ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಪ್ರತಿ ವಾರ್ಡ್ ನಲ್ಲಿ ಖಾತೆ ಮಾಡಿಸಲು ಫಲಾನುಭವಿಗಳಿಗೆ ಅನುವು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

- Advertisement -

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ಮಧ್ಯವರ್ತಿಗಳ ಹಾವಳಿ ಬಗ್ಗೆ ದೂರು ಬಂದ ಹಿನ್ನಲೆ ಜನರ ಅನುಕೂಲಕ್ಕೆ ಈ ಆಂದೋಲನ ಆಯೋಜನೆ ಮಾಡಲಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ನಾನು ನೋಡುತ್ತಾ ಇದ್ದೇನೆ. ಪಟ್ಟಣ ಪಂಚಾಯಿತಿ ಕೆಲಸ ಕೇವಲ ಬಿಲ್ ಮಾಡುವುದು ಅಷ್ಟೇ ಎನಿಸಿದೆ. ಕುಡಿಯುವ ನೀರು ಒದಗಿಸುವ ಹೇರೂರು ಕೆರೆಗೆ ಚರಂಡಿ ನೀರು ಬಿಡುತ್ತಿರುವ ಬಗ್ಗೆ ಗಂಭೀರತೆ ಕಂಡಿಲ್ಲ. ರಾಜ ಕಾಲುವೆಯಲ್ಲಿ ಚರಂಡಿ ನೀರು ಹೇಗೆ ಹರಿಯುತ್ತಿದೆ. ಅಲ್ಲಿನ ತೋಟದ ರೈತರ ಸಮಸ್ಯೆ ಕೂಡಾ ಆಲಿಸಬೇಕಿದೆ. ಒಂದು ವರ್ಷವಾದರೂ ಚರಂಡಿ ನಿರ್ಮಾಣ ಮಾಡಿಲ್ಲ. ಶಿರಾದಲ್ಲಿ ಭೂ ಸ್ವಾಧೀನ ಪಡೆದು ತಕ್ಷಣ ಚರಂಡಿ ನಿರ್ಮಾಣ ಮಾಡಿದ್ದಾರೆ. ನಿಮ್ಮಲ್ಲಿ ಯಾಕೆ ಕೆಲಸ ಆಗಿಲ್ಲ. ಈ ಅರ್ಜಿಯನ್ನು ವೈಯಕ್ತಿಕವಾಗಿ ಪರಿಶೀಲನೆ ಮಾಡುತ್ತೇನೆ ಎಂದ ಅವರು ಮುಖ್ಯಾಧಿಕಾರಿಗಳ ಕರ್ತವ್ಯ ಬಗ್ಗೆ ಸರ್ಕಾರಕ್ಕೆ ಬರೆಯುತ್ತೇನೆ ಎಂದು ಎಚ್ಚರಿಸಿದರು.

1002936236

ಜನ ಸಂಪರ್ಕ ಸಭೆಯಲ್ಲಿ ಒಟ್ಟು 70 ಅರ್ಜಿಗಳು ಸಾರ್ವಜನಿಕರು ನೀಡಿದ್ದಾರೆ. ಸರ್ವೇ ಹಾಗೂ ಕಂದಾಯ ಇಲಾಖೆಯ ಅರ್ಜಿಗಳು ಹೆಚ್ಚಾಗಿದ್ದು, ಸ್ಥಳೀಯ ಪಟ್ಟಣ ಪಂಚಾಯಿತಿ ಮತ್ತು ಬೆಸ್ಕಾಂ ಇಲಾಖೆಯ ಮೇಲಿನ ದೂರು ಅರ್ಜಿಗಳು ಸಹ ಬಂದಿವೆ. ಕಂದಾಯ ಗ್ರಾಮ ಮಾಡುವಲ್ಲಿ ನಮ್ಮದು ಬಿಟ್ಟಿದ್ದಾರೆ ಎಂದು ಎರಡು ಗ್ರಾಮದವರು ಅರ್ಜಿ ಕೊಟ್ಟಿದ್ದಾರೆ. ಪವತಿ ಖಾತೆ, ಸರ್ವೇ, ಪೋಡಿ, ದಾರಿ ಸಮಸ್ಯೆ ವಿಚಾರದ ಅರ್ಜಿಗಳು ಬಂದಿವೆ. ಈ ನಿಟ್ಟಿನಲ್ಲಿ ಅಲ್ಲಿನ ಗ್ರಾಮ ಆಡಳಿತಾಧಿರಿಗಳು, ಕಂದಾಯ ನಿರೀಕ್ಷಕರಿಗೆ ಸೂಚನೆ ನೀಡಿ ಕೂಡಲೇ ಸ್ಥಳ ಪರಿಶೀಲನೆಗೆ ತಿಳಿಸಲಾಗಿದೆ. ಈ ಎಲ್ಲಾ ಅರ್ಜಿಗಳನ್ನು ಮುಂದಿನ ಸಭೆಯೊಳಗೆ ಇತ್ಯರ್ಥ ಮಾಡಲು ಸೂಚಿಸಿದ್ದೇನೆ ಎಂದರು.

ಕಳ್ಳಿಪಾಳ್ಯ ಬಳಿ ಹೈಟೆಂಕ್ಷನ್ ವೈರ್ ಬದಲಿಸಲು ಗ್ರಾಮಸ್ಥರ ಮನವಿ ಬಂದಿದೆ. ಹಳೇ ತಂತಿಗಳ ಬದಲಾವಣೆ ಹಾಗೂ ಜೋತು ಬಿದ್ದ ತಂತಿಗಳ ಬದಲಾವಣೆಗೆ ಮುಖ್ಯ ಇಂಜಿನಿಯರ್ ಜೊತೆ ಮಾತನಾಡಿದ್ದೇನೆ. ಆರು ತಿಂಗಳಿಂದ ರೇಶನ್ ಕಾರ್ಡ್ ಅಕ್ಕಿ ಬಂದಿಲ್ಲ ಹಾಗೂ ಆಧಾರ್ ಕಾರ್ಡ್ ಇಲ್ಲದೆ ಸರ್ಕಾರದ ಸವಲತ್ತು ಸಿಕ್ಕಿಲ್ಲ ಎಂಬ ದೂರುಗಳು ಕೂಡಲೇ ಸ್ಥಳದಲ್ಲೇ ಪರಿಹಾರ ಕಂಡು ಹಿಡಿಯಲಾಯಿತು ಎಂದರು.

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ರಸ್ತೆ ಬದಿ ಅನಧಿಕೃತವಾಗಿ ತಲೆ ಎತ್ತಿರುವ ಅಂಗಡಿ ಮುಂಗಟ್ಟುಗಳಿಗೆ ಯಾವ ಇಲಾಖೆ ಹೊಣೆ ಎಂಬುದು ತಿಳಿದಿಲ್ಲ ಎಂಬ ಸಾರ್ವಜನಿಕರ ಪ್ರಶ್ನೆಗೆ ಜಿಲ್ಲಾಧಿಕಾರಿಗಳು ಕೂಡಲೇ ಪರಿಶೀಲನೆ ಮಾಡುವಂತೆ ಸೂಚಿಸಿದರು. ಅಲೆಮಾರಿ ಜನಾಂಗಕ್ಕೆ ನೀಡಿದ ನಿವೇಶನದಲ್ಲಿ ಕೆಲವು ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿಲ್ಲ ಎಂಬ ದೂರು ಬಂದಿದೆ. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಆರತಿ.ಬಿ, ತಾಪಂ ಇಓ ರಂಗನಾಥ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...

ಗುಬ್ಬಿ ಸಮೀಪ ಚಿರತೆ ಓಡಾಟ: ಆತಂಕದಲ್ಲಿ ನಾಗರಿಕರು

ಗುಬ್ಬಿ ಪಟ್ಟಣದ ಹೊರವಲಯದ ರಾಯವಾರ ಗ್ರಾಮದ ಮನೆಯೊಂದರ ಬಳಿ ಚಿರತೆ ಓಡಾಡಿರುವ...

ಗುಬ್ಬಿ | ಚೇಳೂರು ಪ್ರಜಾಸೇವಾ ಅಭಿಯಾನದಲ್ಲಿ ವಿಕಲಚೇತನರು, ಹಿರಿಯ ನಾಗರಿಕರ ಪರದಾಟ :ಅರ್ಜಿ ನೀಡಲು ಮೆಟ್ಟಿಲು ಹತ್ತಲಾಗದೆ ವಾಪಸ್‌

 ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ...