ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

Date:

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ ಮೇಲೆ ನಿಂತಿದೆ. ಈ ನಿಟ್ಟಿನಲ್ಲಿ ಸ್ವಚ್ಚತೆ ಎಂಬುದು ಭೌತಿಕ ಅಂಶವಲ್ಲ. ನಮ್ಮ ಆಂತರಿಕ ಪ್ರತಿಬಿಂಬ ಎಂದು ಎಂ.ಎಚ್.ಪಟ್ಟಣ ಗ್ರಾಪಂ ಪಿಡಿಓ ಕೆ.ಎಂ.ಶೇಖರ್ ಅಭಿಪ್ರಾಯಪಟ್ಟರು.

- Advertisement -

ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದ ಚಿಂತನೆಗೆ ತಮ್ಮ ಜೀವನವನ್ನು ಮುಡುಪಾಗಿಟ್ಟ ಈ ಎರಡೂ ಚೈತನ್ಯಗಳಿಗೆ ಭಕ್ತಿಭಾವ ತೋರುವುದು ಎಲ್ಲರ ಕರ್ತವ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧೀಜಿ ಅವರ ಸತ್ಯ ಅಹಿಂಸೆ ಸ್ವಚ್ಚತೆ ಹಾಗೂ ಸರಳ ಜೀವನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಅಂತಾರಾಷ್ಟ್ರೀಯ ಅಹಿಂಸಾ ದಿನವಾಗಿಯೂ ಈ ದಿನವನ್ನು ಗುರುತಿಸಲಾಗಿದೆ. ದೇಶಕ್ಕೆ ಸ್ವಾಂತಂತ್ರ್ಯ ತರಲು ಅವರು ನಡೆಸಿದ ಅಹಿಂಸಾ ಮಾರ್ಗ ಪರಿಣಾಮಕಾರಿಯಾಗಿ ಫಲಿಸಿದೆ. ಗಾಂಧೀ ವಾದವೂ ಇಂದಿಗೂ ಜನಮನದಲ್ಲಿದೆ ಎಂದರು.

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ದೇಶಕ್ಕಾಗಿ ಉತ್ತಮ ಆಳ್ವಿಕೆ ನೀಡಿ ದೇಶದ ಆರ್ಥಿಕ ಭದ್ರತೆಗೆ ಉತ್ತಮ ಯೋಜನೆ ರೂಪಿಸಿದ್ದರು. ನಮ್ಮ ಬಡ ರಾಷ್ಟ್ರವನ್ನು ಬಲಿಷ್ಠ ಗೊಳಿಸಲು ಉತ್ತಮ ಯೋಜನೆ ಮೂಲಕ ಮನೆಮಾತಾಗಿದ್ದರು. ಅವರ ಜೈ ಜವಾನ್ ಜೈ ಕಿಸಾನ್ ಘೋಷಣೆ ಅವರ ದೇಶ ಹಾಗೂ ಕೃಷಿಯ ಅಭಿಮಾನ ತೋರುತ್ತದೆ ಎಂದರು.

Advertisements

ಕಾರ್ಯಕ್ರಮದಲ್ಲಿ ಬಿಲ್ ಕಲೆಕ್ಟರ್ ರಾಘವೇಂದ್ರ, ಡಿಇಓ ಪುನೀತ್, ಗ್ರಂಥಪಾಲಕ ರಾಜಣ್ಣ, ಅಂಗನವಾಡಿ ಕಾರ್ಯಕರ್ತೆ ರಾಧಾಮಣಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಯುವಜನತೆ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು: ಡಾ.ಶಿವಣ್ಣ

ಯುವಜನತೆ ಶಿಕ್ಷಣದ ಜೊತೆಗೆ ಸಮಾಜದ ಬಗ್ಗೆ ಕಾಳಜಿ, ಜವಾಬ್ದಾರಿ ಹಾಗೂ ಸೇವಾ...

ಗುಬ್ಬಿ | ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

 ಮಧುಗಿರಿ ತಾಲ್ಲೂಕು ಕಾಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ದಲಿತ ಯುವಕ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...