ಗುಬ್ಬಿ | ಭೂಮಾಪನ ಇಲಾಖೆ ವಿರುದ್ಧ ಸಿಡಿದೆದ್ದ ರೈತ ಸಂಘ

Date:

 ಗುಬ್ಬಿ ವೀರಣ್ಣನವರ ಮೊಮ್ಮಗಳು ಹಾಗೂ ಮಾಜಿ ಸಂಸದೆ ಬಿ.ಜಯಶ್ರೀ ಅವರನ್ನು ಅಲೆದಾಡಿಸಿದ ಭೂಮಾಪನ ಇಲಾಖೆಯ ಸರ್ವೇಯರ್ ಶಿವಾನಂದ್ ವಿರುದ್ಧ ಸಿಡಿದ ರೈತ ಸಂಘದ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ದಿಢೀರ್ ಪ್ರತಿಭಟನೆ ನಡೆಸಿ ಭೂ ಮಾಪಕ ಶಿವಾನಂದ್ ಅಮಾನತುಗೊಳಿಸಿ ಬ್ಲಾಕ್ ಲಿಸ್ಟ್ ಗೆ ಸೇರಿಸಬೇಕು ಎಂದು ಆಗ್ರಹಿಸಿದರು.

- Advertisement -

ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ದೇಶದಲ್ಲೇ ಖ್ಯಾತ ರಂಗಭೂಮಿ ಕಲಾವಿದರಾಗಿ ರಾಜ್ಯಸಭಾ ಸದಸ್ಯರಾಗಿದ್ದ ಜಯಶ್ರೀ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಸರ್ವೇ ಕೆಲಸ ಮಾಡಿಕೊಡಲು ಒಂದು ತಿಂಗಳಲ್ಲಿ ಮೂರು ಬಾರಿ ಹಣ ಕಟ್ಟಿಸಿ ಅಲೆದಾಡಿಸಿದ್ದು ಇಡೀ ತಾಲ್ಲೂಕಿನ ಮರ್ಯಾದೆ ಪ್ರಶ್ನೆಯಾಗಿದೆ. ಇಂತಹ ವರ್ತನೆ ತೋರಿದ ಪರವಾನಗಿ ಸರ್ವೇಯರ್ ಶಿವಾನಂದ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಮಾತನಾಡಿ ಭೂ ಮಾಪನ ಇಲಾಖೆಗೆ ನಿತ್ಯ ನೂರಾರು ಮಂದಿ ರೈತರು ಭೇಟಿ ನೀಡುತ್ತಾರೆ. ಕಿಷ್ಕಿಂದೆ ರೀತಿಯ ಕಚೇರಿಯಲ್ಲಿ ರೈತರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಿಲ್ಲ. ತಾಲ್ಲೂಕು ಕಚೇರಿಯ ಹಲವು ಶಾಖೆಯಲ್ಲಿ ಹಿರಿಯರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಿಲ್ಲ. ಈ ಬಗ್ಗೆ ಮನವಿ ಮಾಡಿದ್ದರೂ ಇನ್ನೂ ಆಸನಗಳು, ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ವೇಯರ್ ಶಿವಾನಂದ್ ನಡೆ ತೀರಾ ಬೇಸರ ತಂದಿದೆ. ಮಾಜಿ ಸಂಸದೆ ಜಯಶ್ರೀ ಅವರನ್ನು ಈ ರೀತಿ ನಡೆಸಿಕೊಂಡ ಇಲಾಖೆ ಸಾಮಾನ್ಯ ರೈತರನ್ನು ಇನ್ಯಾವ ರೀತಿ ನಡೆಸಿಕೊಳ್ಳುತ್ತದೆ ಎಂಬುದು ಯೋಚಿಸಬೇಕಿದೆ. ಮುದ್ದನಹಳ್ಳಿ ಗ್ರಾಮದ ರೈತರೊಬ್ಬರ ಅರ್ಜಿಗೆ ಮಧ್ಯವರ್ತಿ ಐದು ಸಾವಿರ ನೀಡಿದರೆ ತಕ್ಷಣ ಕೆಲಸ ಆಗುತ್ತೆ ಎಂಬ ಮಾತು ಕೇಳಿಬಂದಿದೆ. ಈ ಜೊತೆಯಲ್ಲಿ ಕಚೇರಿಯ ಸಿಬ್ಬಂದಿ ಮಾಡುವ ತಪ್ಪಿಗೆ ನಾವು ಮತ್ತೊಮ್ಮೆ ಹಣ ಕಟ್ಟಿ ಸರ್ವೇ ಮಾಡಿಸಿಕೊಳ್ಳಬೇಕಿದೆ. ಈ ರೀತಿಯಲ್ಲಿ ತಿಂಗಳುಗಟ್ಟಲೆ ಅಲೆದಾಡಿಸುತ್ತಾರೆ. ಈ ಬಗ್ಗೆ ನೂರಾರು ರೈತರು ದೂರುತ್ತಾರೆ. ಈ ಜೊತೆಗೆ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಿಲ್ಲ. ಹಿರಿಯರು, ವಿಕಲಚೇತನರು ನಿಂತುಕೊಂಡೇ ಕೆಲಸ ಮಾಡಿಸಿಕೊಳ್ಳುವ ದುಸ್ಥಿತಿ ಎದುರಾಗಿದೆ. ಕೆಲ ಶಾಖೆಯಲ್ಲಿ ರೈತರ ಅರ್ಜಿಗೆ ಸ್ವೀಕೃತಿ ಪತ್ರ ನೀಡುತ್ತಿಲ್ಲ. ಕೊಟ್ಟರೆ ಬಿಳಿ ಚೀಟಿ ನೀಡುತ್ತಾರೆ ಎಂದು ದೂರಿದರು.

ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು ಕೆಲ ಶಾಖೆಯಲ್ಲಿ ಅವರದ್ದೇ ಮೇಲುಗೈ ಆಗುತ್ತದೆ. ಸಾಮಾನ್ಯ ರೈತ ಇಂದಿಗೂ ಅಲೆದಾಡುತ್ತಿದ್ದಾನೆ. ನಾಲ್ಕೈದು ಅರ್ಜಿ ಹಿಡಿದು ಒಳ ಹೋಗುವ ಮಧ್ಯವರ್ತಿ ದಿನದಲ್ಲಿ ಕೆಲಸ ಮಾಡಿಸುತ್ತಾನೆ. ರೈತರ ಕೆಲಸ ಯಾಕೆ ಆಗುವುದಿಲ್ಲ ಎಂದು ಕಿಡಿಕಾರಿದರು.

ನಂತರ ಸ್ಥಳಕ್ಕೆ ಆಗಮಿಸಿದ ಗ್ರೇಡ್ 2 ತಹಶೀಲ್ದಾರ್ ಶಶಿಕಲಾ ಹಾಗೂ ಭೂ ಮಾಪನ ಇಲಾಖೆಯ ಸಹಾಯಕ ನಿರ್ದೇಶಕ ತಿಮ್ಮಯ್ಯ ಅವರನ್ನು ಪ್ರಶ್ನಿಸಿದ ರೈತರು ರೈತರ ಅರ್ಜಿಗಳಿಗೆ ಕೂಡಲೇ ಉತ್ತರ ನೀಡಬೇಕು. ಮೂಲಭೂತ ವ್ಯವಸ್ಥೆ ಮಾಡಬೇಕು. ಶಿವಾನಂದ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಂಪ್ಯೂಟರ್ ಆಪರೇಟರ್ ಆಗಾಗ್ಗೆ ಬದಲಿಸಬೇಕು ಎಂದು ಒತ್ತಾಯಿಸಿ ಬೇಡಿಕೆಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಬಿದರೆ ಲೋಕೇಶ್, ರೈತಸಂಘದ ಸಿ.ಟಿ.ಕುಮಾರ್, ಯತೀಶ್, ರವೀಶ್, ಸಿದ್ದೇಶ್, ದೇವರಾಜ್, ಜಗದೀಶ್, ಗಂಗರೇವಣ್ಣ, ಕನ್ನಿಗಪ್ಪ, ಪ್ರಕಾಶ್, ಈಶ್ವರಪ್ಪ, ಬಸವರಾಜ್, ಸುರೇಶ್, ಶಿವಕುಮಾರ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ...

ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್...

ಗುಬ್ಬಿ | ವಿರೋಧ ಪಕ್ಷ ಎಂದರೆ ಸಲ್ಲದ ಆರೋಪಗಳಿಗೆ ಸೀಮಿತವಲ್ಲ: ಶಾಸಕ ಶ್ರೀನಿವಾಸ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ...

ಗುಬ್ಬಿ | ಪ್ರಜಾ ಸೇವಾ ಆಂದೋಲನ ಯಶಸ್ವಿಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳಿಗೆ ಒಂದೇ ಸೂರಿನಡಿ ಸ್ಥಳದಲ್ಲೇ ಪರಿಹಾರ ಒದಗಿಸುವ...