ಗುಬ್ಬಿ | ಕತ್ತಲಲ್ಲಿ ಕಳೆದುಹೋಗುತ್ತಿದೆ ಆರೋಗ್ಯದ ಹಾದಿ!

Date:

ಆರೋಗ್ಯ ಕಾಪಾಡಿಕೊಳ್ಳಲು ಪ್ರತಿದಿನ ಬೆಳಗ್ಗೆ-ಸಂಜೆ ವಾಕಿಂಗ್, ಜಾಗಿಂಗ್‌ಗಾಗಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಬರುವ ನೂರಾರು ನಾಗರಿಕರಿಗೆ ಇದೀಗ ಕತ್ತಲೇ ದೊಡ್ಡ ಸಮಸ್ಯೆಯಾಗಿದೆ. ಮುಂಜಾನೆಯ ನಸುಕು ಹಾಗೂ ಸಂಜೆ ಆವರಿಸುವ ಕತ್ತಲಿನಿಂದಾಗಿ ವಾಯುವಿಹಾರಿಗಳು ತಮ್ಮ ನಿತ್ಯದ ವ್ಯಾಯಾಮವನ್ನೇ ಮೊಟಕುಗೊಳಿಸಿ ಮನೆಗೆ ಮರಳುವ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -

ವಿಶಾಲವಾದ ಕಾಲೇಜು ಮೈದಾನದಲ್ಲಿ ಬೆಳಗ್ಗೆ ಮತ್ತು ಸಂಜೆ ಮಹಿಳೆಯರು, ವೃದ್ಧರು, ಮಧ್ಯವಯಸ್ಕರು ಸೇರಿದಂತೆ ನೂರಾರು ಮಂದಿ ವಾಕಿಂಗ್ ಹಾಗೂ ಜಾಗಿಂಗ್ ಮಾಡುತ್ತಾರೆ. ಆದರೆ ಮೈದಾನದಲ್ಲಿದ್ದ ಬೆಳಕಿನ ವ್ಯವಸ್ಥೆ ಕೈಕೊಟ್ಟಿರುವುದರಿಂದ ಕತ್ತಲಾದ ಬಳಿಕ ಮೈದಾನದಲ್ಲಿ ಸಂಚರಿಸುವುದೇ ಅಪಾಯಕಾರಿಯಾಗಿದೆ ಎಂಬುದು ವಾಯುವಿಹಾರಿಗಳ ಅಳಲು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಒಂದೆಡೆ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದ ಈ ಮೈದಾನ, ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕರ ಆರೋಗ್ಯದ ತಾಣವಾಗಿಯೂ ರೂಪುಗೊಂಡಿದೆ. ಬೆಳಗಿನ ಜಾವ ಹಾಗೂ ಸಂಜೆ ನೂರಾರು ಮಂದಿ ಇಲ್ಲಿ ವಾಯುವಿಹಾರ ಮಾಡುತ್ತಿದ್ದಾರೆ. ಆದರೆ ಬೆಳಕಿನ ಕೊರತೆಯಿಂದಾಗಿ ಈ ಆರೋಗ್ಯದ ಹಾದಿಯೇ ಕತ್ತಲೆಯ ಹಾದಿಯಾಗುತ್ತಿದೆ.

ಕಾಲೇಜು ಪಕ್ಕದಲ್ಲಿರುವ ವಾಲಿಬಾಲ್ ಹಾಗೂ ಕೊಕ್ಕೋ ಮೈದಾನದಲ್ಲಿದ್ದ ದೀಪಗಳು ಕೂಡ ಕಾರ್ಯನಿರ್ವಹಿಸದ ಸ್ಥಿತಿಯಲ್ಲಿವೆ. ಸಂಜೆ ಕತ್ತಲಾಗುತ್ತಿದ್ದಂತೆ ಮೈದಾನದಲ್ಲಿ ವಾಕಿಂಗ್ ಮಾಡುವವರ ಸಂಖ್ಯೆ ಕಡಿಮೆಯಾಗುತ್ತದೆ. ಕತ್ತಲಿನ ಪರಿಸ್ಥಿತಿ ಅನೈತಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಬಹುದೆಂಬ ಆತಂಕವೂ ಸ್ಥಳೀಯರಲ್ಲಿ ವ್ಯಕ್ತವಾಗಿದೆ.

1003928802

ಬೆಳಕಿನ ಕೊರತೆಯಿಂದಾಗಿ ಮಹಿಳೆಯರು ಮತ್ತು ವೃದ್ಧರು ಮುಂಜಾನೆ ಹಾಗೂ ಸಂಜೆ ವಾಕಿಂಗ್ ಮಾಡಲು ಹಿಂಜರಿಯುವಂತಾಗಿದೆ. ಇದರೊಂದಿಗೆ ಮೈದಾನದ ಸುತ್ತಮುತ್ತ ನಾಯಿಗಳ ಹಾವಳಿಯೂ ಇರುವುದರಿಂದ ಕತ್ತಲೆಯಲ್ಲಿ ಸಂಚರಿಸಲು ಮತ್ತಷ್ಟು ಭಯವಾಗುತ್ತಿದೆ ಎಂದು ವಾಯುವಿಹಾರಿಗಳು ಹೇಳುತ್ತಾರೆ.

“ಸರ್ಕಾರಿ ಮೈದಾನ ಸದಾ ಕ್ರೀಡಾ ಚಟುವಟಿಕೆಗಳಿಂದ ಕೂಡಿರುತ್ತಿತ್ತು. ಇದೀಗ ಮಹಿಳೆಯರು, ವೃದ್ಧರು ಸೇರಿದಂತೆ ನೂರಾರು ಮಂದಿ ವಾಯುವಿಹಾರಕ್ಕೆ ಬರುತ್ತಿದ್ದಾರೆ. ಬೆಳಗ್ಗೆ ಮತ್ತು ಸಂಜೆ ಕತ್ತಲಿನ ಸಮಸ್ಯೆ ಎಲ್ಲರಿಗೂ ತೊಂದರೆ ತಂದಿದೆ. ಹೈಮಾಸ್ಟ್ ಲೈಟ್ ಅಳವಡಿಸುವಂತೆ ಪಟ್ಟಣ ಪಂಚಾಯಿತಿ ಸಭೆಯಲ್ಲೂ ಮನವಿ ಮಾಡಿದ್ದರೂ ಈವರೆಗೆ ಕ್ರಮವಾಗಿಲ್ಲ ಎಂದು ವಕೀಲ ಜಿ.ಎಂ. ಶಿವಾನಂದ್ ಹೇಳಿದರು

“ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಮಹಿಳೆಯರು, ವೃದ್ಧರು ಹಾಗೂ ರೋಗಿಗಳು ನಿತ್ಯ ವಾಕಿಂಗ್‌ಗಾಗಿ ಈ ಮೈದಾನವನ್ನೇ ಅವಲಂಬಿಸಿದ್ದಾರೆ. ಸೂಕ್ತ ವಾತಾವರಣವಿದ್ದರೂ ಬೆಳಕಿನ ಕೊರತೆ ದೊಡ್ಡ ಸಮಸ್ಯೆಯಾಗಿದೆ. ನಾಯಿಗಳ ಹಾವಳಿಯ ನಡುವೆ ಮುಂಜಾನೆ ಮತ್ತು ಸಂಜೆ ಓಡಾಡಲು ಭಯವಾಗುತ್ತದೆ. ನೂರಾರು ವಾಯುವಿಹಾರಿಗಳ ಸುರಕ್ಷತೆಗಾಗಿ ಪಟ್ಟಣ ಪಂಚಾಯಿತಿ ಕೂಡಲೇ ಬೆಳಕಿನ ವ್ಯವಸ್ಥೆ ಮಾಡಬೇಕು ಎಂದು ಬಿ.ಎಂ. ಚಂದ್ರಕಲಾ ಚಂದ್ರಶೇಖರ್ ತಿಳಿಸಿದರು

ಸಾರ್ವಜನಿಕರ ಆರೋಗ್ಯಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸುತ್ತಿರುವ ಸಂದರ್ಭದಲ್ಲಿ, ಪಟ್ಟಣದ ಪ್ರಮುಖ ಸಾರ್ವಜನಿಕ ಮೈದಾನದಲ್ಲಿ ಮೂಲಭೂತ ಬೆಳಕಿನ ವ್ಯವಸ್ಥೆಯೇ ಇಲ್ಲದಿರುವುದು ವಿಪರ್ಯಾಸವಾಗಿದೆ. ವಾಯುವಿಹಾರಿಗಳ ಆರೋಗ್ಯದ ಜೊತೆಗೆ ಅವರ ಸುರಕ್ಷತೆಯನ್ನೂ ಗಮನದಲ್ಲಿಟ್ಟುಕೊಂಡು ಪಟ್ಟಣ ಪಂಚಾಯಿತಿ ತಕ್ಷಣ ಹೈಮಾಸ್ಟ್ ಲೈಟ್ ಅಳವಡಿಸಬೇಕು ಎಂಬುದು ನಾಗರಿಕರ ಒತ್ತಾಯ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ತುಮಕೂರು | ಎಸ್‌ಎಸ್‌ಐಟಿ–ಸಿಎಂಟಿಐ ಒಪ್ಪಂದ: ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಸಂಶೋಧನೆಗೆ ಅವಕಾಶ

ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ...

ಮಧುಗಿರಿಯಲ್ಲಿ ಯುವ ಸಂಸತ್ತು ಅಣಕು ಅಧಿವೇಶನ

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...