ಗುಬ್ಬಿ | ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ..!

Date:

ಗುಬ್ಬಿ  ತಾಲ್ಲೂಕಿನ ಸೋಮಲಾಪುರ ಕೆರೆಯ ಪಕ್ಕದಲ್ಲೇ ಹೇಮಾವತಿ ನಾಲೆಯಲ್ಲಿ ನೀರು ಹರಿಯುತ್ತಿದ್ದರೂ, ಕೆರೆಗೆ ನೀರು ಹರಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ಆರೋಪ ಸ್ಥಳೀಯ ರೈತರು ಹಾಗೂ ಸಾರ್ವಜನಿಕರಿಂದ ಕೇಳಿಬಂದಿದೆ.

- Advertisement -

ಸೋಮಲಾಪುರ ಕೆರೆಯು ಹೇಮಾವತಿ ನಾಲಾ ವ್ಯಾಪ್ತಿಗೆ ಒಳಪಟ್ಟಿದ್ದು, ಕುಡಿಯುವ ನೀರಿನ ಯೋಜನೆಗೆ ಅನುಮೋದನೆಗೊಂಡಿರುವ ಪ್ರಮುಖ ಕೆರೆಯಾಗಿದೆ. ಈ ಕೆರೆ ಸುತ್ತಮುತ್ತಲಿನ ಸುಮಾರು 20ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರಿನ ಪ್ರಮುಖ ಮೂಲವಾಗಿದ್ದು, ನೂರಾರು ರೈತರ ಕೃಷಿ ಚಟುವಟಿಕೆಗಳಿಗೂ ಆಸರೆಯಾಗಿದೆ. ಆದರೆ ಸದ್ಯ ಕೆರೆ ಸಂಪೂರ್ಣವಾಗಿ ಖಾಲಿಯಾಗಿದ್ದು, ಬರದ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕೆರೆ ಪಕ್ಕದ ಮುಖ್ಯ ನಾಲೆಯಲ್ಲಿ ಹೇಮಾವತಿ ನೀರು ಹರಿಯುತ್ತಿದ್ದರೂ, ಸೋಮಲಾಪುರ ಕೆರೆಗೆ ಮಾತ್ರ ನೀರು ಹರಿಸದಿರುವುದು ಗ್ರಾಮಸ್ಥರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕೆರೆಗೆ ನೀರು ಬಾರದ ಪರಿಣಾಮ ಸುತ್ತಮುತ್ತಲಿನ ಕೃಷಿ ಭೂಮಿಗಳು ಬರಡಾಗುತ್ತಿದ್ದು, ರೈತರು ನೀರಿಗಾಗಿ ಪರದಾಡುವಂತಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ತೀವ್ರಗೊಳ್ಳುವ ಆತಂಕವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.

ಈ ಭಾಗದ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಹಲವು ಕೊಳವೆಬಾವಿಗಳು ಈಗಾಗಲೇ ಅಂತರ್ಜಲ ಕುಸಿತದಿಂದ ಕೈಕೊಡುತ್ತಿವೆ. ಕೆರೆಯಲ್ಲಿ ನೀರು ಸಂಗ್ರಹವಾದರೆ ಅಂತರ್ಜಲ ಮಟ್ಟ ಹೆಚ್ಚಾಗಿ, ಸುತ್ತಮುತ್ತಲಿನ ಬೋರ್‌ವೆಲ್‌ಗಳಿಗೂ ಅನುಕೂಲವಾಗಲಿದೆ. ಆದರೆ ಕೆರೆ ಒಣಗಿರುವುದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರತಿವರ್ಷವೂ ಸೋಮಲಾಪುರ ಕೆರೆಗೆ ಆದ್ಯತೆಯ ಮೇರೆಗೆ ಹೇಮಾವತಿ ನೀರು ಹರಿಸುವ ಪ್ರಕ್ರಿಯೆ ನಡೆದುಕೊಂಡು ಬಂದಿದೆ. ಈ ಬಾರಿಯೂ ಕೆರೆಗೆ ನೀರು ಹರಿಸಲು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ರೈತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೆರೆಗೆ ನೀರು ತುಂಬಿಸುವ ಮೂಲಕ ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

“ಹೇಮಾವತಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸೋಮಲಾಪುರ ಕೆರೆಗೆ ನೀರು ಹರಿಸಲು ಸಾಧ್ಯವಾಗಿಲ್ಲ. ಕೂಡಲೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸಿ ಕೆರೆಗೆ ಹೇಮಾವತಿ ನೀರು ಹರಿಸುವ ಮೂಲಕ ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು” ಎಂದು ಸೋಮಲಾಪುರ ವಿಎಸ್‌ಎಸ್‌ಎನ್ ಅಧ್ಯಕ್ಷ  ಮಹೇಶ್ ಒತ್ತಾಯಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ...

ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು...

ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ...

ತುಮಕೂರು | ಎಸ್‌ಸಿ–ಎಸ್‌ಟಿ ಸಂಪಾದಕರ ಸಂಘದ ರಾಜ್ಯದ ಮೊದಲ ಜಿಲ್ಲಾ ಘಟಕ ರಚನೆ: ಪರಮೇಶ್ ಅಧ್ಯಕ್ಷ, ರಘು ಪ್ರಧಾನ ಕಾರ್ಯದರ್ಶಿ

ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ...