ಗುಬ್ಬಿ | ಸದನಲ್ಲಿ ಚುಕ್ಕಿ ಪ್ರಶ್ನೆಗೆ ಶೀಘ್ರ ಉತ್ತರ ಬಯಸಿದ್ದು ಒಳ್ಳೆ ಬೆಳವಣಿಗೆ : ಎಸ್.ಆರ್.ಶ್ರೀನಿವಾಸ್

Date:

 ಸದನದಲ್ಲಿ ಚುಕ್ಕಿ ಪ್ರಶ್ನೆಗೆ ಉತ್ತರ ಸಿಗಲಿಲ್ಲ ಎಂದು ಶಾಸಕರು ಪ್ರಶ್ನಿಸಿದಾಗ ಸಭಾಪತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕೂಡ ಶಾಸಕರ ಪ್ರಶ್ನೆಗೆ ಲಿಖಿತ ಉತ್ತರ ಎರಡು ಮೂರು ತಿಂಗಳ ನಂತರ ಉತ್ತರ ಬಂದಿದೆ. ತಕ್ಷಣ ಉತ್ತರ ಕೊಡಬೇಕು ಎಂದು ಶಾಸಕರು ಬಯಸಿದ್ದು ಒಳ್ಳೆಯ ಬೆಳವಣಿಗೆ. ಎಲ್ಲರಿಗೂ ಸಮಯಕ್ಕೆ ಉತ್ತರ ಸಿಗಲಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.

- Advertisement -

ಗುಬ್ಬಿ  ತಾಲ್ಲೂಕಿನ ಕಸಬ ಹೋಬಳಿ ನಡುವಲಪಾಳ್ಯ, ಬ್ಯಾಡಿಗೆರೆ ಹಾಗೂ ಜವರೇಗೌಡನಪಾಳ್ಯ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ರಸ್ತೆ ಅಭಿವೃದ್ಧಿಯ ಅಂದಾಜು 5 ಕೋಟಿ ರೂಗಳ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಸಭಾಪತಿಗಳು ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಸಚಿವರಿಗೆ ಸೂಚನೆ ನೀಡಿದ್ದು ಮುಂದಿನ ದಿನದಲ್ಲಿ ಸದನದ ಶಾಸಕರ ಪ್ರಶ್ನೆಗೆ ಶೀಘ್ರ ಉತ್ತರ ಕೊಡುವ ಕೆಲಸ ಆಗಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಡುಗೆ ಅನಿಲ ಕೊರತೆ ದೇಶದೆಲ್ಲೆಡೆ ಕಾಣಸಿಕೊಂಡಿದೆ. ಇರಾನ್ ಇಸ್ರೇಲ್ ಯುದ್ಧ ನಮಗೆ ಎಲ್ ಪಿಜಿ ಗ್ಯಾಸ್ ಸೇರಿದಂತೆ ಪೆಟ್ರೋಲ್ ಡೀಸೆಲ್ ತೈಲೋತ್ಪನ್ನಗಳ ಅಭಾವ ಮುಂದಿನ ದಿನದಲ್ಲಿ ಕಾಡಲಿದೆ. ಸದ್ಯಕ್ಕೆ ಕೊರತೆ ದೊಡ್ಡಮಟ್ಟದಲ್ಲಿ ಕಂಡಿಲ್ಲ. ವಿಶ್ವ ಯುದ್ಧವಾಗಿ ಹೀಗೆಯೇ ಮುಂದುವರೆದಲ್ಲಿ ಎಲ್ಲಾ ದೇಶಗಳಿಗೂ ತೈಲ ಅಭಾವ ದುಷ್ಪರಿಣಾಮ ಕಾಣಲಿದೆ ಎಂದು ತಿಳಿಸಿದರು.

ಪೊಲೀಸ್ ಠಾಣೆಯಲ್ಲಿ ಓರ್ವ ವ್ಯಕ್ತಿ ಸಾವು ಯಾವ ಕಾರಣಕ್ಕೆ ತನಿಖೆಯಿಂದ ತಿಳಿಯಲಿದೆ. ಪೊಲೀಸರು ಮೊದಲಿನ ರೀತಿ ದಂಡನೆ ನೀಡುತ್ತಿಲ್ಲ. ವಿಚಾರಣೆ ವೇಳೆ ನಡೆದರೆ ಪೊಲೀಸರನ್ನು ದೂರುವುದು ಸಹಜ. ವಿಶೇಷ ತಂಡ ತನಿಖೆ ನಡೆಸಿ ನ್ಯಾಯ ಒದಗಿಸಿದ್ದಾರೆ ಎಂದ ಅವರು ಈ ದಿನ 5 ಕೋಟಿ ರೂಗಳ ರಸ್ತೆ ಅಭಿವೃದ್ಧಿ ಕೆಲಸಕ್ಕೆ ಚಾಲನೆ ಸಿಕ್ಕಿದೆ. ಕೆಲ ಗ್ರಾಮದಲ್ಲಿ ಬಾಕಿ ಇದ್ದ ಸಿಸಿರಸ್ತೆ ಕಾಮಗಾರಿ ಮಾಡಿ ಗ್ರಾಮ ಪೂರ್ತಿ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕೆ.ಆರ್.ವೆಂಕಟೇಶ್, ಬುಲೆಟ್ ಬಸವರಾಜು, ಸಿ.ಜಿ.ಲೋಕೇಶ್, ಸೋಮಶೇಖರ್, ರಾಮು, ಶಿವಣ್ಣ, ರಾಜಣ್ಣಗೌಡ, ನಾಗಣ್ಣ, ಎನ್.ಜಿ.ಬಸವರಾಜು, ರಮೇಶ್, ಹರೀಶ್, ಪವನ, ಜವರೇಗೌಡನಪಾಳ್ಯದ ನರಸಿಂಹಮೂರ್ತಿ, ಹರೀಶ್, ಗ್ರಾಮೀಣಾಭಿವೃದ್ಧಿ ಇಲಾಖೆಯ ಎಇಇ ಚಂದ್ರಶೇಖರ್, ಗುತ್ತಿಗೆದಾರರಾದ ರೇಣುಕಪ್ರಸಾದ್, ಕೇಬಲ್ ರಾಜು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...

ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ...

ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್...

ಗುಬ್ಬಿ | ವಿರೋಧ ಪಕ್ಷ ಎಂದರೆ ಸಲ್ಲದ ಆರೋಪಗಳಿಗೆ ಸೀಮಿತವಲ್ಲ: ಶಾಸಕ ಶ್ರೀನಿವಾಸ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ...