ಗುಬ್ಬಿ | ಸುರಿಗೇನಹಳ್ಳಿ ಅರಣ್ಯ ಪ್ರದೇಶಕ್ಕೆ ಬೆಂಕಿ : ಕಂಗಾಲಾದ ಪಕ್ಷಿ ಸಂಕುಲ

Date:

 ಸುರಿಗೇನಹಳ್ಳಿ ಬಳಿಯ ಸುಮಾರು 80 ಎಕರೆ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ ಪರಿಣಾಮ ಮರಗಿಡಗಳು ಹೊತ್ತಿ ಉರಿದು ಅಲ್ಲಿ ನೆಲಸಿದ್ದ ಸಾವಿರಾರು ಪಕ್ಷಿ ಸಂಕುಲ ಕಂಗಾಲಾದ ಘಟನೆ ಪರಿಸರ ಪ್ರೇಮಿಗಳಲ್ಲಿ ಬೇಸರ ತಂದಿದೆ.

- Advertisement -

ಬೇಸಿಗೆ ಆರಂಭದ ಈ ಕಾಲದಲ್ಲಿ ಅರಣ್ಯಕ್ಕೆ ಬೆಂಕಿ ತಾಗದಂತೆ ಕಾಪಾಡಬೇಕಿದೆ. ಕಿಡಿಗೇಡಿಗಳ ಕೃತ್ಯ ಬೆಂಕಿಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಇದೇ ಅರಣ್ಯ ಪ್ರದೇಶಕ್ಕೆ ಅನೇಕ ಬಾರಿ ಬೆಂಕಿ ಕಾಣಿಸಿಕೊಂಡು ವನ್ಯ ಸಂಪತ್ತು ನಾಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ದೂರುತ್ತಿದ್ದಾರೆ. ಸುಮಾರು 80 ಎಕರೆ ಅರಣ್ಯ ಪ್ರದೇಶ ಹೊಂದಿರುವ ಸುರಿಗೇನಹಳ್ಳಿ ಗುಡ್ಡದಲ್ಲಿ ಇತಿಹಾಸ ಪ್ರಸಿದ್ಧ ಗುಡ್ಡದ ರಂಗನಾಥಸ್ವಾಮಿ ದೇವಾಲಯವಿದೆ. ಜೊತೆಗೆ ಸುಂದರವಾದ ಹಸಿರು ವನಸಿರಿ ದೇವಾಲಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾಗಿಸಿದೆ.

ಸಾವಿರಾರು ಪಕ್ಷಿ ಸಂಕುಲ ಬೀಡು ಬಿಟ್ಟ ಅರಣ್ಯದಲ್ಲಿ ಕಂಡ ಬೆಂಕಿ ಹಸಿ ಮರಗಿಡಗಳನ್ನು ಆಹುತಿ ಪಡೆದಿದೆ. ಗೂಡು ಕಟ್ಟಿ ತನ್ನ ಮರಿಗಳೊಟ್ಟಿಗೆ ಇದ್ದ ಹಕ್ಕಿಗಳ ಆಕ್ರಂದನ ಮುಗಿಲು ಮುಟ್ಟಿದ್ದು ಪರಿಸರ ಪ್ರೇಮಿಗಳಲ್ಲಿ ಬೇಸರ ಮೂಡಿಸಿದೆ.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...

ಶಿರಾ | ಭದ್ರಾ ನೀರಿಗಾಗಿ ಬೃಹತ್ ಹೋರಾಟಕ್ಕೆ ಸಿದ್ಧತೆ: ರೈತರು ಒಗ್ಗಟ್ಟಾಗಲು ಕರೆ

ಜೀವನಕ್ಕಾಗಿ ನೀರು, ನೀರಿಗಾಗಿ ನಮ್ಮ ಹೋರಾಟ ಎಂಬ ಘೋಷವಾಕ್ಯದೊಂದಿಗೆ ಶಿರಾ ತಾಲೂಕಿನಲ್ಲಿ...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...