ಅಮಾನಿಕೆರೆಯಲ್ಲಿ ಜಲಕ್ರೀಡೆಯ ಹೊಸ ಅಲೆ: ಮಿನಿ ಒಲಿಂಪಿಕ್ಸ್‌ಗೆ ತುಮಕೂರು ಮಕ್ಕಳು ಸಜ್ಜು

Date:

ತುಮಕೂರು ನಗರದ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ಹೆಜ್ಜೆಯಿಟ್ಟಿದ್ದು, ಕಯಾಕಿಂಗ್–ಕನೋಯಿಂಗ್ ಕ್ರೀಡೆಯಲ್ಲಿ ಜಿಲ್ಲೆಯ ಪ್ರತಿಭಾವಂತ ಮಕ್ಕಳನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಿಗೆ ಸಜ್ಜುಗೊಳಿಸಲು ತರಬೇತಿ ಅಕಾಡೆಮಿಯನ್ನು ಆರಂಭಿಸಿದೆ.

- Advertisement -

ಜಿಲ್ಲಾಡಳಿತದ ವತಿಯಿಂದ 2026ರ ಮಾರ್ಚ್ 15ರಂದು ಆರಂಭಿಸಲಾದ ಕಯಾಕಿಂಗ್–ಕನೋಯಿಂಗ್ ತರಬೇತಿ ಅಕಾಡೆಮಿಗೆ ಕರ್ನಾಟಕ ಸ್ಟೇಟ್ ಒಲಿಂಪಿಕ್ಸ್ ಅಸೋಸಿಯೇಷನ್ (ಕೆಎಸ್‌ಒಎ) ಕಾರ್ಯದರ್ಶಿಗಳು ವಿಶೇಷ ಆಸಕ್ತಿ ತೋರಿದ್ದಾರೆ. ತುಮಕೂರು ಜಿಲ್ಲೆಯಿಂದ ಈ ಜಲಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳ ತಂಡವನ್ನು ರೂಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಉಪಮುಖ್ಯಮಂತ್ರಿಗಳು ಹಾಗೂ ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಅಮಾನಿಕೆರೆಯನ್ನು ಸೆಂಟರ್ ಆಫ್ ಎಕ್ಸಲೆನ್ಸ್ ಎಂದು ಘೋಷಿಸಿರುವುದು ಜಿಲ್ಲೆಯ ಕ್ರೀಡಾ ಅಭಿವೃದ್ಧಿಗೆ ಮತ್ತಷ್ಟು ಬಲ ನೀಡಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳನ್ನು ಜಲಕ್ರೀಡೆಗಳತ್ತ ಆಕರ್ಷಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ಕಳೆದ 15 ದಿನಗಳಿಂದ 10ರಿಂದ 14 ವರ್ಷದ ಮಕ್ಕಳಿಗೆ ಕಯಾಕಿಂಗ್–ಕನೋಯಿಂಗ್ ತರಬೇತಿ ನೀಡಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿರುವ ತರಬೇತುದಾರರು ತುಮಕೂರಿನಲ್ಲಿಯೇ ವಾಸ್ತವ್ಯ ಹೂಡಿ, ಪ್ರತಿದಿನ ಬೆಳಿಗ್ಗೆ 7 ಗಂಟೆಗೆ ಹಾಗೂ ಸಂಜೆ 4ರಿಂದ 6 ಗಂಟೆಯವರೆಗೆ ಎರಡು ಬ್ಯಾಚ್‌ಗಳಲ್ಲಿ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ.

ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಈ ವಿಶಿಷ್ಟ ಜಲಕ್ರೀಡೆಗಳ ಬಗ್ಗೆ ಆಸಕ್ತಿ ತೋರುತ್ತಿದ್ದಾರೆ. ಪ್ರಸ್ತುತ ತರಬೇತಿ ಪಡೆಯುತ್ತಿರುವ ಮಕ್ಕಳು ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯಲಿರುವ ಮಿನಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಸುಮಾರು 8 ಎಕರೆ ವಿಸ್ತೀರ್ಣದ ಅಮಾನಿಕೆರೆಯನ್ನು ಸ್ವಚ್ಛಗೊಳಿಸಿ, ಕಯಾಕಿಂಗ್–ಕನೋಯಿಂಗ್ ತರಬೇತಿಗೆ ಸೂಕ್ತ ಕೇಂದ್ರವಾಗಿ ಅಭಿವೃದ್ಧಿಪಡಿಸುವುದು ಜಿಲ್ಲಾಡಳಿತದ ಉದ್ದೇಶವಾಗಿದೆ. ಇದಕ್ಕಾಗಿ ಅಗತ್ಯ ದೋಣಿಗಳು, ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ತರಬೇತುದಾರರ ಸೇವೆ ಹಾಗೂ ಇತರ ಮೂಲಸೌಕರ್ಯಗಳನ್ನು ಒದಗಿಸಲು ಜಿಲ್ಲಾಡಳಿತ ಸಿದ್ಧವಿದೆ.

ಮಕ್ಕಳಿಗೆ ಗುಣಮಟ್ಟದ ತರಬೇತಿ ನೀಡುವ ಮೂಲಕ ಭವಿಷ್ಯದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಸಾಮರ್ಥ್ಯವುಳ್ಳ ಕ್ರೀಡಾಪಟುಗಳನ್ನು ರೂಪಿಸುವ ಗುರಿಯನ್ನು ಹೊಂದಲಾಗಿದೆ.

ತುಮಕೂರು ಜಿಲ್ಲೆಯನ್ನು ಶೈಕ್ಷಣಿಕ ಕ್ಷೇತ್ರದ ಜತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ಮಾದರಿಯನ್ನಾಗಿ ರೂಪಿಸುವುದು ಜಿಲ್ಲಾಡಳಿತದ ಆಶಯವಾಗಿದೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಬೆಂಗಳೂರಿನಿಂದ ತರಬೇತುದಾರರು ಪ್ರತಿದಿನ ಮುಂಜಾನೆ ಪ್ರಯಾಣಿಸಿ ಅಮಾನಿಕೆರೆಯಲ್ಲಿ ಮಕ್ಕಳಿಗೆ ತರಬೇತಿ ನೀಡುತ್ತಿರುವುದು ಈ ಕ್ರೀಡೆಯ ಬೆಳವಣಿಗೆಯ ಬಗೆಗಿನ ಅವರ ಬದ್ಧತೆಯನ್ನು ತೋರಿಸುತ್ತದೆ. ಜಲಕ್ರೀಡೆಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ, ಮಕ್ಕಳಿಗೆ ಉತ್ತಮ ತರಬೇತಿ ಒದಗಿಸುವ ಮೂಲಕ ತುಮಕೂರಿನಲ್ಲಿ ಕ್ರೀಡಾ ಪ್ರತಿಭೆಗಳನ್ನು ಬೆಳೆಸಲು ಈ ಅಕಾಡೆಮಿ ಸಹಕಾರಿಯಾಗುವ ನಿರೀಕ್ಷೆಯಿದೆ.

ಈ ಯೋಜನೆ ಯಶಸ್ವಿಯಾಗಲು ಸಾರ್ವಜನಿಕರು, ಪೋಷಕರು, ಶಿಕ್ಷಣ ಸಂಸ್ಥೆಗಳು ಹಾಗೂ ಕ್ರೀಡಾಸಕ್ತರು ಕೈಜೋಡಿಸಬೇಕು ಎಂದು ಜಿಲ್ಲಾಡಳಿತ ಕೋರಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ : ತುಮಕೂರು ಜಿಲ್ಲೆಯಲ್ಲಿ ಶೇ.71.56 ಮತದಾನ

 ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ತುಮಕೂರು...

ಅಧಿಕಾರದ ಅಂಕಗಣಿತ vs ಸಂಘಟನೆಯ ರಸಾಯನ: ಪದವೀಧರರ ಮತ ಯಾರ ಕಡೆ?

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ನಾಳೆ (ಶುಕ್ರವಾರ) ನಡೆಯಲಿದೆ. ಆಡಳಿತಾರೂಢ...

ಗಜಪಡೆಯ ಗಾಂಭೀರ್ಯಕ್ಕೆ ತುಮಕೂರು ಫಿದಾ; ಜಂಬೂಸವಾರಿಗೆ ಜನಸಾಗರ

ಗಜಪಡೆಯ ಗಾಂಭೀರ್ಯ, ಅಂಬಾರಿಯಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ, ಭಕ್ತಿಯ ಪರವಶತೆಯಲ್ಲಿ ಮಿಂದೆದ್ದ...

ಗುಬ್ಬಿಯಲ್ಲಿ ಅರ್ಧಕ್ಕೆ ನಿಂತ ವೈಟ್ ಟಾಪಿಂಗ್ ರಸ್ತೆ: ಧೂಳು, ಗುಂಡಿಗಳ ನಡುವೆ ಜನರ ಪರದಾಟ

ಗುಬ್ಬಿ ಪಟ್ಟಣದ ಮುದುಗೆರೆ ಯಿಂದ ಹೇರೂರು ಚತುಷ್ಪಥ ರಸ್ತೆವರೆಗೆ ಕೈಗೆತ್ತಿಕೊಳ್ಳಲಾಗಿರುವ ವೈಟ್...