ಗುಬ್ಬಿ | ಪ್ರಜಾಪ್ರಭುತ್ವ ಎತ್ತಿಹಿಡಿಯುವ ಕೆಲಸ ಪತ್ರಕರ್ತರದ್ದು: ಎಂ.ಟಿ.ಕೃಷ್ಣಪ್ಪ

Date:

 ಸಮಾಜದಲ್ಲಿ ಪ್ರಜಾಪ್ರಭುತ್ವ ಮೌಲ್ಯ ಎತ್ತಿಹಿಡಿಯುವ ಕೆಲಸ ಪತ್ರಕರ್ತರು ಮಾಡುತ್ತಾರೆ. ಅವರಿಗೆ ಕಚೇರಿ ಸರ್ಕಾರವೇ ನಿರ್ಮಿಸಿ ಕೊಡಬೇಕು ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.

- Advertisement -

ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಆರಂಭವಾದ ನೂತನ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು ಪತ್ರಕರ್ತರು ಸಮಾಲೋಚನೆ ಮಾಡಿಕೊಳ್ಳಲು ಸೂಕ್ತ ಕಚೇರಿ ಅವಶ್ಯವಿದೆ. ಅದನ್ನು ಈಗ ತಾಲ್ಲೂಕು ಘಟಕ ಆರಂಭಿಸಿದೆ. ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಲಿ ಎಂದು ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಸಮಾಜದ ಆಗು ಹೋಗುಗಳ ಬಗ್ಗೆ ನಿಖರ ಮಾಹಿತಿ ನೀಡುವ ಜೊತೆಗೆ ಯಾವುದೇ ವಿಚಾರದ ಸತ್ಯಾಸತ್ಯತೆಯನ್ನು ಬಿತ್ತರಿಸುವ ಕೆಲಸ ಮಾಧ್ಯಮದವರು ಮಾಡುತ್ತಾರೆ. ತಾಲ್ಲೂಕಿನಲ್ಲಿ ನಡೆಯುವ ಸಣ್ಣ ವಿಚಾರದಿಂದ ದೊಡ್ಡ ವಿಚಾರಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಮಾಧ್ಯಮ ಕ್ಷೇತ್ರಕ್ಕೆ ತನ್ನದೇ ಕಚೇರಿ ಅವಶ್ಯವಿದೆ. ಭ್ರಷ್ಟಾಚಾರ ವಿರೋಧಿಗಳಾಗಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪತ್ರಕರ್ತರು ಪಣ ತೊಡಬೇಕು ಎಂದು ಕರೆ ನೀಡಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್ ಮಾತನಾಡಿ ಪತ್ರಕರ್ತರು ತಾಲ್ಲೂಕಿನಲ್ಲಿ ನಡೆಯುವ ಎಲ್ಲಾ ವಿಚಾರವನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಪತ್ರಕರ್ತರ ಕೆಲಸ ಪವಿತ್ರ ಎನಿಸಿದೆ. ಬಡವರ ಪರ ನಿಂತು ನ್ಯಾಯ ಒದಗಿಸುವ ಕೆಲಸದಿಂದ ಭ್ರಷ್ಟ ಅಧಿಕಾರಿಗಳು, ರಾಜಕಾರಣಿಗಳನ್ನು ತಪ್ಪಿತಸ್ಥರನ್ನಾಗಿ ನಿಲ್ಲಿಸುವ ಶಕ್ತಿ ಪತ್ರಕರ್ತರಿಗೆ ಇದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಪೊಲೀಸರಷ್ಟೇ ಪತ್ರಕರ್ತರಿಗೂ ಜವಾಬ್ದಾರಿ ಇದೆ ಎಂದರು.

ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಡಿ.ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ದೊಡ್ಡಗುಣಿ, ಜಿಲ್ಲಾ ನಿರ್ದೇಶಕ ಯೋಗೀಶ್ ಮೆಳೆಕಲ್ಲಹಳ್ಳಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕೆ.ಸಂಜಯ್, ಖಜಾಂಚಿ ಆನಂದ್ ದೀಕ್ಷಿತ್, ಜೆಡಿಎಸ್ ಮುಖಂಡರಾದ ಬೋರಪ್ಪನಹಳ್ಳಿ ಕುಮಾರ್, ಜಗದೀಶ್, ಗಿರೀಶ್ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ಗುಬ್ಬಿ | ಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ: ಸಿಪಿಐ ರಾಘವೇಂದ್ರ

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ...

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...