ಗುಬ್ಬಿ | ಉಪಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಪ್ರಭಾವ ಬೀರದು : ಶಾಸಕ ಎಸ್.ಆರ್.ಶ್ರೀನಿವಾಸ್

Date:

ಉಪಚುನಾವಣೆ ಸ್ಥಳೀಯ ಹಾಗೂ ಪ್ರಸ್ತುತ ವಿಚಾರದ ಮೇಲೆ ನಡೆಯುತ್ತವೆ. ಸರ್ಕಾರಕ್ಕೂ ಈ ಚುನಾವಣೆಗೂ ಯಾವ ಸಂಬಂಧವಿಲ್ಲ. ಯಾವುದೇ ಪ್ರಭಾವ ಸಹ ಬೀರದು ಎಂದು ಶಾಸಕ ಹಾಗೂ ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.

- Advertisement -

ತಾಲ್ಲೂಕಿನ ಕಡಬ ಹೋಬಳಿಯ ಹಲವು ಗ್ರಾಮದಲ್ಲಿ ಪಂಚಾಯತ್ ರಾಜ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಸುಮಾರು 12 ಕೋಟಿ ರೂಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಉಪ ಚುನಾವಣೆಯ ಫಲಿತಾಂಶ ಸೋಲು ಗೆಲುವು ಯಾವುದರಿಂದಲೂ ಸರ್ಕಾರಕ್ಕೆ ಯಾವ ಲಾಭ ನಷ್ಟವಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಮುಖ್ಯಮಂತ್ರಿ ಸ್ಥಾನಕ್ಕೆ ಯಾವ ಚ್ಯುತಿ ಬರುವುದಿಲ್ಲ. ಪಕ್ಷದ ಹೈಕಮಾಂಡ್ ಮಾತ್ರ ಈ ಕೆಲಸ ಮಾಡಲು ಸಾಧ್ಯ. ಚುನಾವಣೆ ಎಫೆಕ್ಟ್ ಏನೂ ಇರುವುದಿಲ್ಲ. ರಾಜಕೀಯ ದಿಕ್ಸೂಚಿಯು ಅಲ್ಲ ಎಂದು ಸ್ಪಷ್ಟಪಡಿಸಿದ ಅವರು ಇರಾನ್ ಇಸ್ರೇಲ್ ಕದನ ವಿರಾಮ ಹೇಳಿಕೆ ಎಲ್ಲಿಯವರೆಗೆ ಎಂಬುದು ನೋಡಬೇಕಿದೆ. ಗ್ಯಾಸ್ ಅಭಾವ ಮುಂದಿನ ದಿನಗಳಲ್ಲಿ ಸರಿ ಹೋಗಲಿದೆ ಎಂದರು.

ಕಡಬ ಬಸ್ ನಿಲ್ದಾಣಕ್ಕೆ ಅಗತ್ಯ ಮೂಲಭೂತ ವ್ಯವಸ್ಥೆಯ ಜೊತೆಗೆ ಮತ್ತಷ್ಟು ಮೇಲ್ದರ್ಜೆಗೇರಿಸಿ ಅಭಿವೃದ್ದಿ ಪಡಿಸಲಾಗುವುದು. ಗುಬ್ಬಿಯಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಚಾಲನೆ ಸದ್ಯದಲ್ಲೇ ನೀಡಲಾಗುವುದು. ಈ ಜೊತೆಗೆ ಬಸ್ ಡಿಪೋ ಕಾಮಗಾರಿಗೂ ಶೀಘ್ರ ಗ್ರೀನ್ ಸಿಗ್ನಲ್ ಸಿಗಲಿದೆ ಎಂದ ಅವರು ಕಡಬದಲ್ಲಿ ಸವಿತಾ ಸಮಾಜದ ಸಮುದಾಯಭವನಕ್ಕೆ ಈಗಾಗಲೇ ಹತ್ತು ಲಕ್ಷ ನೀಡಲಾಗಿದೆ. ಬಾಕಿ 20 ಲಕ್ಷ ಮಂಜೂರು ಮಾಡಿ ಭವನ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಬೆಲವತ್ತ ಗ್ರಾಮದಲ್ಲಿ ಅಗತ್ಯವಿದ್ದ ಸ್ತ್ರೀಶಕ್ತಿ ಭವನಕ್ಕೆ 15 ಲಕ್ಷ ರೂಗಳನ್ನು ನೀಡಿ ಪೂಜೆ ಸಲ್ಲಿಸಲಾಗಿದೆ. ಅರೆಮಾರನಹಳ್ಳಿ ಮೂಲಕ ಕಾಡಶೆಟ್ಟಿಹಳ್ಳಿವರೆಗೆ ಕೆರೆ ಅಗಲೀಕರಣ ಹಾಗೂ ರಸ್ತೆ ನಿರ್ಮಾಣಕ್ಕೆ 7.80 ಕೋಟಿ ರೂ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಕಡಬ ಹಾಗೂ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ, ಬಾಕ್ಸ್ ಚರಂಡಿ ನಿರ್ಮಾಣಕ್ಕೆ 4.70 ಕೋಟಿ ರೂಗಳ ಕಾಮಗಾರಿಗೂ ಇಂದು ಚಾಲನೆ ನೀಡಲಾಗಿದೆ ಎಂದು ಅಭಿವೃದ್ದಿ ಕಾಮಗಾರಿ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಬೆಲವತ್ತ ಗ್ರಾಮದ ದಯಾನಂದ್, ಶಿವಕುಮಾರ್, ರಾಜಶೇಖರ್, ಕಡಬದ ರಾಜೇಶ್, ಬಾಲಕೃಷ್ಣ, ದಾಸರಕಲ್ಲಹಳ್ಳಿ ಲಕ್ಷ್ಮೀನಾರಾಯಣ್, ಲೋಕೋಪಯೋಗಿ ಇಲಾಖೆಯ ಎಇಇ ಯೋಗೀಶ್, ಗುತ್ತಿಗೆದಾರರಾದ ರಾಮಲಿಂಗೇಗೌಡ, ಕೃಷ್ಣೇಗೌಡ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ ಸಮೀಪ ಚಿರತೆ ಓಡಾಟ: ಆತಂಕದಲ್ಲಿ ನಾಗರಿಕರು

ಗುಬ್ಬಿ ಪಟ್ಟಣದ ಹೊರವಲಯದ ರಾಯವಾರ ಗ್ರಾಮದ ಮನೆಯೊಂದರ ಬಳಿ ಚಿರತೆ ಓಡಾಡಿರುವ...

ಗುಬ್ಬಿ | ಚೇಳೂರು ಪ್ರಜಾಸೇವಾ ಅಭಿಯಾನದಲ್ಲಿ ವಿಕಲಚೇತನರು, ಹಿರಿಯ ನಾಗರಿಕರ ಪರದಾಟ :ಅರ್ಜಿ ನೀಡಲು ಮೆಟ್ಟಿಲು ಹತ್ತಲಾಗದೆ ವಾಪಸ್‌

 ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ...

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ಗುಬ್ಬಿ | ಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ: ಸಿಪಿಐ ರಾಘವೇಂದ್ರ

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ...