ಗುಬ್ಬಿ | ವಿದ್ಯುತ್ ಸ್ಪರ್ಶಕ್ಕೆ ಮಗ ಬಲಿ; ತಂದೆ ಕಣ್ಣೆದುರೇ ದುರಂತ

Date:

 ತೋಟದಲ್ಲಿ ತೆಂಗಿನ ಕಾಯಿ ಕೀಳುವ ಸಂದರ್ಭದಲ್ಲಿ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ಲೈನ್ ರೋಟಿಗೆ ತಗುಲಿ ತಂದೆಯ ಕಣ್ಮುಂದೆಯೇ ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಕಡಬ ಹೋಬಳಿಯ ಕುಣಾಘಟ್ಟ ಗ್ರಾಮದಲ್ಲಿ ನಡೆದಿದೆ.

- Advertisement -

ಮೃತನನ್ನು ಪ್ರೀತಂ (19) ಎಂದು ಗುರುತಿಸಲಾಗಿದೆ. ಈತ ತುಮಕೂರಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ರಜೆ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ತೋಟದಲ್ಲಿ ತೆಂಗಿನ ಕಾಯಿ ಕೀಳುವ ವೇಳೆ ಬಳಸುತ್ತಿದ್ದ ರೋಟಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ್ದು, ಯುವಕನಿಗೆ ಪ್ರೀತಂ ಶಾಕ್ ನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. 

ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಗ್ರಾಮಸ್ಥರ ಮನಕಲಕುವಂತಿತ್ತು. ಇತ್ತೀಚೆಗೆ ಇಂತಹ ಪ್ರಕರಣಗಳು ಸಾಕಷ್ಟು ತಾಲ್ಲೂಕಿನಲ್ಲಿ ನಡೆಯುತ್ತಿದ್ದರೂ ರೈತ ಸಮುದಾಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಲ್ಲಿ ಎಡವುತ್ತಿರುವುದು ಕಂಡುಬರುತ್ತಿದೆ.

ತೋಟದಲ್ಲಿ ಹಾದು ಹೋದ ವಿದ್ಯುತ್ ತಂತಿ ಬಗ್ಗೆ ಬೆಸ್ಕಾಂ ಸಹ ಎಚ್ಚರಿಕೆ ಕ್ರಮವಹಿಸಿ ರೈತರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಮೃತದೇಹವನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುರುವೇಕೆರೆ | ಪರಂಪರೆ ಪೂರ್ವಜರ ಉಡುಗೊರೆಯಲ್ಲ, ಮುಂದಿನ ಪೀಳಿಗೆಗೆ ನೀಡುವ ಸಾಲ : ಡಾ. ಮಹೇಶ್ ಕುಮಾರ್

ಪರಂಪರೆ ಎಂಬುದು ಪೂರ್ವಜರಿಂದ ಪಡೆದ ಉಡುಗೊರೆಯಲ್ಲ; ಮುಂದಿನ ಪೀಳಿಗೆಗೆ ಉಳಿಸಿ ನೀಡಲು...

ಮಧುಗಿರಿ | ಸ್ವಾವಲಂಬನೆ, ಆತ್ಮವಿಶ್ವಾಸದೊಂದಿಗೆ ಪದವಿ ಪಡೆಯಿರಿ: ಡಾ. ಎಂ. ಗೋವಿಂದರಾಯ

ಪದವಿ ಶಿಕ್ಷಣವು ಕೇವಲ ಅಂಕಗಳನ್ನು ಗಳಿಸುವುದಕ್ಕೆ ಸೀಮಿತವಾಗಿರದೆ, ಸ್ವಾವಲಂಬನೆ, ವೃತ್ತಿಪರತೆ ಹಾಗೂ...

ತಿಪಟೂರು | ಬೋಧಕ ವರ್ಗದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್

 ಕಾಲೇಜಿನ ಗ್ರಂಥಾಲಯದಲ್ಲಿರುವ ಸುಮಾರು 50 ಸಾವಿರ ಪುಸ್ತಕಗಳ ಜ್ಞಾನ ಸಂಪನ್ಮೂಲ ಹಾಗೂ...

ತುಮಕೂರು | ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸ ಆಲೋಚನೆ, ಆವಿಷ್ಕಾರದ ಮನೋಭಾವ ಬೆಳೆಸಿಕೊಳ್ಳಲಿ : ಡಾ.ಜಿ. ಪರಮೇಶ್ವರ

 ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿರಂತರ...