ಗುಬ್ಬಿ | ಮಹಿಳಾ ಮೀಸಲಾತಿ ಶೇ.33 ಬದಲು 50 ರಷ್ಟು ನೀಡುವುದು ಸೂಕ್ತ : ಶಾಸಕ ಎಸ್.ಆರ್.ಶ್ರೀನಿವಾಸ್

Date:

ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ನಮ್ಮ ಬೆಂಬಲವಿದೆ. ಆದರೆ ಶೇ.33% ಬದಲು 50% ರಷ್ಟು ನೀಡುವುದು ಒಳ್ಳೆಯದು. ಮಹಿಳೆಯರಿಗೆ ಅವಕಾಶ ಸಿಕ್ಕರೆ ಪ್ರಾಮಾಣಿಕ ಕೆಲಸವನ್ನು ನಿರೀಕ್ಷೆ ಮಾಡಬಹುದು ಎಂದು ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.

- Advertisement -

ಗುಬ್ಬಿ ಪಟ್ಟಣದ ಬಿಲ್ಲೆಪಾಳ್ಯ ಗ್ರಾಮದಲ್ಲಿ 37 ಲಕ್ಷ ಅನುದಾನದಲ್ಲಿ ರಸ್ತೆ ಕಾಮಗಾರಿ, ಬಲದಂಡೆ ಕೋಡಿ ಚರಂಡಿ ಕಾಮಗಾರಿಗೆ 75 ಲಕ್ಷ, ಬಸವ ನಗರದ ರಸ್ತೆ ಕಾಮಗಾರಿಗೆ 1 ಕೋಟಿ, ಸುಭಾಷ್ ನಗರ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿಗೆ 69 ಲಕ್ಷ ಅನುದಾನ ಮತ್ತು ಪಟ್ಟಣದ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ 9 ಕೋಟಿ ಅನುದಾನದ ಎಲ್ಲಾ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಒಟ್ಟಿಗೆ ಜಾರಿಗೊಳ್ಳುವ ಸಾಧ್ಯತೆ ಇದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಎಲ್ಲಾ ರಂಗದಲ್ಲಿಯೂ ಮಹಿಳೆಯರೇ ಮುಂದೆ ಇದ್ದು ನಮ್ಮ ತಾಲೂಕಿನಲ್ಲಿಯೂ ಮಹಿಳಾ ಅಧಿಕಾರಿಗಳು ಹೆಚ್ಚಾಗಿದ್ದಾರೆ. ಪ್ರಾಮಾಣಿಕ ಕೆಲಸ ಇಲ್ಲಿ ನಡೆದಿದೆ ಎಂದ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಸರಿಯಿದೆ. 2029 ರ ಸಂಸದರ ಚುನಾವಣೆ ವೇಳೆಗೆ ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ವಿಂಗಡಣೆ ಒಟ್ಟಿಗೆ ಆಗಬೇಕಿದೆ ಎಂದರು.

ಹೈಕಮಾಂಡ್ ಭೇಟಿ ಕೇವಲ ಮಂತ್ರಿಸ್ಥಾನದ ಲಾಭಿ ಅಲ್ಲದೆ ಸಿಎಂ ಕುರ್ಚಿ ಬದಲಾವಣೆಗೆ ನಡೆಯುತ್ತಿರುವ ಒಂದು ಒಳಜಗಳ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾಡಿರುವ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಸಚಿವ ಸ್ಥಾನಕ್ಕೆ ಲಾಭಿ ನಡೆಸಿಲ್ಲವೇ, ಎಷ್ಟು ಮಂದಿ ಸಿಎಂ ಹುದ್ದೆ ಅಲಂಕರಿಸಿದ್ದಾರೆ. ಸಹಜವಾಗಿ ನಡೆಯುವ ಪ್ರಕ್ರಿಯೆ ಇದಾಗಿದ್ದು ಹೈಕಮಾಂಡ್ ಭೇಟಿಗೆ ಕೆಲವು ಶಾಸಕರು ಮುಂದಾಗಿ ಅವರವರ ಬೇಡಿಕೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ ಅದಕ್ಕೆ ಏನೇನೋ ಕಥೆ ಕಟ್ಟೋದು ಸರಿಯಲ್ಲ ಎಂದು ಕುಟುಕಿದರು.

ವಿ.ಸೋಮಣ್ಣ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ನಾವು ನೇರವಾಗಿ ಹೇಳ್ತಾ ಇದ್ದೀವಿ. ಆದರೆ ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳಿಕೆ ನೀಡಿರುವುದು ಸರಿಯಲ್ಲ. ಅಧಿಕಾರ ಇದ್ದಾಗ ಒಂದು ಮಾತು, ಇಲ್ಲದಾಗ ಒಂದು ಮಾತು ಆಡಿದರೆ ಜನ ಉಗಿಯುತ್ತಾರೆ. ಛೀಮಾರಿ ಹಾಕುತ್ತಾರೆ. ಅಧಿಕಾರ ಬೇಕೆಂದು ಸುಳ್ಳು ಹೇಳಿಕೆ ನೀಡುವುದು ಮುಂದಿನ ಪೀಳಿಗೆಗೆ ಮಾರಕ ಎಂದು ಎಸ್.ಆರ್.ಶ್ರೀನಿವಾಸ್ ಹೇಳಿದರು

ಯಾವ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ. ದೇವೇಗೌಡರ ಕುಟುಂಬ ಎಲ್ಲರೂ ರಾಜಕಾರಣಿಗಳು, ಯಡಿಯೂರಪ್ಪ ಅವರ ಮನೆಯಲ್ಲೂ ಸಹ ಇದೆ. ಬಿಜೆಪಿ ಜೆಡಿಎಸ್ ಎಲ್ಲಾ ಪಕ್ಷದಲ್ಲಿ ಕುಟುಂಬ ರಾಜಕಾರಣ ಇರುವಾಗ, ಆತ್ಮಸಾಕ್ಷಿ, ಮಾನ ಮರ್ಯಾದೆ ಇರುವವರು ಕುಟುಂಬ ರಾಜಕಾರಣ ಎಂಬ ಮಾತೇ ಆಡುವಂತಿಲ್ಲ ಎಂದು ಎಸ್.ಆರ್.ಶ್ರೀನಿವಾಸ್ ಹೇಳಿದರು 

ಈ ಸಂದರ್ಭದಲ್ಲಿ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಬಿಲ್ಲೇಪಾಳ್ಯ ನರಸಿಂಹಮೂರ್ತಿ, ಮಹಮದ್ ಸಾದಿಕ್, ಸಿ.ಮೋಹನ್, ಅಣ್ಣಪ್ಪಸ್ವಾಮಿ, ಪಿ.ಟಿ.ಸತೀಶ್, ಉಂಡೆ ರಾಮಣ್ಣ, ಲೋಕೇಶ್ ಬಾಬು ಸೇರಿದಂತೆ ಸಾರಿಗೆ ನಿಗಮದ ಅಧಿಕಾರಿಗಳು ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...