ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

Date:

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ ನಿವೇಶನಗಳನ್ನು ಸಿದ್ಧಪಡಿಸಿ, ಒಟ್ಟು 15 ಲಕ್ಷ ಬಡ ಕುಟುಂಬಗಳಿಗೆ ಉಚಿತ ನಿವೇಶನ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

- Advertisement -

ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಆಯೋಜಿಸಿದ್ದ ‘ಪ್ರಜಾ ಸೇವಾ ಅಭಿಯಾನ’ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ತಾಲ್ಲೂಕಿನಲ್ಲಿ ಐದಾರು ಸಾವಿರ ನಿವೇಶನಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಪ್ರಜಾ ಸೇವಾ ಅಭಿಯಾನವನ್ನು ಜಾರಿಗೆ ತರಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲೇ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ಅಭಿಯಾನವನ್ನು ಮೂರು ಹಂತಗಳಲ್ಲಿ ನಡೆಸಲಾಗುತ್ತಿದೆ. ಪ್ರತಿ ಮೊದಲ ಹಾಗೂ ಮೂರನೇ ಶನಿವಾರ ತಾವೇ ಒಂದೊಂದು ತಾಲ್ಲೂಕಿಗೆ ಭೇಟಿ ನೀಡಿ ಅಭಿಯಾನ ನಡೆಸಲಿದ್ದು, ಉಳಿದ ವಾರಗಳಲ್ಲಿ ಸ್ಥಳೀಯ ಶಾಸಕರು ಕಾರ್ಯಕ್ರಮ ನಡೆಸಲಿದ್ದಾರೆ. ಮುಂದಿನ ಹಂತದಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟಕ್ಕೂ ಅಭಿಯಾನ ವಿಸ್ತರಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, 150 ವರ್ಷಗಳಲ್ಲೇ ಇಂತಹ ಬರ ಬಂದಿರಲಿಲ್ಲ. ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ₹329 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ತುಮಕೂರು ಜಿಲ್ಲೆಗೆ ₹14 ಕೋಟಿ ಮೀಸಲಿಡಲಾಗಿದೆ ಎಂದರು.

ರಾಜ್ಯದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿದ್ದು, ಇತರೆ ರಾಜ್ಯಗಳು ಕೂಡ ಕರ್ನಾಟಕದ ಮಾದರಿಯನ್ನು ಅನುಸರಿಸುತ್ತಿವೆ. ಗೃಹಲಕ್ಷ್ಮಿ ಯೋಜನೆ ಬಡ ಮಹಿಳೆಯರ ಸಂಕಷ್ಟಕ್ಕೆ ನೆರವಾಗಿದೆ. ಶಕ್ತಿ ಯೋಜನೆಯಡಿ ರಾಜ್ಯದ ಮಹಿಳೆಯರು 800 ಕೋಟಿ ಬಾರಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಸರ್ಕಾರದ ಸಾಧನೆಗಳನ್ನು ವಿವರಿಸಿದರು.

1003951604

ಅಧಿಕಾರಿಗಳು ಆತ್ಮಸಾಕ್ಷಿಗೆ ಹೆದರಿ ಕೆಲಸ ಮಾಡಲಿ: ಶ್ರೀನಿವಾಸ್

ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ, ಪವತಿ ಖಾತೆ, ಕಂದಾಯ ಗ್ರಾಮ ರಚನೆ ಹಾಗೂ ಪೋಡಿಮುಕ್ತ ಗ್ರಾಮ ಸೇರಿದಂತೆ ಕಂದಾಯ ಇಲಾಖೆಯ ಹಲವು ಕಾರ್ಯಕ್ರಮಗಳು ಜಿಲ್ಲೆಯಲ್ಲಿ ಉತ್ತಮವಾಗಿ ಅನುಷ್ಠಾನಗೊಂಡಿವೆ. ನಾಲ್ಕೈದು ದಶಕಗಳಿಂದ ಪವತಿ ಖಾತೆ ಮಾಡಿಸಿಕೊಳ್ಳಲು ಸಾಧ್ಯವಾಗದವರಿಗೆ ಇದೀಗ ಪರಿಹಾರ ದೊರೆತಿದೆ ಎಂದರು.

ನಿತ್ಯ ಜನರ ಮಧ್ಯೆ ಇರುವುದರಿಂದ ಪ್ರತಿದಿನ ನೂರಾರು ಸಮಸ್ಯೆಗಳು ತಮ್ಮ ಗಮನಕ್ಕೆ ಬರುತ್ತವೆ. ಸಾರ್ವಜನಿಕರ ಕೆಲಸ ಮಾಡುವ ಅಧಿಕಾರಿಗಳು ಆತ್ಮಸಾಕ್ಷಿಗೆ ಹೆದರಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಅವರಿಗೂ ನೆಮ್ಮದಿ ಸಿಗಲಿದೆ ಎಂದು ಹೇಳಿದರು.

ಅಭಿಯಾನದಲ್ಲಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿದ್ದು, ಹಲವು ಅರ್ಜಿಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಇತ್ಯರ್ಥಪಡಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಕಾರ್ಯದರ್ಶಿ ದೀಪಾ ಚೋಳನ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತಾಪಂ ಸಿಇಒ ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಹೀದಾ ಜಂಜಂ, ತಹಶೀಲ್ದಾರ್ ಆರತಿ ಬಿ., ತಾಪಂ ಇಒ ರಂಗನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ತುಮಕೂರು | ಜಾಗತೀಕರಣದ ನಡುವೆ ಪ್ರಾದೇಶಿಕ ಅಸ್ಮಿತೆ ಉಳಿಸುವ ಶಕ್ತಿ ರಂಗಭೂಮಿಗಿದೆ : ರಂಗನಿರ್ದೇಶಕ ಲಕ್ಷ್ಮಣ್ ಕೆ.ಪಿ.

 ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗಳು ಅಳಿಸಿಹೋಗುವ ಆತಂಕ...

ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ...