ಗುಬ್ಬಿ | ಬರ ವೀಕ್ಷಣೆ : ಯಡವನಹಳ್ಳಿಗೆ ಭೇಟಿ ನೀಡಿ ಕುಡಿಯುವ ನೀರು ಸೇರಿದಂತೆ ಸಮಸ್ಯೆ ಆಲಿಸಿದ ಡಿಸಿಎಂ ಪರಮೇಶ್ವರ್

Date:

ತುಮಕೂರು  ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬರ ವೀಕ್ಷಣೆ ಕೈಗೊಂಡಿರುವ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮಂಗಳವಾರ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ಮಾವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು.

- Advertisement -

ಯಡವನಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರಿಂದ ಮಾಹಿತಿ ಪಡೆದ ಅವರು, ಟಾಸ್ಕ್‌ಫೋರ್ಸ್ ಮೂಲಕ ತುರ್ತು ಕ್ರಿಯಾ ಯೋಜನೆಯಡಿ ಹೊಸ ಕೊಳವೆಬಾವಿ ಕೊರೆಸಿ, ಪೈಪ್‌ಲೈನ್ ಮೂಲಕ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಚಾಲನೆ ನೀಡಿದರು. ಅಲ್ಲದೆ, ನಳಗಳಿಗೆ ಕಟ್ಟೆ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ರೀತಿಯ ವಿಳಂಬ ಮಾಡದೆ ತುರ್ತು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸಿ, ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹಾರ ಒದಗಿಸಬೇಕು ಎಂದು ಡಾ. ಪರಮೇಶ್ವರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ವೇಳೆ ಗ್ರಾಮಸ್ಥರು ಗ್ರಾಮದ ಸಂಪರ್ಕ ರಸ್ತೆ ಸೇರಿದಂತೆ ವಿವಿಧ ಮೂಲಸೌಕರ್ಯಗಳ ಬೇಡಿಕೆಗಳನ್ನು ಉಪ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಗ್ರಾಮಸ್ಥರೊಂದಿಗೆ ಚರ್ಚಿಸಿದ ಡಾ. ಪರಮೇಶ್ವರ್ ಅವರು, ಪ್ರಸ್ತುತ ಬರ ಪರಿಸ್ಥಿತಿ, ನೀರಿನ ಲಭ್ಯತೆ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದು, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ನಂತರ ಸಿ.ಎಸ್.ಪುರ ಗ್ರಾಮಸ್ಥರು ಸ್ಥಳೀಯ ಆಸ್ಪತ್ರೆಗೆ ಅಗತ್ಯ ಔಷಧಿಗಳ ಕೊರತೆ ಇರುವ ಬಗ್ಗೆ ದೂರು ಸಲ್ಲಿಸಿದರು. ಗ್ರಾಮದಲ್ಲಿ ಕಸ ವಿಲೇವಾರಿ ಘಟಕ ಇಲ್ಲದ ಕಾರಣ ಖಾಸಗಿ ಜಮೀನುಗಳಲ್ಲಿ ಕಸ ಹಾಕಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಶೀಘ್ರವೇ ಕಸ ವಿಲೇವಾರಿ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದರು. ಉಪ ಮುಖ್ಯಮಂತ್ರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು

ಇದೇ ಸಂದರ್ಭದಲ್ಲಿ ಶಾಸಕ ಎಂ.ಟಿ. ಕೃಷ್ಣಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜೆಡಿಎಸ್ ಮುಖಂಡರಾದ ಜಗದೀಶ್, ಬೀರಮಾರನಹಳ್ಳಿ ನರಸೇಗೌಡ, ವೀರಣ್ಣಗುಡಿ ರಾಮಣ್ಣ, ಕಾಂಗ್ರೆಸ್ ಮುಖಂಡರಾದ ಶಂಕರಾನಂದ, ರಾಜಣ್ಣ, ತಾಪಂ ಇಒ ರಂಗನಾಥ್, ಗ್ರಾಮೀಣಾಭಿವೃದ್ಧಿ ಇಲಾಖೆ ಎಇಇ ನಾಗೇಂದ್ರಪ್ಪ ಸೇರಿದಂತೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಗಣೇಶ ವಿಸರ್ಜನೆ ವೇಳೆ ಗಲಾಟೆ: ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪ; ಆರೋಪಿ ಬಂಧನ

ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಭಾನುವಾರ ಗಣೇಶ ಮೂರ್ತಿ...

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...

ತುರುವೇಕೆರೆ | ಪರಂಪರೆ ಪೂರ್ವಜರ ಉಡುಗೊರೆಯಲ್ಲ, ಮುಂದಿನ ಪೀಳಿಗೆಗೆ ನೀಡುವ ಸಾಲ : ಡಾ. ಮಹೇಶ್ ಕುಮಾರ್

ಪರಂಪರೆ ಎಂಬುದು ಪೂರ್ವಜರಿಂದ ಪಡೆದ ಉಡುಗೊರೆಯಲ್ಲ; ಮುಂದಿನ ಪೀಳಿಗೆಗೆ ಉಳಿಸಿ ನೀಡಲು...