ಗುಬ್ಬಿ | ಸ್ವಸಹಾಯ ಸಂಘಗಳಿಂದ ಮಹಿಳೆಯರ ಸ್ವಾವಲಂಬಿ ಬದುಕು : ಎಚ್.ಬಸವರಾಜು

Date:

 ಗ್ರಾಮೀಣ ಭಾಗದ ಬಡತನದಲ್ಲಿ ಸೊರಗಿದ ಕುಟುಂಬಗಳನ್ನು ಮೇಲೆತ್ತಲು ಮಾದಿಗ ಸಮುದಾಯದ ಮಹಿಳೆಯರಿಗೆ ಬದುಕು ಕಟ್ಟಿಕೊಡಲು ಡಾ. ಬಾಬು ಜಗಜೀವನ ರಾಮ್ ಆದಿ ಜಾಂಬವ ಯುವ ಬ್ರಿಗೇಡ್ ಹಾಗೂ ಅಭಿವೃದ್ದಿ ಸೇವಾ ಟ್ರಸ್ಟ್ ಸದಾ ಸಿದ್ಧವಿದೆ ಎಂದು ಬ್ರಿಗೇಡ್ ಹಾಗೂ ಅಭಿವೃದ್ಧಿ ಸೇವಾ ಟ್ರಸ್ಟ್ ಅಧ್ಯಕ್ಷ ಎಚ್.ಬಸವರಾಜು ತಿಳಿಸಿದರು.

- Advertisement -

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಡಾ. ಬಾಬು ಜಗಜೀವನ ರಾಮ್ ಆದಿ ಜಾಂಬವ ಯುವ ಬ್ರಿಗೇಡ್ ಹಾಗೂ ಅಭಿವೃದ್ದಿ ಸೇವಾ ಟ್ರಸ್ಟ್ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು ಸಂಘಗಳ ಮೂಲಕ ಆರ್ಥಿಕ ನೆರವು ನೀಡಿ ವ್ಯವಹಾರ ನಡೆಸಲು ಅನುವು ಮಾಡಲಾಗುವುದು. ಈ ಜೊತೆಗೆ ಬಡತನ ನಿರ್ಮೂಲನೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಮಹಿಳೆಯರಿಗೆ ಸ್ವಸಹಾಯ ಸಂಘಗಳ ಕಟ್ಟಲು ತಾಲ್ಲೂಕಿನಲ್ಲಿ ಸಂಘ ಚಟುವಟಿಕೆ ನಡೆಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಸಮುದಾಯದ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಇಡೀ ಮಾದಿಗ ಸಮಾಜನವನ್ನೇ ಮೇಲೆತ್ತುವ ಕೆಲಸ ಆಗಲಿದೆ. ಹೆಣ್ಣು ಮಕ್ಕಳಲ್ಲಿ ಆರ್ಥಿಕ ಸುಭದ್ರತೆ ಸಾಧಿಸಲು ಗುಂಪುಗಳ ರಚನೆ, ಉದ್ಯೋಗ ತರಬೇತಿ, ಸರ್ಕಾರದ ಸವಲತ್ತು ಪಡೆಯುವುದು, ಸಾಲ ಸೌಲಭ್ಯ ಒದಗಿಸುವ ಕೆಲಸ ನಮ್ಮ ಸಂಘ ಮಾಡುತ್ತಿದೆ. ಸ್ವಸಹಾಯ ಸಂಘಗಳ ರಚನೆಯಲ್ಲಿ ಮುಗ್ಧ ಹೆಣ್ಣು ಮಕ್ಕಳು ತಮ್ಮ ಕುಟುಂಬ ನಿರ್ವಹಣೆ ಮಾಡುವ ಮಟ್ಟಿಗೆ ಬೆಳೆಯಲು ಸಹಕಾರಿಯಾಗಿದೆ ಎಂದರು.

 ಉಪಾಧ್ಯಕ್ಷ ಹೊಸಕೆರೆ ಬಸವರಾಜು ಮಾತನಾಡಿ ದಲಿತ ಕುಟುಂಬಗಳು ಮೊದಲಿಂದಲೂ ಬಡತನ ಅನುಭವಿಸಿ ಬಡತನದಲ್ಲೇ ಸಾವನ್ನಪ್ಪಿದ ಘಟನೆಗಳೇ ಹೆಚ್ಚಾಗಿವೆ. ಇದರಿಂದ ಮಹಿಳೆಯರಲ್ಲಿ ಒಗ್ಗಟ್ಟು ಪ್ರದರ್ಶನ ಹಾಗೂ ಆರ್ಥಿಕ ಸಬಲೀಕರಣ ಸಾಧಿಸಲು ನಮ್ಮ ಬ್ರಿಗೇಡ್ ನಿರಂತರ ದುಡಿದಿದೆ. ಬ್ಯಾಂಕಿನಲ್ಲಿ ಖಾತೆ ತೆರೆಯುವ ಜೊತೆಗೆ ಸಂಘ ಚಟುವಟಿಕೆ ಬಗ್ಗೆ ತರಬೇತಿ ಹಾಗೂ ಸ್ವಉದ್ಯೋಗ ಬಗ್ಗೆ ತರಬೇತಿ ನೀಡುತ್ತಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಡಾ. ಬಿ ಆರ್ ಅಂಬೇಡ್ಕರ್ ಪ್ರಶಸ್ತಿ ಪಡೆದ ಎಚ್. ಬಸವರಾಜ್ ರವರನ್ನು ಬ್ರಿಗೇಡ್ ಹಾಗೂ ಅಭಿವೃದ್ಧಿ ಸೇವಾ ಟ್ರಸ್ಟ್ ಪದಾಧಿಕಾರಿಗಳು ಸನ್ಮಾನಿಸಿದರು.

ಸಭೆಯಲ್ಲಿ ಗೌರವಾಧ್ಯಕ್ಷ ಮುದ್ದಣ್ಣ, ಪ್ರಧಾನ ಕಾರ್ಯದರ್ಶಿ ಶಿವರಾಜು, ಖಜಾಂಚಿ ನರಸಿಂಹಮೂರ್ತಿ, ಪದಾಧಿಕಾರಿಗಳಾದ ಮಾದೇವಣ್ಣ, ಜೈ ರಾಮಣ್ಣ, ರೇಖಾ, ರೇಣುಕಾ, ಕುಮಾರ್, ತಾರಾ, ರಾಧಮಣಿ, ಕಾವ್ಯ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ:ಸನ್ಮಾನದ ಹೆಸರಿನಲ್ಲಿ ಪೌರಕಾರ್ಮಿಕರನ್ನು ಕರೆದು ಅವಮಾನಿಸಿದ ಜಿಲ್ಲಾಡಳಿತ!

ತುಮಕೂರು ನಗರದ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರನ್ನು ಸನ್ಮಾನಿಸುವುದಾಗಿ ಕರೆದು, ಬಳಿಕ...

ತುಮಕೂರು ದಸರಾ : ಅಧಿಕಾರಿಗಳ ಕುಟುಂಬಸ್ಥರ ಕಾಲಿನ ಬಳಿ ಮಾಧ್ಯಮದವರಿಗೆ ಆಸನ

 'ತುಮಕೂರು ದಸರಾ' ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಕುಟುಂಬಸ್ಥರು, ರಾಜಕಾರಣಿಗಳ ಹಿಂಬಾಲಕರು...

ತುಮಕೂರು ದಸರಾ: ಹೊರ ರಾಜ್ಯದವರಿಗೆ ವಿಶೇಷ ಆತಿಥ್ಯ- ಸ್ಥಳೀಯರಿಗೆ ಗೇಟಿನಾಚೆ ಆಸನ

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...