ಗುಬ್ಬಿ | ದೇವಾಲಯದ ಜಾಗ ಅತಿಕ್ರಮಣ : ತೆರವು ಮಾಡಲು ಗ್ರಾಮಸ್ಥರ ಆಗ್ರಹ

Date:

ಗುಬ್ಬಿ ತಾಲ್ಲೂಕಿನ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಲೂರು ಹೊಸಪಾಳ್ಯ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಾಲಯದ ಸುತ್ತಲಿನ ಪ್ರಕಾರ ಸ್ಥಳವನ್ನು ತನ್ನದು ಎಂದು ಅತಿಕ್ರಮಣ ಮಾಡಿರುವ ಒಂದು ಕುಟುಂಬ ದೇವಾಲಯ ಆವರಣವನ್ನು ಒತ್ತುವರಿ ಮಾಡಿ ದನಕರುಗಳು, ಮೇಕೆಗಳು ಕಟ್ಟಿ ಹಾಕಿ ದೇವಸ್ಥಾನದ ಪಾವಿತ್ರ್ಯತೆ ಹಾಳು ಮಾಡುತ್ತಿದ್ದು, ಪ್ರಶ್ನಿಸಿದರೆ ಅವಾಚ್ಯ ಶಬ್ದಗಳಿಂದ ಜಗಳಕ್ಕೆ ಮುಂದಾಗುತ್ತಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿಗೆ ದೂರು ನೀಡಲಾಗಿದೆ. ಆದರೆ ಯಾವ ಕಾನೂನು ಕ್ರಮಕ್ಕೆ ಯಾವ ಅಧಿಕಾರಿಗಳು ಮುಂದಾಗಿಲ್ಲ ಎಂದು ಸ್ಥಳೀಯ ಗ್ರಾಮಸ್ಥರು, ದೇವಾಲಯದ ಭಕ್ತರು ದಿಢೀರ್ ಪ್ರತಿಭಟನೆ ನಡೆಸಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. 

- Advertisement -

ದೇವಾಲಯದ ಬಳಿ ಜಮಾಯಿಸಿದ್ದ ನೂರಾರು ಭಕ್ತರು ಕಳೆದ ನಲವತ್ತು ವರ್ಷಗಳ ಹಿಂದೆ ದಾನವಾಗಿ ನೀಡಿದ ಜಮೀನಿನಲ್ಲಿ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಾಲಯ ನಿರ್ಮಾಣವನ್ನು ಮಾಡಲಾಗಿತ್ತು. ಈಗ ಪಕ್ಕದ ಜಮೀನಿನ ನವೀನ್ ಕುಮಾರ್ ಮತ್ತು ಕುಟುಂಬ ದೇವಾಲಯದ ಜಾಗ ನಮ್ಮದು ಎಂದು ಅತಿಕ್ರಮಣ ಮಾಡಲು ಮುಂದಾಗಿದ್ದಾರೆ. ಪ್ರಶ್ನೆ ಮಾಡಿದರೆ ನಮ್ಮದು ಎಂದು ದಬ್ಬಾಳಿಕೆ ಮಾಡುತ್ತಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈಗಾಗಲೇ ದೇವಾಲಯದ ಹೆಸರಿನಲ್ಲಿ ಖಾತೆ ಮಾಡಲಾಗಿದೆ. ನಲವತ್ತು ಅಡಿಗಳ ಜಾಗವನ್ನು ಒತ್ತುವರಿ ಮಾಡಿಕೊಂಡು ದೇವಾಲಯದ ಸುತ್ತಲೂ ಪ್ರಕಾರದ ಜಾಗವನ್ನು ಸ್ವಂತಕ್ಕೆ ಬಳಸಿಕೊಂಡು ಜಾನುವಾರು ಸಾಕಾಣಿಕೆ ಹಾಗೂ ಚಪ್ಪಲಿ ಬಿಡುವ ಸ್ಥಳ ಮಾಡಿಕೊಂಡಿದ್ದಾರೆ. ಜೊತೆಗೆ ತಮ್ಮ ವಾಹನವನ್ನು ನಿಲುಗಡೆ ಮಾಡುವ ಸ್ಥಳವಾಗಿ ಮಾಡಿಕೊಂಡು ದೇವಾಲಯವನ್ನು ಮಲೀನ ಗೊಳಿಸಿದ್ದಾರೆ ಎಂದು ಸ್ಥಳೀಯ ಗೌರಮ್ಮ ದೂರಿದರು.

ದೇವಾಲಯದ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡಲು ಸಹ ಅನುವು ಮಾಡುತ್ತಿಲ್ಲ. ಯಾವುದೇ ಅಧಿಕಾರಿಗಳು ದೇವಾಲಯದ ಒತ್ತುವರಿ ಜಾಗ ತೆರೆವು ಮಾಡಿಲ್ಲ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಮ್ಮ ದೇವಾಲಯದ ಸ್ಥಳವನ್ನು ಅಳತೆ ಮೂಲಕ ದೇವಾಲಯಕ್ಕೆ ಬಿಡಿಸಿ ಕೊಡಬೇಕು ಎಂದು ಸ್ಥಳೀಯ ಪರಮೇಶ್ ಪೂಜಾರ್ ಒತ್ತಾಯ ಮಾಡಿದರು.

ದಬ್ಬಾಳಿಕೆ ಮೂಲಕ ದೇವಾಲಯಕ್ಕೆ ಬರುವ ಭಕ್ತರನ್ನು ಬೆದರಿಸುವ ಜೊತೆಗೆ ದೇವಾಲಯದ ಪ್ರಕಾರ ಜಾಗದಲ್ಲಿ ಓಡಾಡುವವರ ಮೇಲೆ ಜಗಳಕ್ಕೆ ಮುಂದಾಗುತ್ತಾರೆ. ಈ ಸ್ಥಳ ನಮ್ಮದು, ದೇವಾಲಯಕ್ಕೆ ಸಂಬಂಧಿಸಿದ್ದು ಏನೂ ಇಲ್ಲ ಎಂಬ ಮಾತುಗಳಾಡಿ ವ್ಯಾಜ್ಯಕ್ಕೆ ಕುಟುಂಬವೇ ಬರುತ್ತದೆ. ಈ ಸಂಬಂಧ ಜಿಲ್ಲಾಡಳಿತಕ್ಕೆ ದೂರು ನೀಡಲು ಸಜ್ಜಾಗಿದ್ದೇವೆ. ಸ್ಥಳೀಯ ಗ್ರಾಮ ಪಂಚಾಯಿತಿ ಮೊದಲು ಸ್ಥಳ ಪರಿಶೀಲನೆ ಮಾಡಲಿ ಎಂದು ಪ್ರತಿಭಟನಕಾರರು ಒಕ್ಕೊರಲಿನ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯರಾದ ಜಗದೀಶ್ ಗೌಡ, ಪ್ರಕಾಶ್, ಪಾರ್ವತಮ್ಮ, ಮಂಜಮ್ಮ, ಮಲ್ಲಮ್ಮ, ಶರತ್, ರತ್ನಮ್ಮ, ವಿಮಲಮ್ಮ, ತಿಮ್ಮಕ್ಕ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ ಸಮೀಪ ಚಿರತೆ ಓಡಾಟ: ಆತಂಕದಲ್ಲಿ ನಾಗರಿಕರು

ಗುಬ್ಬಿ ಪಟ್ಟಣದ ಹೊರವಲಯದ ರಾಯವಾರ ಗ್ರಾಮದ ಮನೆಯೊಂದರ ಬಳಿ ಚಿರತೆ ಓಡಾಡಿರುವ...

ಗುಬ್ಬಿ | ಚೇಳೂರು ಪ್ರಜಾಸೇವಾ ಅಭಿಯಾನದಲ್ಲಿ ವಿಕಲಚೇತನರು, ಹಿರಿಯ ನಾಗರಿಕರ ಪರದಾಟ :ಅರ್ಜಿ ನೀಡಲು ಮೆಟ್ಟಿಲು ಹತ್ತಲಾಗದೆ ವಾಪಸ್‌

 ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ...

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ಗುಬ್ಬಿ | ಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ: ಸಿಪಿಐ ರಾಘವೇಂದ್ರ

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ...