ತುಮಕೂರು | 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಹಾಸ್ಟೆಲ್ ವಾರ್ಡನ್‌ ಅಮಾನತು

Date:

9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಆಕೆಯ ಚಲನವಲನ ಹಾಗೂ ಆರೋಗ್ಯದ ಬಗ್ಗೆ ಗಮನವಹಿಸದ ಹಾಸ್ಟೆಲ್‌ ವಾರ್ಡನ್‌ ನಿವೇದಿತಾ ಅವರನ್ನು ಅಮಾನತು ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಿವಾಸಿಯಾಗಿರುವ ವಿದ್ಯಾರ್ಥಿನಿ ತುಮಕೂರು ಜಿಲ್ಲೆಯ ಮಧುಗಿರಿಯ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು. ಆಕೆ 7 ತಿಂಗಳ ಗರ್ಭಿಣಿಯಾಗಿರುವುದು ಈಗ ಗೊತ್ತಾಗಿದೆ. ಆಕೆಯನ್ನು ಸರಿಯಾಗಿ ಗಮನಿಸದೆ, ಆಕೆ ಗರ್ಭಿಣಿಯಾಗಿದ್ದರು ಆ ಬಗ್ಗೆ ತಿಳಿದುಕೊಳ್ಳದ ವಾರ್ಡನ್‌ನನ್ನು ಅಮಾನತು ಮಾಡಲಾಗಿದೆ.

ಇತ್ತೀಚೆಗೆ, ವಿದ್ಯಾರ್ಥಿನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತನ್ನ ತಾಯಿಯೊಂದಿಗೆ ವಿದ್ಯಾರ್ಥಿನಿ ಆಸ್ಪತ್ರೆಗೆ ಹೋದಾಗ, ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಆಕೆಗೆ ಪರಿಚಿತನಿದ್ದ ಯುವಕನೇ ಆಕೆ ಗರ್ಭಿಣಿಯಾಗಲು ಕಾರಣವೆಂದು ಹೇಳಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಾಲಕಿಯ ಚಲನವಲನವನ್ನು ಗಮನಿಸದೆ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಹಾಸ್ಟೆಲ್ ವಾರ್ಡನ್‌ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತಿ ಸಿಇಒ ಜಿ ಪ್ರಭು ಆದೇಶ ಹೊರಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಸುಪ್ರೀಂ ಕೋರ್ಟ್ ಉಗಿದಿದ್ದನ್ನೇ ಮೋದಿ ಪ್ರಸಾದ ಎನ್ನುತ್ತಿರುವ ಬಿಜೆಪಿ!

ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಟ್ಟದ್ದೇ...

ಚಾಮರಾಜನಗರ | ಮತಗಟ್ಟೆ ಧ್ವಂಸ ಮಾಡಿದ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ...

ಮೋದಿಯ ನೆತ್ತಿಗೆ ಸುಪ್ರೀಂ ಕೋರ್ಟ್‌ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಸಿಕ್ತು ಪರಿಹಾರ: ದೇವನೂರು

"ಪ್ರಧಾನಿ ನರೇಂದ್ರ ಮೋದಿಯವರ ನೆತ್ತಿಗೆಗೆ ಸುಪ್ರೀಂಕೋರ್ಟ್ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಕೇಂದ್ರವು ಕರ್ನಾಟಕಕ್ಕೆ...

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....