ಗುಬ್ಬಿ | ವಿಜಯೇಂದ್ರ ಎದುರೇ ಬಿಜೆಪಿ ಬಣಗಳ ಕಿತ್ತಾಟ: ಹೆಸರು ಹೇಳದ್ದೇ ಗಲಾಟೆಗೆ ಕಾರಣ

Date:

 ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪಕ್ಷದ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಗುಬ್ಬಿ ತಾಲ್ಲೂಕಿನ ಚೇಳೂರಿನಲ್ಲಿ ನಡೆದಿದೆ.

- Advertisement -

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಗುಬ್ಬಿಯ ಹೇರೂರು ಮತ್ತು ಚೇಳೂರು ಗ್ರಾಮಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹೋಬಳಿ ಕೇಂದ್ರ ಚೇಳೂರಿನಲ್ಲಿ ಯಾತ್ರೆ ನಡೆಯುತ್ತಿದ್ದಾಗ, ಬಿಜೆಪಿ ಮುಖಂಡ ಹಾಗೂ ಜಿ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ಬಾಬು ಸ್ವಾಗತ ಭಾಷಣ ಮಾಡುತ್ತಿದ್ದರು. ಈ ವೇಳೆ ವೇದಿಕೆಯಲ್ಲಿದ್ದ, 2023ರ ವಿಧಾನಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಅಭ್ಯರ್ಥಿಯಾಗಿದ್ದ ದಿಲೀಪ್ ಕುಮಾರ್ ಅವರ ಹೆಸರನ್ನು ಉಲ್ಲೇಖಿಸಲಿಲ್ಲ ಎಂದು ದಿಲೀಪ್ ಕುಮಾರ್ ಅಭಿಮಾನಿಗಳು ರಾಜ್ಯಾಧ್ಯಕ್ಷರ ಎದುರೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

1004122766

ಕ್ಷಣಾರ್ಧದಲ್ಲಿ ಚಂದ್ರಶೇಖರ್ ಮತ್ತು ದಿಲೀಪ್ ಕುಮಾರ್ ಬೆಂಬಲಿಗರ ನಡುವೆ ವಾಗ್ವಾದ ಆರಂಭವಾಗಿ, ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ, ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಹಾಗೂ ಸ್ವತಃ ದಿಲೀಪ್ ಕುಮಾರ್ ಅವರೇ ಗಲಾಟೆ ನಿಲ್ಲಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಒಂದು ಹಂತದಲ್ಲಿ ಕಾರ್ಯಕರ್ತರ ವಿರುದ್ಧ ಹರಿಹಾಯ್ದ ವಿನಯ್ ಬಿದರೆ, “ನಮ್ಮ ರಾಜ್ಯಾಧ್ಯಕ್ಷರು ಇರುವ ಸಭೆಯಲ್ಲಿ ಕಾರ್ಯಕರ್ತರು ಬಹಳ ಗಂಭೀರವಾಗಿ ಸಭಾ ಮರ್ಯಾದೆ ಕಾಪಾಡುತ್ತಾರೆ. ಇಲ್ಲಿ ಅವರ ಎದುರೇ ಒಬ್ಬರಿಗೊಬ್ಬರು ಕಿತ್ತಾಡುತ್ತಿದ್ದೀರಿ, ಇದು ರಾಜ್ಯಾಧ್ಯಕ್ಷರಿಗೆ ಮಾಡಿದ ಅವಮಾನ” ಎಂದು ಕಿಡಿಕಾರಿದರು.

ಆದರೂ ಯಾರ ಮಾತಿಗೂ ಕಿವಿಗೊಡದ ಕಾರ್ಯಕರ್ತರು ಪರಸ್ಪರ ನಿಂದನೆಗೆ ಇಳಿದರು.

ಪರಿಸ್ಥಿತಿ ಕೈಮೀರುವ ಹಂತದಲ್ಲಿ, ಮಾತನಾಡಲು ಎದ್ದುನಿಂತ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಎರಡೂ ಬಣಗಳ ಅಭಿಮಾನಿಗಳಿಗೆ ತಿಳಿಹೇಳಿ, ಜಗಳವನ್ನು ಶಮನಗೊಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೇವು ಬ್ಯಾಂಕ್‌ಗಾಗಿ ರೈತರ ರಣಕಹಳೆ: ಗೋವುಗಳೊಂದಿಗೆ ತುಮಕೂರಿನತ್ತ ರೈತರ ಜಾಥಾ!

ಬರದ ಬರೆಗೆ ಬೆಂದ ಜಾನುವಾರುಗಳಿಗೆ ಮೇವು ಕೊಡಿ ಎಂದು ಆಗ್ರಹಿಸಿ ತಿಪಟೂರಿನಿಂದ...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ತುಮಕೂರು | ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ ವಿಶ್ವಕ್ಕೇ ಮಾದರಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ ಮತ್ತು...

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...