ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

Date:

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ ಹೆಚ್ಚುತ್ತಿದ್ದು, ಶೇ.97ರಷ್ಟು ಅಂಕ ಗಳಿಸುವ ಮಟ್ಟಕ್ಕೆ ಮಕ್ಕಳು ತಲುಪಿರುವುದು ಶೈಕ್ಷಣಿಕ ಕ್ರಾಂತಿಯ ಸಂಕೇತವಾಗಿದೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದರು.

- Advertisement -

ಗುಬ್ಬಿ ಹೊರವಲಯದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರ 139ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಸ್ಸಿ, ಎಸ್ಟಿ ಸೇರಿದಂತೆ ಅಹಿಂದ ವರ್ಗಗಳ ಮಕ್ಕಳು ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ದೇಶದ ಪ್ರಗತಿಯ ಸೂಚಕವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಶಿಕ್ಷಣ ದೇಶದ ಅಭಿವೃದ್ಧಿಯ ಪ್ರಮುಖ ಸಾಧನವಾಗಿದ್ದು, ಶಿಕ್ಷಕರು ಉತ್ತಮ ನಾಗರಿಕರನ್ನು ರೂಪಿಸುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ದಾರಿ ತಪ್ಪುವ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಅವರನ್ನು ಉತ್ತಮ ಭವಿಷ್ಯದತ್ತ ಕೊಂಡೊಯ್ಯುವ ಮೂಲಕ ಸುಂದರ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಹೀಗಾಗಿ ಶಿಕ್ಷಕರನ್ನು ಗೌರವಿಸುವ ನಿಟ್ಟಿನಲ್ಲಿ ಶಿಕ್ಷಕರ ದಿನಾಚರಣೆ ಆಚರಿಸುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ತುಮಕೂರು ಹಿರೇಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶಿಕ್ಷಕ ವೃತ್ತಿಯನ್ನು ಕೇವಲ ಉದ್ಯೋಗವೆಂದು ಪರಿಗಣಿಸದೆ, ಸಮಾಜ ನಿರ್ಮಾಣದ ಪ್ರವೃತ್ತಿಯಾಗಿ ಸ್ವೀಕರಿಸಬೇಕು. ಶಿಕ್ಷಕ ವೃತ್ತಿಗೆ ಸಮಾಜದಲ್ಲಿ ಅಪಾರ ಗೌರವ ಮತ್ತು ವಿಶಿಷ್ಟ ಸ್ಥಾನವಿದೆ ಎಂದರು.

ಎಲ್ಲ ವರ್ಗದ ಜನರಿಗೂ ಶಿಕ್ಷಣ ತಲುಪುತ್ತಿರುವುದು ಸಂತಸದ ಸಂಗತಿ. ಶಿಕ್ಷಣ ಸಾರ್ವಜನಿಕ ಆಸ್ತಿಯಾಗಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪುತ್ತಿದ್ದು, ಕಳೆದ ಕೆಲವು ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರ ಸಾಕಷ್ಟು ಸುಧಾರಣೆ ಕಂಡಿದೆ ಎಂದು ತಿಳಿಸಿದರು. ಇದೇ ವೇಳೆ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಸರಳ ಹಾಗೂ ಬಡತನದ ಜೀವನದ ಕುರಿತು ವಿವರಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಇಲಾಖೆಯ ವಿವಿಧ ಕಾರ್ಯಕ್ರಮಗಳು, ಸರ್ಕಾರದಿಂದ ದೊರೆಯುತ್ತಿರುವ ಸೌಲಭ್ಯಗಳು ಹಾಗೂ ಗ್ರಾಮೀಣ ಭಾಗದಲ್ಲಿ ಕಂಡುಬರುತ್ತಿರುವ ಶೈಕ್ಷಣಿಕ ಪ್ರಗತಿ ಕುರಿತು ಮಾಹಿತಿ ನೀಡಿದರು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳ ಸಾಧನೆ ಹೆಚ್ಚುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಗುಬ್ಬಿ ವೀರಣ್ಣ ಟ್ರಸ್ಟ್ ಸದಸ್ಯ ಲಕ್ಷ್ಮಣ್ ದಾಸ್, ಪಪಂ ಮಾಜಿ ಸದಸ್ಯ ಜಿ.ಆರ್. ಶಿವಕುಮಾರ್, ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಬಿಆರ್‌ಸಿ ಮಧುಸೂದನ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವಿವಿಧ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕನಾಯಕನಹಳ್ಳಿ | ಬೀಡಿ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ: ಆರೋಪಿ ಬಂಧನ

ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಅಕ್ಟೋಬರ್ 13ರಂದು ನಡೆದಿದ್ದ...

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...