ಗುಬ್ಬಿ | ವಿರೋಧ ಪಕ್ಷ ಎಂದರೆ ಸಲ್ಲದ ಆರೋಪಗಳಿಗೆ ಸೀಮಿತವಲ್ಲ: ಶಾಸಕ ಶ್ರೀನಿವಾಸ್

Date:

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ ಸೀಮಿತರಾಗಿದ್ದು, ಅವರ ಆರೋಪಗಳಿಗೆ ಯಾವುದೇ ತಾತ್ವಿಕ ನೆಲೆ ಇಲ್ಲ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್   ಟೀಕಿಸಿದರು.

- Advertisement -

ತಾಲ್ಲೂಕಿನ ಕಡಬ ಗ್ರಾಮದಲ್ಲಿ ₹5 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಗುದ್ದಲಿಪೂಜೆ ನೆರಔವೇರಿಸಿ ಮಾತನಾಡಿದ ಅವರು, ಕಾಮಗಾರಿಗಳಲ್ಲಿ ಶೇ.30ರಷ್ಟು ಮಾತ್ರ ಕೆಲಸ ನಡೆಯುತ್ತಿದೆ ಎಂಬ ಆರ್. ಅಶೋಕ್ ಅವರ ಆರೋಪಕ್ಕೆ ಅರ್ಥವಿಲ್ಲ. ಕಡಿಮೆ ಅನುದಾನದಲ್ಲಿ ಕಾಮಗಾರಿಗಳನ್ನು ಹೇಗೆ ಸಮರ್ಪಕವಾಗಿ ಕೈಗೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಕಾಂಗ್ರೆಸ್ ಸರ್ಕಾರ ರಾಜ್ಯದಾದ್ಯಂತ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುತ್ತಿದೆ. ಆದರೆ, ವಿರೋಧ ಪಕ್ಷದ ನಾಯಕರ ಹೇಳಿಕೆಗಳನ್ನು ಗಮನಿಸಿದರೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವುದೇ ಹೇಗೆ ಎಂಬ ಅನುಮಾನ ಮೂಡುತ್ತದೆ ಎಂದು ವ್ಯಂಗ್ಯವಾಡಿದರು.

ಆರ್. ಅಶೋಕ್ ಅವರ ಪಕ್ಷ ಆಡಳಿತದಲ್ಲಿದ್ದಾಗ ಶೇ.40ರಷ್ಟು ಕಮಿಷನ್ ನಡೆಯುತ್ತಿತ್ತು ಎಂದು ಆರೋಪಿಸಲಾಗುತ್ತಿತ್ತು. ಇದೀಗ ಕಾಮಗಾರಿಗಳಲ್ಲಿ ಶೇ.30ರಷ್ಟು ಮಾತ್ರ ಕೆಲಸ ನಡೆಯುತ್ತಿದೆ ಎಂದು ಹೇಳುತ್ತಿರುವ ಅವರು, ಎರಡನ್ನೂ ಸೇರಿಸಿ ಶೇ.70 ಎಂದು ಹೇಳುತ್ತಿರುವುದು ಅವರ ಹೇಳಿಕೆಯಲ್ಲಿನ ಗೊಂದಲವನ್ನು ತೋರಿಸುತ್ತದೆ ಎಂದು ಟೀಕಿಸಿದರು.

ವಿರೋಧ ಪಕ್ಷದ ಜವಾಬ್ದಾರಿ ಎಂದರೆ ಕೇವಲ ಆರೋಪ ಮಾಡುವುದು ಎಂದು ಭಾವಿಸಿರುವಂತೆ ಕಾಣುತ್ತಿದೆ. ಯಾವುದೇ ತಿರುಳಿಲ್ಲದ ಆರೋಪಗಳನ್ನು ಮಾಡುವ ಮೂಲಕ ತಮ್ಮದೇ ಯೋಗ್ಯತೆಯನ್ನು ತೋರಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ನಡೆದಿದೆ ಎಂಬುದನ್ನು ಜನರು ನೋಡಿದ್ದಾರೆ. ಇದೀಗ ಕಾಂಗ್ರೆಸ್ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡುವ ಮುನ್ನ ವಿರೋಧ ಪಕ್ಷದ ನಾಯಕರು ವಾಸ್ತವಾಂಶ ಅರಿತುಕೊಳ್ಳಬೇಕು ಎಂದರು.

ಪ್ರಜಾ ಸೇವೆ ಅಭಿಯಾನವು ಸರ್ಕಾರದ ಹೊಸ ಪ್ರಯೋಗವಾಗಿದ್ದು, ಜನರಿಗೆ ಆಡಳಿತವನ್ನು ಇನ್ನಷ್ಟು ಹತ್ತಿರವಾಗಿಸುವ ಉದ್ದೇಶ ಹೊಂದಿದೆ. ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳನ್ನು ಮೂರು ಹಂತಗಳಲ್ಲಿ ಪರಿಶೀಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಅಥವಾ ಉತ್ತರ ಒದಗಿಸಲಾಗುವುದು. ಇದರಿಂದ ಸಾರ್ವಜನಿಕರ ಕೆಲಸಗಳಿಗೆ ಚುರುಕು ದೊರೆಯಲಿದ್ದು, ಅರ್ಜಿಗಳ ವಿಲೇವಾರಿ ತ್ವರಿತಗೊಳ್ಳಲಿದೆ. ಕಾರ್ಯಕ್ರಮದ ಯಶಸ್ಸಿಗೆ ಗುಬ್ಬಿಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಶಾಸಕ ವಾಸಣ್ಣ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಜೇಶ್, ದರ್ಶನ್ ಗೌಡ, ಬಾಲಕೃಷ್ಣ, ಲಕ್ಷ್ಮಿನಾರಾಯಣ, ಗುತ್ತಿಗೆದಾರ ಸತೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ತುಮಕೂರು | ಜಾಗತೀಕರಣದ ನಡುವೆ ಪ್ರಾದೇಶಿಕ ಅಸ್ಮಿತೆ ಉಳಿಸುವ ಶಕ್ತಿ ರಂಗಭೂಮಿಗಿದೆ : ರಂಗನಿರ್ದೇಶಕ ಲಕ್ಷ್ಮಣ್ ಕೆ.ಪಿ.

 ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗಳು ಅಳಿಸಿಹೋಗುವ ಆತಂಕ...

ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ...

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...