ಗುಬ್ಬಿ | ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಿ : ಮುರುಳೀಧರ ಹಾಲಪ್ಪ

Date:

 ಬಹುಕಾಲದ ನಿರೀಕ್ಷೆಯ ಎಂಟು ಜಿಲ್ಲೆಗೆ ಜೀವಜಲವಾದ ಎತ್ತಿನಹೊಳೆ ಯೋಜನೆ ಮುಗಿಯುವ ಹಂತದಲ್ಲಿ ಅಸೂಯೆ ಗುಣವನ್ನು ಪ್ರದರ್ಶಿಸಿದ ಕೇಂದ್ರ ಸರ್ಕಾರ ಇಲ್ಲಸಲ್ಲದ ಕ್ಯಾತೆ ತೆಗೆದು ಯೋಜನೆ ಪೂರ್ಣಗೊಳಿಸಲು ಅಡ್ಡಿಪಡಿಸುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಕಿಡಿಕಾರಿದರು.

- Advertisement -

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2014 ರಲ್ಲಿ ಸಿದ್ದರಾಮಯ್ಯ ಅವರೇ ಚಾಲನೆ ನೀಡಿದ ಎತ್ತಿನಹೊಳೆ ಯೋಜನೆಗೆ ಈಗಾಗಲೇ ರಾಜ್ಯ ಸರ್ಕಾರ 23 ಸಾವಿರ ಕೋಟಿ ವಿನಿಯೋಗಿಸಿ ಶೇಕಡಾ 90 ರಷ್ಟು ಕೆಲಸ ಪೂರ್ಣವಾಗಿದೆ. ಈ ಸಮಯ ರಾಜ್ಯ ಸರ್ಕಾರಕ್ಕೆ ಹೆಸರು ಬರುತ್ತದೆ ಎಂಬ ಅಸೂಯೆಯಲ್ಲಿ ಅರಣ್ಯ, ಪರಿಸರ ಹೆಸರಿನಿಂದ ಯೋಜನೆಗೆ ಅಡ್ಡಗಾಲು ಹಾಕುತ್ತಿದೆ ಎಂದು ನೇರ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ರಾಜ್ಯದ ದೊಡ್ಡ ನೀರಾವರಿ ಯೋಜನೆ ಎನಿಸಿದ್ದ ಎತ್ತಿನಹೊಳೆ ಯೋಜನೆ ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಯ 76 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸುವ ಮಹತ್ತರ ಕಾರ್ಯ ನಡೆಸಿದೆ. 29 ತಾಲ್ಲೂಕಿನ 6657 ಗ್ರಾಮಗಳಿಗೆ ಒಟ್ಟು 14 ಟಿಎಂಸಿ ನೀರು 527 ಕೆರೆಗಳಿಗೆ ಹರಿಯಲಿದೆ. ಈ ಯೋಜನೆಯಿಂದ ಎಂಟು ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಯಾಗಲಿದೆ. ಒಟ್ಟು 252.69 ಕಿಮೀ ಉದ್ದದ ಕಾಲುವೆಯಲ್ಲಿ 208 ಕಿಮೀ ಕಾಮಗಾರಿ ಪೂರ್ಣವಾಗಿದೆ ಎಂದರು.

ಕೇಂದ್ರ ಸರ್ಕಾರ ಈ ಮಟ್ಟದ ಕಾಮಗಾರಿ ಆಗುವವರೆಗೆ ಸುಮ್ಮನಿದ್ದು ಈಗ ನಾಲ್ಕು ತಿಂಗಳಿಂದ ಏಕಾಏಕಿ ಮೂರು ಸಮಿತಿ ರಚಿಸಿ ಪರಿಸರ ಹೆಸರಿನಿಂದ ಅಡ್ಡಗಾಲು ಹಾಕಿದೆ. ಈ ಯೋಜನೆ ಬಗ್ಗೆ ಮನವರಿಕೆ ಮಾಡಲು ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ದೆಹಲಿ ಹಾಗೂ ಡೆಹ್ರಾಡೂನ್ ತೆರಳಿ 111 ಹೆಕ್ಟೇರ್ ಅರಣ್ಯ ಪ್ರದೇಶದ ಅರಣ್ಯೀಕರಣ ಬಗ್ಗೆ ಸವಿವರವಾಗಿ ಚರ್ಚಿಸಿದ್ದರೂ ಅನುಮತಿ ನೀಡುತ್ತಿಲ್ಲ. ದುರುದ್ದೇಶ ಎದ್ದು ಕಾಣುವ ಹಿನ್ನಲೆ ರೈತರಿಗೆ ಅವಶ್ಯ ಎತ್ತಿನಹೊಳೆ ಯೋಜನೆ ಉಳಿಸಲು ಜನವರಿ 4 ರಂದು ಕೆ.ಬಿ.ಕ್ರಾಸ್ ಬಳಿ ಜನಧ್ವನಿ ಕಾರ್ಯಕ್ರಮ ಮೂಲಕ ಗುಬ್ಬಿ, ತಿಪಟೂರು, ಚಿಕ್ಕನಾಯಕನಹಳ್ಳಿ ಹಾಗೂ ತುರುವೇಕೆರೆ ತಾಲ್ಲೂಕಿನ ಜನರಿಗೆ ಅರಿವು ಮೂಡಿಸಿ ಕೇಂದ್ರ ಸರ್ಕಾರದ ಜನವಿರೋಧಿತನ ಬಯಲಿಗೆ ಎಳೆಯಲಾಗುವುದು ಎಂದರು.

ಕೆಪಿಸಿಸಿ ಮಾಜಿ ಸದಸ್ಯ ಕೆ.ಆರ್.ತಾತಯ್ಯ ಮಾತನಾಡಿ ಬೃಹತ್ ಯೋಜನೆಯನ್ನು 2012 ರಲ್ಲಿ ಬಿಸಿ ಚರ್ಚೆ ನಡೆದು ಹಲವು ವಿರೋಧದ ನಡುವೆ ಎತ್ತಿನಹೊಳೆ ಯೋಜನೆ 2014 ರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾಲದಲ್ಲಿ ಚಾಲನೆ ಪಡೆದಿತ್ತು. ಭೂ ಸ್ವಾಧೀನ ವಿಚಾರದಲ್ಲಿ ಸಾಕಷ್ಟು ಅಡೆತಡೆ ಎದುರಾದಾಗ ಡಿ.ಕೆ.ಶಿವಕುಮಾರ್ ಅವರು ಖುದ್ದು ನಿಂತು ಎಲ್ಲಾ ಸಮಸ್ಯೆ ಬಗೆಹರಿಸಿ ಹತ್ತು ವರ್ಷದಲ್ಲಿ ಅಂತಿಮ ರೂಪಕ್ಕೆ ತಂದಿದ್ದಾರೆ. ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ. ಈ ಯೋಜನೆ ಕ್ರೆಡಿಟ್ ಕಾಂಗ್ರೆಸ್ ಸರ್ಕಾರಕ್ಕೆ ಲಭಿಸಲಿದೆ ಎಂಬ ಅಸೂಯೆಯಲ್ಲಿ ತಾಂತ್ರಿಕ ಸಮಸ್ಯೆ ಸೃಷ್ಟಿ ಮಾಡಿ ಎಂಟು ಜಿಲ್ಲೆಗೆ ಕುಡಿಯುವ ನೀರು ಇಲ್ಲದಂತೆ ಮಾಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡುತ್ತಿದೆ. ಈ ಕುತಂತ್ರ ಬಗ್ಗೆ ತುಮಕೂರು ಜಿಲ್ಲೆಯ ಫಲಾನುಭವಿ ತಾಲ್ಲೂಕಿನ ಜನರಿಗೆ ಅರಿವು ಮೂಡಿಸಲು ಜನಧ್ವನಿ ಕಾರ್ಯಕ್ರಮ ಕೆ.ಬಿ.ಕ್ರಾಸ್ ಬಳಿ ಆಯೋಜಿಸಲಾಗಿದೆ ಎಂದರು.

ಗುಬ್ಬಿ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ವೆಂಕಟೇಶ್ ಮಾತನಾಡಿ ಎತ್ತಿನಹೊಳೆ ಯೋಜನೆ ಮುಗಿಯುವ ಹಂತದಲ್ಲಿ ಕೆಲ ಇಲಾಖೆಗಳನ್ನು ಛೂ ಬಿಟ್ಟು ತಕರಾರು ಸೃಷ್ಟಿಸಿದ ಕೇಂದ್ರ ಸರ್ಕಾರದ ದುರುದ್ದೇಶ ಬಗ್ಗೆ ಜನರಿಗೆ ತಿಳಿಸಬೇಕಿದೆ. ಅರಣ್ಯ ಪರಿಸರ ಬಗ್ಗೆ ಅಡ್ಡಿ ಪಡಿಸುವ ಮಾತಿಗೆ ರಾಜ್ಯ ಸರ್ಕಾರ ನಾಶವಾಗುವ ಅರಣ್ಯಕ್ಕೆ ನೂರು ಪಟ್ಟು ಅರಣ್ಯ ಬೆಳೆಸುವ ವಾಗ್ದಾನ ಮಾಡಿದ್ದರೂ ತಕರಾರು ಮುಂದುವರೆಸಿದ್ದಾರೆ. ಈ ಬಗ್ಗೆ ಜಿಲ್ಲೆಯ ರೈತರಿಗೆ, ಮಹಿಳೆಯರಿಗೆ, ಯುವ ಜನಾಂಗಕ್ಕೆ ತಿಳಿಸಿ ಎತ್ತಿನಹೊಳೆ ಯೋಜನೆ ಉಳಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಮುಂದಿನ ಭಾನುವಾರ ತಾಲ್ಲೂಕಿನ ರೈತ ಭಾಂದವರು ಕೆ.ಬಿ.ಕ್ರಾಸ್ ಹೋರಾಟಕ್ಕೆ ಭಾಗಿಯಾಗುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಜಿ. ಎಚ್.ಜಗನ್ನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಯತೀಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಭಾಗ್ಯಮ್ಮ, ಮುಖಂಡರಾದ ಗುರು ರೇಣುಕಾರಾಧ್ಯ, ಎ.ನರಸಿಂಹಮೂರ್ತಿ, ವಾಸುಗೌಡ, ಈಶ್ವರಯ್ಯ, ಕಿಟ್ಟದಕುಪ್ಪೆ ನಾಗರಾಜ್, ತಿಮ್ಲಿಪಾಳ್ಯ ಶಶಿ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ ಸಮೀಪ ಚಿರತೆ ಓಡಾಟ: ಆತಂಕದಲ್ಲಿ ನಾಗರಿಕರು

ಗುಬ್ಬಿ ಪಟ್ಟಣದ ಹೊರವಲಯದ ರಾಯವಾರ ಗ್ರಾಮದ ಮನೆಯೊಂದರ ಬಳಿ ಚಿರತೆ ಓಡಾಡಿರುವ...

ಗುಬ್ಬಿ | ಚೇಳೂರು ಪ್ರಜಾಸೇವಾ ಅಭಿಯಾನದಲ್ಲಿ ವಿಕಲಚೇತನರು, ಹಿರಿಯ ನಾಗರಿಕರ ಪರದಾಟ :ಅರ್ಜಿ ನೀಡಲು ಮೆಟ್ಟಿಲು ಹತ್ತಲಾಗದೆ ವಾಪಸ್‌

 ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ...

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ಗುಬ್ಬಿ | ಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ: ಸಿಪಿಐ ರಾಘವೇಂದ್ರ

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ...