ಗುಬ್ಬಿ | ಸಿ.ಎಸ್.ಪುರದಲ್ಲಿ ನ.13 ರಂದು ದೇವೇಗೌಡರ ಪುತ್ಥಳಿ ಅನಾವರಣ : ಶಾಸಕ ಎಂ.ಟಿ.ಕೃಷ್ಣಪ್ಪ

Date:

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ರಾಜಕೀಯ ಹಾದಿ ಹಾಗೂ ಸಮಾಜದ ಅಭಿವೃದ್ದಿ ಚಿಂತನೆಗಳು, ರೈತಪರ ಹೋರಾಟಗಳು ಸ್ಮರಿಸಿ ಅವರ ಹೆಸರಿನಲ್ಲಿ ಬಡವರು, ಮಧ್ಯಮ ವರ್ಗಕ್ಕೆ ಸಲ್ಲುವ ಸಮುದಾಯ ಭವನ ಸುಮಾರು ಎರಡು ಕೋಟಿ ವೆಚ್ಚದಲ್ಲಿ ಸಿದ್ಧಗೊಂಡಿದ್ದು ಇದೇ ತಿಂಗಳ 13 ರ ಶುಕ್ರವಾರ ಲೋಕಾರ್ಪಣೆ ಹಾಗೆಯೇ ದೇವೇಗೌಡರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ನಡೆಸಿಕೊಡಲಿದ್ದಾರೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.

- Advertisement -

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕಳೆದ ಹತ್ತು ವರ್ಷದ ಹಿಂದೆ ದೇವೇಗೌಡರ ಹೆಸರಿನಲ್ಲಿ ಗ್ರಾಮೀಣ ಜನರ ಅನುಕೂಲಕ್ಕೆ ಅತೀ ಕಡಿಮೆ ಬಾಡಿಗೆಯ ಸಮುದಾಯ ಭವನ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿತ್ತು. ಕೆಲ ದಿನಗಳ ವಿಳಂಬ ನಂತರ ಈಗ ಸಂಪೂರ್ಣ ಸಿದ್ಧವಾದ ಸಮುದಾಯ ಭವನ ಬಡವರ ಶುಭಕಾರ್ಯಕ್ಕೆ ಸಿಗಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೋಟು ನಿಷೇಧಕ್ಕೆ 10 ವರ್ಷ: ಮೋದಿ ಸರ್ಕಾರದ ಒಂದು...

ಒಂದು ದಶಕದ ಆರ್ಥಿಕ ಪರಿಣಾಮಗಳು, ಅಧಿಕೃತ ಅಂಕಿಅಂಶಗಳು ಮತ್ತು ತಜ್ಞರ ಸಂಶೋಧನೆಗಳ ಆಧಾರಿತ ಅಧ್ಯಯನ ಬರಹ. 2016ರ ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹500 ಮತ್ತು ₹1,000 ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ...

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ...

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ ತುಂಗಾ ಸೇತುವೆಗೆ ಕೊನೆಗೂ ಹೊಸ ರೂಪ ನೀಡುವ ಕಾಲ ಸನ್ನಿಹಿತವಾಗಿದೆ. ಶತಮಾನಕ್ಕೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಹಳೆಯ ತುಂಗಾ...

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ನವಂಬರ್ 13 ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸಮುದಾಯಭವನ ಉದ್ಘಾಟಿಸಲಿದ್ದಾರೆ. ಕೇಂದ್ರದ ರೈಲ್ವೆ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ದೇವೇಗೌಡರ ಪುತ್ಥಳಿ ಅನಾವರಣಗೊಳಿಸಲಿದ್ದಾರೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ದಾಸೋಹಭವನ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸುಮಾರು 5 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗುವುದು. ಹೋಬಳಿಯ ಎಲ್ಲಾ ಗ್ರಾಮದ ಮನೆಗಳಿಗೂ ಜೆಡಿಎಸ್ ಕಾರ್ಯಕರ್ತರು ಆಹ್ವಾನ ನೀಡಲಿದ್ದಾರೆ. ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿದರು.

ಮುಖಂಡ ಚನ್ನೇನಹಳ್ಳಿ ಮೂರ್ತಣ್ಣ ಮಾತನಾಡಿ ಸಿ.ಎಸ್.ಪುರ ಹೋಬಳಿಯ ರೈತಾಪಿ ವರ್ಗಕ್ಕೆ ಅನುಕೂಲ ಮಾಡುವ ಉದ್ದೇಶದಲ್ಲಿ ಕಡಿಮೆ ಬಾಡಿಗೆಯ ಸಮುದಾಯಭವನ ನಿರ್ಮಿಸಿ ನವಂಬರ್ 13 ರಂದು ಲೋಕಾರ್ಪಣೆಗೊಳ್ಳಲಿದೆ. ದೇವೇಗೌಡರ ಜನಸೇವೆ ಸ್ಮರಣೆಯಲ್ಲಿ ನಿರ್ಮಿಸಲಾದ ಸಮುದಾಯ ಭವನ ಜೊತೆಗೆ ದೊಡ್ಡಗೌಡರ ಕಂಚಿನ ಪುತ್ಥಳಿ ಅನಾವರಣ ಮಾಡುವ ಕಾರ್ಯಕ್ರಮ ಕೂಡಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಕೇಂದ್ರದ ಸಚಿವರ ಜೊತೆಗೆ ರಾಜ್ಯದ ಉಪಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ. ಶಾಸಕ ಎಂ.ಟಿ.ಕೃಷ್ಣಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅಥಿತಿಗಳಾಗಿ ವಿಧಾನ ಪರಿಷತ್ ಸದಸ್ಯ ಕೇಶವಪ್ರಸಾದ್, ಮಾಜಿ ಶಾಸಕ ಮಸಾಲಾ ಜಯರಾಮ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಅಶೋಕ್.ಕೆ.ವಿ., ಜಿಪಂ ಸಿಇಓ ಅಶ್ವಿಜಾ, ಕೆಆರ್ ಡಿಐಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಹೋಬಳಿಯ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೆ ಕಾರಣಕರ್ತರಾಗಿ ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಬೀರಮಾರನಹಳ್ಳಿ ನರಸೇಗೌಡ, ಬೋರಪ್ಪನಹಳ್ಳಿ ಕುಮಾರ್, ಬಸವರಾಜು, ಹೋಬಳಿ ಅಧ್ಯಕ್ಷ ಜಗದೀಶ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ವಿದ್ಯಾರ್ಥಿ ಜೀವನವು ಬದುಕಿನ ಮಹತ್ವದ ಹಂತ : ತಹಶೀಲ್ದಾರ್ ನಂದಿನಿ

ವಿದ್ಯಾರ್ಥಿ ಜೀವನವು ಪ್ರತಿಯೊಬ್ಬರ ಬದುಕಿನ ಅತ್ಯಂತ ಮಹತ್ವದ ಹಂತವಾಗಿದೆ. ಇದು ಕೇವಲ...

ತುಮಕೂರು ಬಿಜೆಪಿಯಲ್ಲಿ ಭಿನ್ನಮತದ ಕಿಡಿ: ಮಾಧುಸ್ವಾಮಿ ಅಸಮಾಧಾನದ ಹಿಂದಿನ ರಾಜಕೀಯ ಲೆಕ್ಕಾಚಾರವೇನು?

ರಾಜ್ಯ ಬಿಜೆಪಿಯೊಳಗಿನ ಆಂತರಿಕ ಭಿನ್ನಮತ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ತುಮಕೂರು ಜಿಲ್ಲಾ...

ತುಮಕೂರು | ಕನ್ನಡ ಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಕೃಷ್ಣಬೈರೇಗೌಡ

ಕನ್ನಡ ರಾಜ್ಯೋತ್ಸವದ ಸಂಭ್ರಮ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು...