ಗುಬ್ಬಿ | ಪ್ರಜಾಪ್ರಭುತ್ವದಲ್ಲಿ ಮಕ್ಕಳ ಗ್ರಾಮ ಸಭೆ ಮಹತ್ವವಾದದ್ದು : ಪಿಡಿಒ ಶೇಖರ್

Date:

 ಗ್ರಾಮ ಪಂಚಾಯಿತಿ ಹಂತದಲ್ಲಿ ಮಕ್ಕಳಿಗಾಗಿ ವಿಶೇಷ ಗ್ರಾಮಸಭೆ ಹಮ್ಮಿಕೊಂಡಿರುವುದು ಪ್ರಜಾಸತ್ತಾತ್ಮಕ ಸೌಲಭ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದು ಎಂ.ಎಚ್.ಪಟ್ಟಣ ಗ್ರಾಪಂ ಪಿಡಿಒ ಕೆ.ಎಂ.ಶೇಖರ್ ತಿಳಿಸಿದರು.

- Advertisement -

ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಸರ್ ಸಂಸ್ಥೆ, ಗ್ರಾಮ ವಿಕಾಸ,ಅಮ್ಮನ ಮಡಿಲು ಪ್ರಕೃತಿ ಸಂಸ್ಥೆ, ಅನಲೆ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ವಿಶೇಷ ಗ್ರಾಮ ಸಭೆ ಉದ್ದೇಶಿಸಿ ಮಾತನಾಡಿ ಗ್ರಾಮಸಭೆ ಮಕ್ಕಳ ಹಕ್ಕು ಪ್ರತಿಪಾದಿಸುವ ಪ್ರಜಾಪ್ರಭುತ್ವ ತಿಳುವಳಿಕೆಗೆ ನೆರವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಶಿಕ್ಷಕರು ವಿದ್ಯಾರ್ಥಿನಿಯರ ಬಗ್ಗೆ ಕಾಳಜಿ ಹೊಂದಿರುವಂತೆ ಊರಿನ ಪ್ರಮುಖರು, ಜನಪ್ರತಿನಿಧಿಗಳು, ಪೋಷಕರು ಮತ್ತು ಸಮುದಾಯ ಮಕ್ಕಳ ಹಕ್ಕು ಚ್ಯುತಿ, ಮಕ್ಕಳ ಮೇಲಿನ ದೌರ್ಜನ್ಯ, ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಹೀಗೆ ಅನೇಕ ಸಮಾಜಘಾತುಕ ಕೃತ್ಯಗಳ ಬಗ್ಗೆ ಗ್ರಾಮೀಣ ಭಾಗದಲ್ಲೂ ಎಚ್ಚರಿಕೆ ವಹಿಸುವ ಅವಶ್ಯವಿದೆ. ಜೊತೆಗೆ ಮನೆಯಲ್ಲಿ ಪಾಲಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಹಾಗೂ ವಕೀಲ ಕೆ.ಎಸ್.ರಾಘವೇಂದ್ರ ಮಾತನಾಡಿ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಕ್ಕಳ ಹಕ್ಕುಗಳಲ್ಲಿ ಒಂದಾದ ಭಾಗವಹಿಸುವಿಕೆಯ ಹಕ್ಕನ್ನು ಪ್ರೋತ್ಸಾಹಿಸುವುದಕ್ಕಾಗಿ ಹಾಗೂ ಮಕ್ಕಳ ಮೂಲ ಸೌಕರ್ಯ, ರಕ್ಷಣೆಯ ಕುರಿತ ವಿಚಾರಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆ ಸೇರಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಸಲುವಾಗಿ ಮಕ್ಕಳ ಹಕ್ಕುಗಳ ಸಭೆ ನಡೆಸಲಾಗುತ್ತಿದೆ. ಮಕ್ಕಳಿಗಾಗಿಯೇ ಸರ್ಕಾರದಿಂದ ವಿಶೇಷ ಸೌಲಭ್ಯಗಳಿದ್ದು ಅವುಗಳನ್ನು ಬಳಸಿಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್ ಮಾತನಾಡಿ ಪ್ರೌಢಶಾಲೆಯಲ್ಲಿ ಹದಿಹರೆಯದ ಮಕ್ಕಳಿದ್ದು, ಶಿಕ್ಷಕರು ಅವರಿಗೆ ಪೋಕ್ಸೊ ಬಗ್ಗೆ ತಿಳಿಸಬೇಕು. ಮೊಬೈಲ್ ಗೀಳಿನಿಂದ ವಿದ್ಯಾರ್ಥಿಗಳ ವ್ಯಾಸಂಗ ಕುಂಠಿತವಾಗುತ್ತಿದೆ. ದೃಶ್ಯ ಮಾಧ್ಯಮಗಳು ದೃಶ್ಯಗಳನ್ನು ವೈಭವೀಕರಿಸದಂತೆ ತಡೆಯಲು ಕಟ್ಟುನಿಟ್ಟಿನ ಕಾನೂನು ಬರಬೇಕಿದೆ. ಈ ಜೊತೆಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಕ್ಕಳು ತಮ್ಮ ಅವಶ್ಯಕತೆ ಹಾಗೂ ಸಮಸ್ಯೆ ಬಗ್ಗೆ ಲಿಖಿತ ಅರ್ಜಿ ಸಲ್ಲಿಸಿ ಚರ್ಚಿಸಿದರು.

ವೇದಿಕೆಯಲ್ಲಿ ಗ್ರಾಪಂ ಸದಸ್ಯರಾದ ಪದ್ಮ, ರಾಮಕ್ಕ, ಸಾವಯವ ಕೃಷಿಕ ಮಹೇಶ್, ಸುಧಾ ಸೇರಿದಂತೆ ಶಾಲಾ ಮಕ್ಕಳು, ಶಿಕ್ಷಕರು, ಗ್ರಾಪಂ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...

ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ...

ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್...

ಗುಬ್ಬಿ | ವಿರೋಧ ಪಕ್ಷ ಎಂದರೆ ಸಲ್ಲದ ಆರೋಪಗಳಿಗೆ ಸೀಮಿತವಲ್ಲ: ಶಾಸಕ ಶ್ರೀನಿವಾಸ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ...