲರಾಗಿದ್ದು, ಕಾರ್ಡ್ ರದ್ದುಪಡಿಸಿರುವುದು ಸರಿಯಲ್ಲ ಎಂದು 769 ಮಂದಿ ತಹಶೀಲ್ದಾರ್‌ಗಳಿಗೆ ಮನವಿ ಸಲ್ಲಿಸಿದ್ದರು. ಅರ್ಜಿದಾರರು ಪೂರಕ ದಾಖಲೆಗಳನ್ನು ಸಲ್ಲಿಸಿದ ಬಳಿಕ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆಯಲ್ಲಿ ಕುಟುಂಬ ಆರ್ಥಿಕವಾಗಿ ಹಿಂದುಳಿದಿರುವುದು ಹಾಗೂ ಆದಾಯ ತೆರಿಗೆ ಪಾವತಿದಾರರಲ್ಲ ಎಂಬುದು ದೃಢಪಟ್ಟ ಪ್ರಕರಣಗಳಲ್ಲಿ ಕಾರ್ಡ್‌ಗಳನ್ನು ಮರುಚಾಲನೆಗೊಳಿಸಲಾಗಿದೆ. 2025-26ನೇ ಸಾಲಿನಲ್ಲಿ 412 ಹಾಗೂ 2026-27ನೇ ಸಾಲಿನಲ್ಲಿ 303 ಸೇರಿ ಒಟ್ಟು 715 ಕಾರ್ಡ್‌ಗಳನ್ನು ಮರುಸ್ಥಾಪಿಸಲಾಗಿದೆ. ಇನ್ನೊಂದೆಡೆ, ಅರ್ಹ ಕುಟುಂಬಗಳಿಗೆ ಹೊಸ ಪಡಿತರ ಚೀಟಿ ಪಡೆಯುವ ನಿರೀಕ್ಷೆಯೂ ಇನ್ನೂ ಮುಗಿದಿಲ್ಲ. 2022-23ರಲ್ಲಿ ಕೊನೆಯದಾಗಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನಾಲ್ಕು ವರ್ಷ ಕಳೆದರೂ ಸಾವಿರಾರು ಅರ್ಜಿಗಳು ಇನ್ನೂ ವಿಲೇವಾರಿಗಾಗಿ ಕಾಯುತ್ತಿವೆ.

ಜಿಲ್ಲೆಯಲ್ಲಿ ಒಟ್ಟು 39,698 ಅರ್ಜಿಗಳು ಸಲ್ಲಿಕೆಯಾಗಿದ್ದು, 22,247 ಅರ್ಜಿಗಳಿಗೆ ಅನುಮೋದನೆ ದೊರೆತಿದೆ. ಈ ಪೈಕಿ 14,685 ಅರ್ಜಿಗಳು ಸ್ವೀಕೃತಗೊಂಡಿವೆ. ಇನ್ನೂ 2,640 ಬಿಪಿಎಲ್ ಹಾಗೂ 3,861 ಎಪಿಎಲ್ ಸೇರಿ ಒಟ್ಟು 6,501 ಅರ್ಜಿಗಳು ವಿಲೇವಾರಿಗಾಗಿ ಬಾಕಿ ಉಳಿದಿವೆ.

ಈ ಕುರಿತು ಈದಿನ.ಕಾಮ್ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಮಾರುತೇಶ್ ಕಾಸಪುರ, “ತುಮಕೂರು ಜಿಲ್ಲೆಯಲ್ಲಿ ಹೊಸ ಪಡಿತರ ಚೀಟಿಗಾಗಿ ಸಲ್ಲಿಕೆಯಾಗಿರುವ 6,501 ಅರ್ಜಿಗಳು ಬಾಕಿ ಇದ್ದು, ಅವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಬಾಕಿ ಅರ್ಜಿಗಳನ್ನು ಶೀಘ್ರ ಪರಿಶೀಲಿಸಿ ಅರ್ಹ ಅರ್ಜಿದಾರರಿಗೆ ಪಡಿತರ ಚೀಟಿ ವಿತರಿಸಬೇಕು. ಇದರಿಂದ ಅರ್ಜಿದಾರರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ” ಎಂದು ತಿಳಿಸಿದರು.

ಒಂದೆಡೆ ಸರ್ಕಾರದ ಮಾನದಂಡಗಳನ್ನು ಮೀರುವವರ ಬಿಪಿಎಲ್ ಕಾರ್ಡ್‌ಗಳನ್ನು ಗುರುತಿಸಿ ಎಪಿಎಲ್‌ಗೆ ಪರಿವರ್ತಿಸಲಾಗುತ್ತಿದ್ದರೆ, ಮತ್ತೊಂದೆಡೆ ನಿಜವಾದ ಅರ್ಹರು ಹೊಸ ಪಡಿತರ ಚೀಟಿಗಾಗಿ ವರ್ಷಗಳಿಂದ ಕಾಯುತ್ತಿರುವುದು ಗಮನಾರ್ಹವಾಗಿದೆ. ಹೀಗಾಗಿ ಅನರ್ಹರ ಕಾರ್ಡ್‌ಗಳ ತೆರವು ಜತೆಗೆ ಅರ್ಹರ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕಿದೆ.

WhatsApp Image 2024 02 22 at 5.42.38 PM
ಚಂದನ್ ಡಿ ಎನ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ...

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ...

ಬೆಂಗಳೂರು | SIR ವಿರುದ್ಧ ಮೊಳಗಿದ ಘೋಷ; ಪ್ರಜಾತಂತ್ರದ ಉಳಿವಿಗಾಗಿ ‘ಜನತಾ ಮೆರವಣಿಗೆ’

ದೇಶದ ಮತದಾರರ ಮೇಲೆ ಗ್ಯಾನೇಶ್ ಕುಮಾರ್ (ಚುನಾವಣಾ ಆಯೋಗ) ಹೇರಿರುವ ಎಸ್‌ಐಆರ್...

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ...