ಗುಬ್ಬಿ | ರೈತನ ಜಮೀನು ಹರಾಜಿಗೆ ವಿರೋಧ: ನ. 2ರಂದು ರೈತಸಂಘದ ಪ್ರತಿಭಟನೆ

Date:

 ಬರಗಾಲದಿಂದ ಬೆಳೆ ನಷ್ಟ ಹಾಗೂ ಕೊಳವೆಬಾವಿಗಳು ಬತ್ತಿರುವ ಸಂಕಷ್ಟದ ನಡುವೆಯೇ ಸಾಲ ವಸೂಲಿಗಾಗಿ ರೈತನ ಜಮೀನನ್ನು ಹರಾಜು ಹಾಕಿ, ಬಿಡ್‌ದಾರನಿಗೆ ಸ್ವಾಧೀನ ನೀಡಲು ಮುಂದಾಗಿರುವ ತುರುವೇಕೆರೆ ಕರ್ನಾಟಕ ಬ್ಯಾಂಕ್ ಕ್ರಮವನ್ನು ವಿರೋಧಿಸಿ ನವೆಂಬರ್ 2ರಂದು ಬೆಳಿಗ್ಗೆ 11 ಗಂಟೆಗೆ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ತಿಳಿಸಿದರು.

- Advertisement -

ಗುಬ್ಬಿ  ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತಸಂಘದ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ತುರುವೇಕೆರೆ ತಾಲ್ಲೂಕಿನ ತಾಳಗೆರೆ ಗ್ರಾಮದ ರೈತ ಈರಯ್ಯ ಕುಟುಂಬ 2005ರಲ್ಲಿ ಪಡೆದಿದ್ದ 5 ಲಕ್ಷ ರೂ. ಸಾಲದ ಮರುಪಾವತಿ ವಿಳಂಬವಾದ ಹಿನ್ನೆಲೆಯಲ್ಲಿ ಬಡ್ಡಿ ಹಾಗೂ ಚಕ್ರಬಡ್ಡಿ ಸೇರಿ 34 ಲಕ್ಷ ರೂ.ಗೂ ಅಧಿಕ ಮೊತ್ತ ವಸೂಲಿಗೆ ಬ್ಯಾಂಕ್ ಮುಂದಾಗಿದೆ ಎಂದು ಆರೋಪಿಸಿದರು. ನ್ಯಾಯಾಲಯದ ಮೂಲಕ ಡಿಕ್ರಿ ಪಡೆದು ರೈತ ಕುಟುಂಬದ ಜೀವನಾಧಾರವಾಗಿರುವ ಜಮೀನನ್ನು ಹರಾಜು ಮಾಡಿರುವುದು ಖಂಡನೀಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಕಳೆದ ಎರಡು ವರ್ಷಗಳ ಹಿಂದೆ ಇದೇ ವಿಚಾರವಾಗಿ ಪ್ರತಿಭಟನೆ ನಡೆಸಿದಾಗ, ಎರಡು ತಿಂಗಳೊಳಗೆ ಜಮೀನು ಮರಳಿಸುವುದಾಗಿ ಬ್ಯಾಂಕ್ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಇದೀಗ ಹರಾಜಿನ ಬಿಡ್‌ದಾರನಿಗೆ ಜಮೀನಿನ ಸ್ವಾಧೀನ ನೀಡಲು ಸಿದ್ಧತೆ ನಡೆಸಿದ್ದಾರೆ ಎಂದು ಗೋವಿಂದರಾಜು ದೂರಿದರು.

ರೈತರ ಸಂಕಷ್ಟದ ಸಂದರ್ಭದಲ್ಲಿ ಸಾಲ ವಸೂಲಿಗೆ ಒತ್ತಡ ಹೇರುವುದು ಕುಟುಂಬಗಳನ್ನು ಬೀದಿಪಾಲು ಮಾಡುತ್ತಿದೆ. ಈರಯ್ಯ ಕುಟುಂಬದ ಜಮೀನು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ತಡೆಯಬೇಕು. ರೈತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು. ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ರೈತಸಂಘದ ತುರುವೇಕೆರೆ ತಾಲ್ಲೂಕು ಅಧ್ಯಕ್ಷ ಕೆ.ಎನ್. ವೆಂಕಟೇಗೌಡ ಮಾತನಾಡಿ, ಮಳೆ ಕೊರತೆ ಹಾಗೂ ಬರದ ಪರಿಣಾಮ ಅಡಿಕೆ, ತೆಂಗು ಸೇರಿದಂತೆ ತೋಟಗಾರಿಕಾ ಬೆಳೆಗಳು ನಷ್ಟದ ಅಂಚಿನಲ್ಲಿವೆ. ಇಂತಹ ಸಂದರ್ಭದಲ್ಲಿ ರೈತರ ಸಾಲ ವಸೂಲಿಗಾಗಿ ಜಮೀನು ಮುಟ್ಟುಗೋಲು ಹಾಕಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು.

ಈರಯ್ಯ ಕುಟುಂಬದ ಸಾಲ ಮನ್ನಾ ಮಾಡಿ, ವಶಪಡಿಸಿಕೊಂಡಿರುವ 4.14 ಎಕರೆ ಜಮೀನನ್ನು ಮರಳಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಗುಬ್ಬಿ ತಾಲ್ಲೂಕಿನಿಂದ ಸುಮಾರು 300 ರೈತರು ತೆರಳಲಿದ್ದು, ಜಿಲ್ಲೆಯ ಹತ್ತು ತಾಲ್ಲೂಕುಗಳ ರೈತ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ರೈತಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ. ಲೋಕೇಶ್, ಯುವ ಘಟಕದ ಶಿವಕುಮಾರ್, ತಾಳಗೆರೆ ಗ್ರಾಮದ ರೈತ ನಾಗರಾಜು, ಸಿ.ಟಿ. ಕುಮಾರ್, ಮಂಜುನಾಥ್, ಹುಚ್ಚೇಗೌಡ, ಕಾಳೇಗೌಡ, ಸತ್ತಿಗಪ್ಪ, ರವೀಶ್, ಯತೀಶ್, ವೀರಭದ್ರೇಗೌಡ, ಮೋಹನ್, ಬಸವರಾಜ್, ಕುಮಾರಸ್ವಾಮಿ, ಕೃಷ್ಣಯ್ಯಜಟ್ಟಿ, ಗಂಗಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ; ತೆರಿಗೆ ಸೋರಿಕೆ ಆರೋಪ!

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ...

ಗುಬ್ಬಿ | ಶಾಂತಿಯುತವಾಗಿ ನಡೆದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ

 ಕಳೆದ ಕೆಲ ದಿನಗಳಿಂದ ರಂಗೇರಿದ್ದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ ಮತ...

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ : ತುಮಕೂರು ಜಿಲ್ಲೆಯಲ್ಲಿ ಶೇ.71.56 ಮತದಾನ

 ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ತುಮಕೂರು...

ಅಧಿಕಾರದ ಅಂಕಗಣಿತ vs ಸಂಘಟನೆಯ ರಸಾಯನ: ಪದವೀಧರರ ಮತ ಯಾರ ಕಡೆ?

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ನಾಳೆ (ಶುಕ್ರವಾರ) ನಡೆಯಲಿದೆ. ಆಡಳಿತಾರೂಢ...