ಗುಬ್ಬಿ | ಚೇಳೂರು ಪ್ರಜಾಸೇವಾ ಅಭಿಯಾನದಲ್ಲಿ ವಿಕಲಚೇತನರು, ಹಿರಿಯ ನಾಗರಿಕರ ಪರದಾಟ :ಅರ್ಜಿ ನೀಡಲು ಮೆಟ್ಟಿಲು ಹತ್ತಲಾಗದೆ ವಾಪಸ್‌

Date:

 ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಚೇಳೂರು ಹೋಬಳಿ ಮಟ್ಟದ ಪ್ರಜಾಸೇವಾ ಅಭಿಯಾನ ಯಶಸ್ವಿಯಾಗಿ ನಡೆಯಿತು.

- Advertisement -

ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ, ಕಳೆದ ಸರ್ಕಾರವೂ ಗ್ರಾಮೀಣ ಭಾಗದ ಜನರಿಗೆ ಸಮರ್ಪಕವಾಗಿ ಮನೆಗಳನ್ನು ನೀಡಿಲ್ಲ. ನಮ್ಮ ಸರ್ಕಾರವೂ ಕಳೆದ ಮೂರು ವರ್ಷಗಳಿಂದ ಮನೆಗಳನ್ನು ನೀಡಲು ಸಾಧ್ಯವಾಗಿಲ್ಲ. ಕನಿಷ್ಠ ಪ್ರತಿ ಗ್ರಾಮ ಪಂಚಾಯಿತಿಗೆ 50 ಮನೆಗಳನ್ನಾದರೂ ಮಂಜೂರು ಮಾಡಿದರೆ ವಸತಿ ಸಮಸ್ಯೆ ಬಹುಮಟ್ಟಿಗೆ ಬಗೆಹರಿಯಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಕಳೆದ ಪ್ರಜಾಸೇವಾ ಅಭಿಯಾನದಲ್ಲಿ 800ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಬಹುತೇಕ ಅರ್ಜಿಗಳು ವಸತಿ, ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ್ದವು. ಈ ಪೈಕಿ ಬಹುತೇಕ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಇದೀಗ ಚೇಳೂರು ಭಾಗದಲ್ಲಿ ಅಭಿಯಾನ ನಡೆಸಲಾಗಿದ್ದು, ರೈತರು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅವುಗಳನ್ನೂ ಪರಿಹರಿಸಲಾಗುವುದು. ಎಲ್ಲಾ ಹೋಬಳಿಗಳಲ್ಲೂ ಅಭಿಯಾನ ಪೂರ್ಣಗೊಂಡ ಬಳಿಕ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಪ್ರಜಾಸೇವಾ ಅಭಿಯಾನ ಆರಂಭಿಸಲಾಗುವುದು ಎಂದು ತಿಳಿಸಿದರು.

ಗುಬ್ಬಿ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಾಗಿದ್ದು, ಬರಗಾಲದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊಳವೆ ಬಾವಿಗಳ ಮೋಟಾರ್‌ಗಳು ಕಾರ್ಯನಿರ್ವಹಿಸುತ್ತಿವೆ. ಇದರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಅಭಿಯಾನದಲ್ಲಿ ಕೆಲವು ನ್ಯೂನತೆಗಳು ಕಂಡುಬಂದಿದ್ದು, ಇದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಯಿತು. ಅರ್ಜಿ ಸ್ವೀಕರಿಸುವ ಸ್ಥಳದಲ್ಲಿ ಸೂಕ್ತ ಮಾರ್ಗದರ್ಶನದ ಕೊರತೆ, ಕುಡಿಯುವ ನೀರು ಹಾಗೂ ಸಾರ್ವಜನಿಕರು ಕುಳಿತುಕೊಳ್ಳಲು ಅಗತ್ಯ ವ್ಯವಸ್ಥೆಗಳ ಕೊರತೆ ಕಂಡುಬಂದಿತು. ವೃದ್ಧರು ಮತ್ತು ವಿಶೇಷಚೇತನರಿಗೆ ಪ್ರತ್ಯೇಕ ನೆರವು ವ್ಯವಸ್ಥೆಯೂ ಇರಲಿಲ್ಲ ಎಂದು ಗ್ರಾಮಸ್ಥರು ದೂರಿದರು.

ಅರ್ಜಿ ಸ್ವೀಕರಿಸುವ ಸ್ಥಳವನ್ನು ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡಲಾಗಿದ್ದರಿಂದ ಹೆಚ್ಚಿನ ಸಂಖ್ಯೆಯ ಮೆಟ್ಟಿಲುಗಳಿದ್ದವು. ಪರಿಣಾಮ, ತೀವ್ರತರ ವಿಕಲಚೇತನರಿಗೆ ಮೆಟ್ಟಿಲು ಹತ್ತಿ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ವಾಪಸ್ ತೆರಳಿದ ಘಟನೆ ನಡೆಯಿತು. ಹಿರಿಯ ನಾಗರಿಕರು ಊರುಗೋಲಿನ ಸಹಾಯದಿಂದ ಕಷ್ಟಪಟ್ಟು ಮೆಟ್ಟಿಲು ಹತ್ತಿ ಅರ್ಜಿ ಸಲ್ಲಿಸಿದರು.

ಅರ್ಜಿದಾರರಿಗೆ ಊಟವಿಲ್ಲ; ಅಧಿಕಾರಿಗಳಿಗೆ ಹೋಳಿಗೆ ಊಟ?

ಬೆಳಗ್ಗೆ 10 ಗಂಟೆಯಿಂದ ಗ್ರಾಮೀಣ ಪ್ರದೇಶಗಳಿಂದ ಆಗಮಿಸಿದ್ದ ಸಾರ್ವಜನಿಕರು ಸರದಿ ಸಾಲಿನಲ್ಲಿ ನಿಂತು ಮಧ್ಯಾಹ್ನ 2 ಗಂಟೆಯವರೆಗೂ ಅರ್ಜಿ ಸಲ್ಲಿಸಿದರು. ಕಾರ್ಯಕ್ರಮ ಮುಗಿದ ಬಳಿಕ ಊಟದ ವ್ಯವಸ್ಥೆಯಿಲ್ಲದೆ ಹಸಿದ ಹೊಟ್ಟೆಯಲ್ಲೇ ಸಾರ್ವಜನಿಕರು ವಾಪಸ್ ತೆರಳಬೇಕಾಯಿತು. ಆದರೆ ಅಧಿಕಾರಿಗಳಿಗೆ ಗ್ರಾಮ ಪಂಚಾಯಿತಿ ಸಮೀಪ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ದಲಿತ ಮುಖಂಡ ಶಿವನಂಜಪ್ಪ ಅವರು ಆಕ್ರೋಶ ವ್ಯಕ್ತಪಡಿಸಿ, ದೂರದ ಗ್ರಾಮಗಳಿಂದ ಬಂದು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತಿದ್ದ ಸಾರ್ವಜನಿಕರಿಗೂ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಂದಿನ ಹಂತದ ಪ್ರಜಾಸೇವಾ ಅಭಿಯಾನಗಳಲ್ಲಿ ಇಂತಹ ನ್ಯೂನತೆಗಳನ್ನು ಸರಿಪಡಿಸಿ, ಅರ್ಜಿದಾರರಿಗೆ ಸೂಕ್ತ ಮಾರ್ಗದರ್ಶನ, ಕುಡಿಯುವ ನೀರು, ಆಸನ ವ್ಯವಸ್ಥೆ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ ಪ್ರತ್ಯೇಕ ನೆರವು ಕಲ್ಪಿಸಬೇಕು. ಆಗ ಮಾತ್ರ ಪ್ರಜಾಸೇವಾ ಅಭಿಯಾನವು ಗ್ರಾಮೀಣ ಜನರಿಗೆ ನಿಜವಾದ ಅರ್ಥದಲ್ಲಿ ಸೇವೆ ಒದಗಿಸುವ ಕಾರ್ಯಕ್ರಮವಾಗಲಿದೆ ಎಂದು ನಲ್ಲೂರುಹಟ್ಟಿ ಗ್ರಾಮಸ್ಥರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಆರತಿ ಬಿ., ಇಒ ರಂಗನಾಥ್, ವೃತ್ತ ನಿರೀಕ್ಷಕ ರಾಘವೇಂದ್ರ, ಟಿಎಚ್‌ಒ ಡಾ. ಸವಿತಾ, ಸಿಡಿಪಿಒ ಕೃಷ್ಣಮೂರ್ತಿ, ವೀಣಾ, ಜಗನ್ನಾಥ್ ಗೌಡ, ಉಪತಹಶೀಲ್ದಾರ್ ನಾಗಭೂಷಣ್, ಬಿಇಒ ಎಂ.ಎಸ್. ನಟರಾಜು, ಜಯದೇಶ್, ನಾಗೇಂದ್ರಪ್ಪ, ಡಾ. ವಿಜಯ್ ಕುಮಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ವೀಳ್ಯದೆಲೆ ಬಳ್ಳಿ’ ಆತ್ಮಕಥನ ಜನಾರ್ಪಣೆ

 ‘ಇಲ್ಲದ ಭಾರತ, ಉಳ್ಳವರ ಭಾರತ’ದ ಸೃಷ್ಟಿ ವೇಗ ಪಡೆದುಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ,...

ಗುಬ್ಬಿ | ಮಾಲತಮ್ಮ ಜನ್ಮದಿನದ ನೆಪದಲ್ಲಿ ರಂಗಭೂಮಿಯ ಪರಂಪರೆಯ ಮೆಲುಕು

 ಹಿರಿಯ ರಂಗಕರ್ಮಿ ಜಿ.ವಿ. ಮಾಲತಮ್ಮ ಅವರ 102ನೇ ಜನ್ಮದಿನದ ಅಂಗವಾಗಿ ನಾಡಿನ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ; ತೆರಿಗೆ ಸೋರಿಕೆ ಆರೋಪ!

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ...

ಗುಬ್ಬಿ | ಶಾಂತಿಯುತವಾಗಿ ನಡೆದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ

 ಕಳೆದ ಕೆಲ ದಿನಗಳಿಂದ ರಂಗೇರಿದ್ದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ ಮತ...