ಗುಬ್ಬಿ | ಕುಡಿಯುವ ನೀರಿನ ಸಮಸ್ಯೆಗೆ ಕೂಡಲೇ ಸ್ಪಂದಿಸಿ : ಆಡಳಿತಾಧಿಕಾರಿ ಜಗದೀಶ್

Date:

 ಹೇರೂರು ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ ಎಂದು ಆಡಳಿತಾಧಿಕಾರಿಯಾಗಿ ನೇಮಕಗೊಂಡ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್ ಎಲ್ಲಾ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

- Advertisement -

ತಾಲ್ಲೂಕಿನ ಕಸಬ ಹೋಬಳಿ ಹೇರೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಿಬ್ಬಂದಿಗಳ ಕುರಿತು ಮಾತನಾಡಿದ ಅವರು ಬೇಸಿಗೆ ಕಾಲದಲ್ಲಿ ನೀರಿನ ವ್ಯವಸ್ಥೆ ಬಹುಮುಖ್ಯವಾಗಿರುತ್ತದೆ. ಸರ್ಕಾರಿ ಶಾಲೆ, ಅಂಗನವಾಡಿ ಸೇರಿದಂತೆ ಎಲ್ಲಾ ಗ್ರಾಮದಲ್ಲೂ ಕುಡಿಯುವ ನೀರಿನ ಬಗ್ಗೆ ಎಲ್ಲಾ ವಾಟರ್ ಮೆನ್ ಗಳು ನಿಗಾವಹಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಗ್ರಾಮಗಳ ಆರೋಗ್ಯ ಕಾಪಾಡಲು ಸ್ವಚ್ಚತೆ ಕಡೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಕಸ ವಿಲೇವಾರಿ ಬಗ್ಗೆ ಎಲ್ಲಾ ಸಿಬ್ಬಂದಿಗಳು ಹೆಚ್ಚಿನ ಗಮನಹರಿಸಬೇಕು. ಹಾಗೆಯೇ ನಿರ್ವಹಣೆ ಮಾಡಬೇಕು. ಎಲ್ಲೂ ದೂರು ಬಾರದಂತೆ ಕ್ರಮ ವಹಿಸಿ ಸಿಬ್ಬಂದಿಗಳು ಕೆಲಸ ಮಾಡಿ. ಯಾವುದೇ ಒತ್ತಡಕ್ಕೆ ಮಣಿಯದೆ ಗೊಂದಲಕ್ಕೀಡಾಗದೇ ಕೆಲಸ ಮಾಡಿ. ನಿಮ್ಮಲ್ಲಿ ಕಾನೂನು ರೀತ್ಯಾ ಕೆಲಸ ಮಾಡುವ ಒಗ್ಗಟ್ಟು ಪ್ರದರ್ಶನ ಮಾಡಿ. ಸಾರ್ವಜನಿಕರನ್ನು ಅಲೆದಾಡಿಸಬೇಡಿ ಎಂದು ಕರೆ ನೀಡಿದ ಅವರು ಆದಾಯ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಪಟ್ಟಣಕ್ಕೆ ಸಮೀಪದ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆದಾಯ ಹೆಚ್ಚಿಸಲು ತೆರಿಗೆ ವಸೂಲಿ ಕಟ್ಟುನಿಟ್ಟಿನಲ್ಲಿ ನಡೆಸಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಿಡಿಓ ಚಂದ್ರಶೇಖರ್, ಕಾರ್ಯದರ್ಶಿ ರಘು ಪ್ರಕಾಶ್, ಬಿಲ್ ಕಲೆಕ್ಟರ್ ಸಿದ್ದೇಶ್ ಸೇರಿದಂತೆ ಎಲ್ಲಾ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ಗುಬ್ಬಿ | ಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ: ಸಿಪಿಐ ರಾಘವೇಂದ್ರ

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ...

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...