ಗುಬ್ಬಿ | ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

Date:

 ಬ್ರೈನ್ ಕ್ಯಾನ್ಸರ್ ಗೆ ತುತ್ತಾದ ಯೋಗಿತಾ ಎಂಬ ಬಾಲಕಿಯ ಆಧಾರ್ ಕಾರ್ಡ್ ತಾಂತ್ರಿಕ ಸಮಸ್ಯೆ ಬಗ್ಗೆ ಮಾಧ್ಯಮದಲ್ಲಿ ವರದಿ ಬಿತ್ತರವಾದ ಹಿನ್ನಲೆ ಕೂಡಲೇ ಸ್ಪಂದಿಸಿದ ಜಿಲ್ಲಾಡಳಿತ ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್ ಬಾಲಕಿಯ ಮನೆಗೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಸ್ಥಳದಲ್ಲೇ ತಾಂತ್ರಿಕ ಸಮಸ್ಯೆ ನಿವಾರಿಸುವಲ್ಲಿ ಯಶಸ್ವಿಯಾದರು.

- Advertisement -

ಗುಬ್ಬಿ ಪಟ್ಟಣದ ಸಮೀಪದ ಜಿ. ಹರಿವೇಸಂದ್ರ ಗ್ರಾಮಕ್ಕೆ ಆಗಮಿಸಿದ ಉಪವಿಭಾಗಾಧಿಕಾರಿ ನೇರ ಯೋಗಿತಾ ಬಾಲಕಿಯ ಮನೆಗೆ ಭೇಟಿ ನೀಡಿ ಒಂದು ತಾಸು ಎಲ್ಲಾ ಸಮಸ್ಯೆ ಆಲಿಸಿದರು. ಮಾರಕ ಕಾಯಿಲೆ ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದ್ದ ಬಗ್ಗೆ ತೀವ್ರ ಮರುಕ ವ್ಯಕ್ತಪಡಿಸಿ ಆಧಾರ್ ಕಾರ್ಡ್ ತಿದ್ದುಪಡಿ ಆಗದ ಬಗ್ಗೆ ವಿಚಾರಿಸಿ ಜೊತೆಯಲ್ಲಿದ್ದ ತಾಂತ್ರಿಕ ಸಿಬ್ಬಂದಿಗಳಿಗೆ ಸರಿ ಪಡಿಸಲು ಸೂಚಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇಡೀ ಮಂಜುನಾಥ್ ಕುಟುಂಬವನ್ನು ನಲುಗಿಸಿದ್ದ ಮಾರಕ ಮೆದುಳು ಕ್ಯಾನ್ಸರ್ ಗೆ ತುತ್ತಾದ ಬಾಲಕಿ ಯೋಗೀತಾಗೆ ಚಿಕಿತ್ಸೆಗೆ ಆಧಾರ್ ಕಾರ್ಡ್ ಮತ್ತು ಬಿಪಿಎಲ್ ಕಾರ್ಡ್ ಇಲ್ಲದಿರುವುದು ಕುಟುಂಬಕ್ಕೆ ಆರ್ಥಿಕ ಹೊರೆಯಾಗಿದೆ. ಕೂಡಲೇ ತಾಂತ್ರಿಕ ಸಮಸ್ಯೆ ಬಗೆಹರಿಸಿ ಬಿಪಿಎಲ್ ಕಾರ್ಡ್ ಗೆ ಬಾಲಕಿ ಹೆಸರು ಸೇರ್ಪಡೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಆಧಾರ್ ಕಾರ್ಡ್ ನಿಪುಣತೆ ಪಡೆದ ಸಿಬ್ಬಂದಿಗಳನ್ನು ಮನೆಗೆ ಕರೆತಂದು ಮಗುವಿನ ಬಯೋಮೆಟ್ರಿಕ್ ಪಡೆದು ಆಧಾರ್ ಸಮಸ್ಯೆ ಬಗೆಹರಿಸಲು ಮುಂದಾದ ಉಪ ವಿಭಾಗಾಧಿಕಾರಿಗಳು ನಿಮ್ಮ ಮಗುವಿನ ಸಮಸ್ಯೆಗೆ ನಮ್ಮ ಜಿಲ್ಲಾಡಳಿತ ಜೊತೆ ನಿಲ್ಲಲಿದೆ ಎಂದು ಧೈರ್ಯ ತುಂಬಿದರು. ಮಗುವಿನ ಸ್ಥಿತಿಗೆ ಮರುಗಿದ ಅಧಿಕಾರಿಣಿ ಓದಿ ಏನು ಆಗಲು ಬಯಸಿದ್ದೆಯೇ ಎನ್ನುವ ಪ್ರಶ್ನೆಗೆ ಮಗು ಎಂಜಿನಿಯರ್ ಎಂಬ ಉತ್ತರಕ್ಕೆ ಸ್ಥಳದಲ್ಲಿದ್ದ ಎಲ್ಲರ ಕಣ್ಣಲ್ಲಿ ಕಂಬನಿ ಮಿಡಿದಿತ್ತು.

ಮುಂದಿನ ಚುನಾವಣೆ ಸಂದರ್ಭಗಳಲ್ಲಿ ನಡೆಯುವ ಎಲ್ಲಾ ಪ್ರಚಾರಗಳಿಗೆ ನಿನ್ನನ್ನು ವಾರಿಯರ್ ಆಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿ, ಆಧಾರ್ ಕಾರ್ಡ್ ಸಿದ್ಧವಾದ ತಕ್ಷಣ ಆಹಾರ ನಿರೀಕ್ಷಕರಿಗೆ ಮೊಬೈಲ್ ಕರೆ ಮಾಡಿ ಬಿಪಿಎಲ್ ಕಾರ್ಡ್ ಗೆ ಮಗುವಿನ ಹೆಸರು ಸೇರಿಸಿ ಖುದ್ದು ಈ ಕುಟುಂಬಕ್ಕೆ ಕಾರ್ಡ್ ತಲುಪಿಸಬೇಕು ಎಂದು ನಿರ್ದೇಶನ ನೀಡಿದರು.

ಸ್ಥಳದಲ್ಲಿ ತಹಶೀಲ್ದಾರ್ ಆರತಿ.ಬಿ, ಗ್ರಾಮ ಆಡಳಿತಾಧಿಕಾರಿ ಸ್ವಾಮಿ, ಆಧಾರ್ ಕಾರ್ಡ್ ತಾಂತ್ರಿಕ ವಿಭಾಗದ ಮುಖ್ಯಸ್ಥ ಪ್ರಶಾಂತ್, ಆಪರೇಟರ್ ಗಂಗಾ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ...

ತುಮಕೂರು | ಬೆಳೆ ಕಟಾವು ಪ್ರಯೋಗ ಶೇ.100ರಷ್ಟು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120...

ತುಮಕೂರು | ಎಸ್‌ಐಆರ್ ವಿರುದ್ಧ ಅ. 8ರಂದು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ತುಮಕೂರು | ಮಿನಿ ಒಲಂಪಿಕ್ಸ್‌ಗೆ ಮಕ್ಕಳು ಸಜ್ಜು : ಕಯಾಕಿಂಗ್, ಕನೋಯಿಂಗ್, ಶೂಟಿಂಗ್ ತರಬೇತಿ

 ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ...