ಕುಣಿಗಲ್‌ ಬೈಪಾಸ್‌ನಲ್ಲಿ ಅಪಘಾತ: ಮಂಗಳೂರು ಉದ್ಯಮಿ ಸಾವು, ಪತ್ನಿಗೆ ಗಾಯ

Date:

ಕುಣಿಗಲ್‌ ತಾಲೂಕಿನ ಹೆರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ಅಪಘಾತ ಸಂಭವಿಸಿದ್ದು, ಕ್ಯಾಂಟರ್‌ ವಾಹನ ಹರಿದ ಪರಿಣಾಮ ಮಂಗಳೂರಿನ ರಿಯಲ್‌ ಎಸ್ಟೇಟ್‌ ಉದ್ಯಮಿ ಮಹಮ್ಮದ್ ಷರೀಫ್(60) ಮೃತಪಟ್ಟಿದ್ದು, ಅವರ ಪತ್ನಿ ಹಸೀನಾ(56) ಗಾಯಗೊಂಡಿದ್ದಾರೆ.

- Advertisement -

ಘಟನೆ ಸಂಬಂಧ ಈ ದಿನ.ಕಾಮ್‌ ಕುಣಿಗಲ್‌ ಪೊಲೀಸ್‌ ಠಾಣೆಗೆ ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, “ಷರೀಫ್‌ ಮತ್ತು ಅವರ ಪತ್ನಿ ನೆಲಮಂಗಲದಿಂದ ಮಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಹೆರೂರು ಹತ್ತಿರ ಬೈಕ್‌ ನಿಯಂತ್ರಣ ತಪ್ಪಿ, ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಅದೇ ವೇಳೆ ಹಿಂದೆ ಬರುತ್ತಿದ್ದ ಕ್ಯಾಂಟರ್‌ ವಾಹನ ಅವರ ಮೇಲೆ ಹರಿದಿದೆ. ಇದರ ಪರಿಣಾಮ ಷರೀಫ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರ ಪತ್ನಿ ಹಸೀನಾ ಅವರಿಗೆ ಕೈ ಮುರಿದಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕುಣಿಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಕುರಿತು ತನಿಖೆ ನಡೆಸಲಾಗುತ್ತಿದೆ. ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ(ಪೋಸ್ಟ್‌ ಮಾರ್ಟಮ್‌) ಮಾಡಿಸಿ, ಸಂಬಂಧಪಟ್ಟವರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದ್ದು, ಅವರು ಮೃತದೇಹವನ್ನು ಮಂಗಳೂರಿಗೆ ಕೊಂಡೊಯ್ದಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕೃಷಿ ಹೊಂಡದಲ್ಲಿ ಮುಳುಗಿ ನಾಲ್ಕು ಮಕ್ಕಳ ದುರ್ಮರಣ

ಹೆದ್ದಾರಿಯಲ್ಲಿ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತಗಳು ಸಾಮಾನ್ಯವಾಗಿರುವುದರಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...