ಗುಬ್ಬಿ | ಕಡಬ ಎಸ್ ಬಿಐ ಬ್ಯಾಂಕ್ ಎಟಿಎಂ ಲೂಟಿ : ಗ್ಯಾಸ್ ಕಟರ್ ಬಳಸಿ ಲಕ್ಷಾಂತರ ರೂಗೆ ಕನ್ನ

Date:

ಗುಬ್ಬಿ  ತಾಲ್ಲೂಕಿನ ಕಡಬ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿ ಕಚೇರಿ ಪಕ್ಕದಲ್ಲಿನ ಎಸ್ ಬಿಐ ಬ್ಯಾಂಕ್ ಗೆ ಸಂಬಂಧಿಸಿದ ಎಟಿಎಂ ಗೆ ತಡರಾತ್ರಿ ನುಗ್ಗಿದ ಖದೀಮರು ಗ್ಯಾಸ್ ಕಟರ್ ಬಳಸಿ ಲಕ್ಷಾಂತರ ರೂಗಳನ್ನು ದೋಚಿದ ಘಟನೆ ತಡರಾತ್ರಿ ನಡೆದಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

- Advertisement -

ಗುಬ್ಬಿ ತಾಲೂಕಿನ ಮೈಸೂರು ಸಂಪರ್ಕದ ಮಾರ್ಗ ಮಧ್ಯೆಯ ಕಡಬ ಗ್ರಾಮ ಪ್ರಮುಖ ಹೋಬಳಿ ಕೇಂದ್ರವಾಗಿದ್ದು ವ್ಯಾಪಾರ ಕೇಂದ್ರ ಎನಿಸಿದೆ. ಬಸ್ ನಿಲ್ದಾಣ ಸಮೀಪ ಪೊಲೀಸ್ ಉಪ ಠಾಣೆಗೆ ಕೂಗಳತೆಯ ಎಸ್ ಬಿಐ ಎಟಿಎಂ ಗೆ ಕಟರ್ ಮೂಲಕ ಕನ್ನ ಹಾಕಿರುವ ಕಳ್ಳರು ಸುಮಾರು 13 ರಿಂದ 14 ಲಕ್ಷ ರೂಪಾಯಿ ಹಣ ದೋಚಿರುವ ಬಗ್ಗೆ ಸಾರ್ವಜನಿಕರಲ್ಲಿ ಚರ್ಚೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ವಿಚಾರ ತಿಳಿದ ಕೂಡಲೇ ಗುಬ್ಬಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಇನ್ನಿತರ ಸಾಕ್ಷಾಧಾರಕ್ಕೆ ಮುಂದಾಗಿದ್ದು ತುಮಕೂರು ಎಎಸ್ಪಿ ಪುರುಷೋತ್ತಮ್ ಸೇರಿದಂತೆ ತಿಪಟೂರು ಡಿವೈಎಸ್ಪಿ ಹಾಗೂ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕಳ್ಳರ ಜಾಡು ಹಿಡಿಯಲು ವಿಶೇಷ ತಂಡ ರಚಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಗುಬ್ಬಿ ತಾಲೂಕಿನಾದ್ಯಂತ ಕಳ್ಳತನ ಪ್ರಕರಣಗಳು ಒಂದರ ಮೇಲೊಂದು ನಡೆದಿದೆ. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಚೇಳೂರು ಗ್ರಾಮದಲ್ಲಿ ಹಾಡಹಗಲೇ ಜ್ಯುವೆಲರಿ ಶಾಪ್ ಗೆ ನುಗ್ಗಿ ದರೋಡೆ ಯತ್ನ ನಡೆದಿತ್ತು. ವಿಫಲ ಯತ್ನ ನಡೆಸಿದ್ದ ಕಳ್ಳರ ಎಡೆ ಮುರಿ ಕಟ್ಟುವು ಕೆಲಸ ನಡೆದಿತ್ತು. ಆದರೆ ಎಟಿಎಂ ಕಳ್ಳತನ ಪ್ರಮುಖ ಹೋಬಳಿ ಕೇಂದ್ರ ಕಡಬದಲ್ಲಿ ನಡೆದಿದ್ದು ತಾಲ್ಲೂಕಿನ ಜನತೆಯನ್ನು ಬೆಚ್ಚಿ ಬೀಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ ಸಮೀಪ ಚಿರತೆ ಓಡಾಟ: ಆತಂಕದಲ್ಲಿ ನಾಗರಿಕರು

ಗುಬ್ಬಿ ಪಟ್ಟಣದ ಹೊರವಲಯದ ರಾಯವಾರ ಗ್ರಾಮದ ಮನೆಯೊಂದರ ಬಳಿ ಚಿರತೆ ಓಡಾಡಿರುವ...

ಗುಬ್ಬಿ | ಚೇಳೂರು ಪ್ರಜಾಸೇವಾ ಅಭಿಯಾನದಲ್ಲಿ ವಿಕಲಚೇತನರು, ಹಿರಿಯ ನಾಗರಿಕರ ಪರದಾಟ :ಅರ್ಜಿ ನೀಡಲು ಮೆಟ್ಟಿಲು ಹತ್ತಲಾಗದೆ ವಾಪಸ್‌

 ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ...

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ಗುಬ್ಬಿ | ಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ: ಸಿಪಿಐ ರಾಘವೇಂದ್ರ

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ...