ಗುಬ್ಬಿ | ಲಿಂಕ್ ಕೆನಾಲ್ ಬೇಡ, ಮುಖ್ಯನಾಲೆ ಅಗಲೀಕರಣ ಮಾಡಿ : ಶಾಸಕ ಎಸ್.ಆರ್.ಶ್ರೀನಿವಾಸ್

Date:

ಹೇಮಾವತಿ ಲಿಂಕ್ ಕೆನಾಲ್ ಮೂಲಕ ಹೇಮಾವತಿ ಹರಿಸುವ ಎಕ್ಸ್ ಪ್ರೆಸ್ ಪೈಪ್ ಲೈನ್ ಕಾಮಗಾರಿ ವಿರೋಧ ನನ್ನದೂ ಇದೆ. ಇರುವ ಮುಖ್ಯನಾಲೆ ಅಗಲೀಕರಣ ಮಾಡಿ ಓಪನ್ ಚಾನಲ್ ಮೂಲಕ ನೀರು ಹರಿಸಿಕೊಳ್ಳಲಿ ಎಂಬ ಆಗ್ರಹ ನಾನು ಮಾಡುತ್ತಿದ್ದೇನೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
- Advertisement -


ಗುಬ್ಬಿ ತಾಲೂಕಿನ  ಚೇಳೂರು ಹೋಬಳಿ ರಂಗನಹಳ್ಳಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 1.50 ಕೋಟಿ ರೂಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಜಿಲ್ಲೆಯ ಪಾಲಿನ ಹೇಮಾವತಿ ನೀರು ಬೇರೆಡೆಗೆ ಕೊಂಡೊಯ್ಯಲು ಸಾಧ್ಯವಿಲ್ಲ. ನಾಲೆ ಅಗಲೀಕರಣ ಮಾಡಿ ಕುಣಿಗಲ್ ಕೆರೆಗೆ ಹರಿಕೊಳ್ಳಲಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...


ಎಲ್ಲಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ. ಶಿಕ್ಷಣ ಇಲಾಖೆಯಲ್ಲಿ 66 ಸಾವಿರ ಹುದ್ದೆಗಳು ಭರ್ತಿಯಾಗಬೇಕಿದೆ. ಈ ಬಾರಿಯ ಹತ್ತನೇ ತರಗತಿಯ ಫಲಿತಾಂಶ ಶೇ.97 ರಷ್ಟಿದೆ. ಮುಂದಿನ ವರ್ಷದಲ್ಲಿ ನೂರಕ್ಕೆ ನೂರು ಫಲಿತಾಂಶ ತರುವಂತೆ ಸೂಚನೆ ನೀಡಲಾಗಿದೆ. ಹೊಸದಾಗಿ ಕೆಪಿಎಸ್ ಶಾಲೆಗಳು ತಾಲ್ಲೂಕಿನಲ್ಲಿ ಏಳೆಂಟು ಕಡೆ ಆರಂಭವಾಗಲಿದೆ. ಅರ್ಹ ಶಿಕ್ಷಕರ ಶಾಲೆಗಳ ಬಗ್ಗೆ ಪೋಷಕರಲ್ಲಿ ಆಸಕ್ತಿ ಕಾಣುತ್ತಿಲ್ಲ. ದೂರದ ಬೆಟ್ಟ ನುಣ್ಣಗೆ ಎಂಬಂತೆ ಖಾಸಗಿಯತ್ತ ಮುಖ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.


ಹೊಸ ಆಸ್ಪತ್ರೆಗಳ ನಿರ್ಮಾಣ ಗ್ರಾಮೀಣ ಭಾಗದಲ್ಲಿ ನಡೆದಿದೆ. 68 ಲಕ್ಷ ರೂಗಳಲ್ಲಿ ಹೂವಿನಕಟ್ಟೆ ಹಾಗೂ ಅಂಕಸಂದ್ರ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರ ಕೆಲಸಕ್ಕೆ ಪೂಜೆ ನಡೆಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಸಿದ್ಧತೆ ಮಾಡಲಾಗಿದೆ. ಹೊರ ಗುತ್ತಿಗೆಯಲ್ಲಿ ಡಾಕ್ಟರ್ ಸೇರಿದಂತೆ ಎಲ್ಲಾ ತಂತ್ರಜ್ಞರನ್ನು ನೇಮಿಸಲಾಗಿದೆ. ಅವಶ್ಯ ಡಾಕ್ಟರ್ ಗಳ ನೇಮಕ ಕೂಡಲೇ ಆಗಲಿದೆ ಎಂದ ಅವರು ಉಪ ಚುನಾವಣೆ ಫಲಿತಾಂಶದಲ್ಲಿ ದಾವಣಗೆರೆ ನಾನು ಕೂಡ ಪ್ರಚಾರ ನಡೆಸಿದ್ದೆ. ಅಲ್ಲಿನ ವಾತಾವರಣ ಕಾಂಗ್ರೆಸ್ ಗೆಲುವು ತೋರುತ್ತಿದೆ ಎಂದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಸಾತೇನಹಳ್ಳಿ ರಾಜಣ್ಣ, ರೇಣುಕಮ್ಮ ಕಾಂತರಾಜು, ಗಂಗಣ್ಣ , ಮುಖಂಡರಾದ ಜಗದೀಶ, ಜಯಣ್ಣ, ಮಲ್ಲೇಶ್, ಲಿಂಗಣ್ಣ, ಕುಮಾರ್, ರಮೇಶ, ಪಿಡಿಓ ಯುವರಾಜು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...

ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ...

ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್...

ಗುಬ್ಬಿ | ವಿರೋಧ ಪಕ್ಷ ಎಂದರೆ ಸಲ್ಲದ ಆರೋಪಗಳಿಗೆ ಸೀಮಿತವಲ್ಲ: ಶಾಸಕ ಶ್ರೀನಿವಾಸ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ...