ಗುಬ್ಬಿ | ಆಟೋ ಚಾಲಕರಿಂದ ದಿಢೀರ್ ಮುಷ್ಕರ

Date:

 ತಿಂಗಳಲ್ಲಿ ಸುಮಾರು 30 ರೂಗಳಷ್ಟು ಆಟೋ ಗ್ಯಾಸ್ ದರ ಏರಿಕೆಯಾಗಿದ್ದು ಬೆಳಿಗ್ಗೆ ಒಂದು ಬೆಲೆ ಸಂಜೆ ಒಂದು ಬೆಲೆ ಕೇಳಿದರೆ ನಿಮಗೆ ಗ್ಯಾಸ್ ನೀಡುವುದಿಲ್ಲ ಎನ್ನುವ ಸ್ಥಳೀಯ ಗೋ ಗ್ಯಾಸ್ ಬಂಕ್ ನವರ ವಿರುದ್ಧ ಸಂಜೆ ಆಟೋ ಚಾಲಕರು ದಿಢೀರ್ ಮುಷ್ಕರ ನಡೆಸಿದರು.

- Advertisement -

 ಬಂಕ್ ಬಳಿ ಜಮಾಯಿಸಿದ ಗ್ಯಾಸ್ ಆಟೋ ಮಾಲೀಕರು ಮತ್ತು ಚಾಲಕರು 30 ರೂ ಏರಿಕೆ ಮಾಡಿದ್ದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಗ್ರಾಹಕರ ಬಳಿ ಹೆಚ್ಚು ಹಣ ಕೇಳಿದರೆ ನಿತ್ಯ ಜಗಳ ಮಾಡಿಕೊಳ್ಳುವ ದುಸ್ಥಿತಿ ಎದುರಾಗಿದೆ ಎಂದು ಆಟೋ ಚಾಲಕರು ತಮ್ಮ ಅಳಲು ತೋಡಿಕೊಂಡರು. ಗ್ರಾಮಾಂತರ ಪ್ರದೇಶದಿಂದ ಬಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಆಟೋ ಓಡಿಸಿ ಜೀವನ ಮಾಡುವಷ್ಟು ದುಡ್ಡು ಸಿಗದೆ ಇದ್ದರೂ ಹೇಗೋ ನಿಭಾಯಿಸಿಕೊಂಡು ಹೋಗುತ್ತಿದ್ದೆವು. ಅದರೆ ಈ ಗೋ ಗ್ಯಾಸ್  ಕಂಪನಿಯವರು   ಯುದ್ಧದ ನೆಪಯೊಡ್ಡಿ ಒಂದು ತಿಂಗಳಲ್ಲಿ ಹಲವಾರು ಬಾರಿ ಗ್ಯಾಸ್ ದರ ಏರಿಸಿದ್ದು ನಾವು ಜನರಿಗೆ ಬೆಲೆ ಏರಿಸಲಾಗದು ಎಂದು ಗುಬ್ಬಿ ಆಟೋ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಲಕ್ಕೆಗೌಡ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಗುಬ್ಬಿ ಪಟ್ಟಣದ ಯಾವುದೇ ಬಡಾವಣೆಗೆ ಹೋದರೂ 40 ರೂಗಳಿಗಿಂತ ಹೆಚ್ಚು ಹಣ ಗ್ರಾಹಕರಿಂದ ಪಡೆಯಲು ಸಾಧ್ಯವಾಗದು. ಇಂತಹ ಸನ್ನಿವೇಶದಲ್ಲಿ ನಾವು ಬೆಲೆ ಏರಿಕೆ ಮಾಡಲು ಸಂಬಂಧಪಟ್ಟ ಇಲಾಖೆಗಳ ಅನುಮತಿ ತೆಗೆದುಕೊಳ್ಳಬೇಕು. ಆದರೆ ಇಲ್ಲಿರುವ ಗೋ ಗ್ಯಾಸ್ ಕಂಪನಿಯವರು ನಮಗೆ ಹೇಳುವುದು ನಮಗೆ ಯಾವುದೇ ದರ ನಿಗದಿಯ ನಿರ್ದೇಶನಗಳಿಲ್ಲ. ಸರ್ಕಾರ ಆ ರೀತಿ ಏನಾದರೂ ಮಾಡುವುದಿದ್ದರೆ ನಮಗೆ ನೋಟಿಸ್ ನೀಡಲಿ ನಾವು ಅದಕ್ಕೆ ಉತ್ತರಿಸುತ್ತೇವೆ ಎಂದು ಕಂಪನಿಯ ಜನರಲ್ ಮ್ಯಾನೇಜರ್ ದೂರವಾಣಿ ಮೂಲಕ ತಿಳಿಸಿರುತ್ತಾರೆ.

ಸ್ಥಳಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ನಿರೀಕ್ಷಕಿ ವೀಣಾ ಭೇಟಿ ನೀಡಿ ಮುಷ್ಕರ ನಿರತರನ್ನು ಸಮಾಧಾನ ಮಾಡಿದರು. ಬಂಕ್ ನ ಸಿಬ್ಬಂದಿ ಜೊತೆ ಚರ್ಚಿಸಿ ನೀವು ಮನಸ್ಸೋ ಇಚ್ಛೆ ಬೆಲೆ ಏರಿಸುವಂತಿಲ್ಲ. ಹಾಗೇನಾದರೂ ಬೆಲೆ ಹೆಚ್ಚು ಮಾಡಬೇಕಿದ್ದರೆ ಕಂಪನಿ ಆದೇಶ ಮಾಡಬೇಕು ಎಂದರು. ವೃಥಾ ಸುಮ್ಮನೆ ಗ್ಯಾಸ್ ಬೆಲೆ ಹೆಚ್ಚು ಮಾಡಿರುವ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಈ ಸಂದರ್ಭದಲ್ಲಿ ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...

ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ...

ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್...

ಗುಬ್ಬಿ | ವಿರೋಧ ಪಕ್ಷ ಎಂದರೆ ಸಲ್ಲದ ಆರೋಪಗಳಿಗೆ ಸೀಮಿತವಲ್ಲ: ಶಾಸಕ ಶ್ರೀನಿವಾಸ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ...