ಗುಬ್ಬಿ | ಸಾಲದ ಸುಳಿಗೆ ಯುವಕ ಆತ್ಮಹತ್ಯೆ : ಕ್ರಿಕೆಟ್ ಬೆಟ್ಟಿಂಗ್ ದಂಧೆ ಕಡಿವಾಣಕ್ಕೆ ಒತ್ತಾಯ

Date:

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಅಂಕಳಕೊಪ್ಪ ಗ್ರಾಮದಲ್ಲಿ ಯುವಕ ನಾರಾಯಣಸ್ವಾಮಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ನಡೆದಿದೆ. ಈ ಸೊಸೈಡ್ ಪ್ರಕರಣದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ನೆರಳು ಕಾಣುತ್ತಿದೆ. ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳು ಮುಗಿದಂತೆ ಸಾಲದ ಸುಳಿಗೆ ಸಿಲುಕಿದ ಯುವಕ ಸಾವಿನ ಮನೆಯ ಕದ ತಪ್ಪಿದ್ದಾನೆ. ಇಂತಹ ದಂಧೆಗೆ ನೂತನ ಮುಖ್ಯಮಂತ್ರಿಗಳ ಸರ್ಕಾರ ಕಡಿವಾಣ ಹಾಕಬೇಕು ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಒತ್ತಾಯಿಸಿದರು.

- Advertisement -

ಗುಬ್ಬಿ  ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅನ್ ಲೈನ್ ಆಟಗಳು, ಕ್ರಿಕೆಟ್ ಬೆಟ್ಟಿಂಗ್ ದಂಧೆಗಳು ವಿದ್ಯಾರ್ಥಿಗಳು ಹಾಗೂ ಯುವಕರನ್ನು ಬಲಿ ಪಡೆಯುತ್ತಿದೆ. ಈ ಪೈಕಿ ಬಡವರ ಮಕ್ಕಳು ಹೆಚ್ಚು ಬಲಿಯಾಗಿದ್ದಾರೆ ಎಂದು ವಿಷಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...
IMG 20260618 WA0239

ಅಂಕಲಕೊಪ್ಪ ಗ್ರಾಮದ ಬೆಟ್ಟಸ್ವಾಮಿ ಅವರ ಮಗ ನಾರಾಯಣಸ್ವಾಮಿ (25) ಪದವಿ ಪಡೆದು ಉದ್ಯೋಗ ಅರಸಿ ತುಮಕೂರು ನಗರಕ್ಕೆ ಹೋಗಿ ಬರುತ್ತಿದ್ದ. ಡಿಲೇವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಈ ಯುವಕ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ದುಮುಕಿ ಸಾಲದ ಸುಳಿಗೆ ಸಿಲುಕಿದ್ದಾನೆ. ಬಡತನದ ಕುಟುಂಬಕ್ಕೆ ಆಧಾರ ಸ್ತಂಬವಾಗಿದ್ದ ಯುವಕನ ಸಾವು ಇಡೀ ಕುಟುಂಬಕ್ಕೆ ಶಾಕ್ ಆಗಿದೆ. ಗ್ರಾಮದಲ್ಲಿ ಒಳ್ಳೆಯ ಹುಡುಗ ಎಂದೆನಿಸಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು ತೀರಾ ನೋವಿನ ಸಂಗತಿ. ಇಂತಹ ಅನಾಹುತಕ್ಕೆ ಸರ್ಕಾರ ಹೊಣೆ ಹೊತ್ತು ಕೂಡಲೇ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕು. ಆನ್ ಲೈನ್ ಗೇಮ್ ಗಳಿಗೂ ಬ್ರೇಕ್ ಹಾಕಬೇಕು ಎಂದು ಆಗ್ರಹಿಸಿದರು.

ಬೆಟ್ಟಿಂಗ್ ದಂಧೆಗೆ ಹತ್ತಾರು ಯುವಕರು ನಗರ ಬಿಟ್ಟು ಹಳ್ಳಿಯಲ್ಲಿ ತಲೆ ಮರೆಸಿಕೊಂಡು ನಿದರ್ಶನ ಪ್ರತಿ ಗ್ರಾಮದಲ್ಲಿ ಸಿಗುತ್ತವೆ. ಬಹುಬೇಗ ದಂಧೆಗೆ ಸಿಲುಕುವ ಅಮಾಯಕ ಹುಡುಗರು ಬಡತನದ ಹಿನ್ನಲೆಯಲ್ಲಿ ಹಣದ ಆಸೆಗೆ ಸಾಲದ ಸುಳಿಗೂ ಸಿಲುಕುತ್ತಾರೆ. ಈ ನಿಟ್ಟಿನಲ್ಲಿ ಅಮಾಯಕ ಯುವಕರನ್ನು ಉಳಿಸುವ ಕೆಲಸ ಸರ್ಕಾರ ತುರ್ತಾಗಿ ಮಾಡಬೇಕಿದೆ ಎಂದು ಮತ್ತೊಮ್ಮೆ ಒತ್ತಾಯಿಸಿ ಬೆಟ್ಟಿಂಗ್ ದಂಧೆಯಲ್ಲಿ ಕೆಲವರು ಮಾತ್ರ ಲಾಭ ಮಾಡಿದರೆ, ಸಾಲದ ಚಕ್ರಕ್ಕೆ ಸಿಲುಕಿ ಸಾವಿಗೆ ಶರಣಾಗುವವರ ಸಂಖ್ಯೆ ಸಾವಿರಾರು ಆಗಿರುತ್ತದೆ ಎಂದು ಬೇಸರ ವ್ಯಕ್ತಪಡಿಸಿ ಮೃತರ ಪೋಷಕರನ್ನು ಸಂತೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುರುವೇಕೆರೆ | ಪರಂಪರೆ ಪೂರ್ವಜರ ಉಡುಗೊರೆಯಲ್ಲ, ಮುಂದಿನ ಪೀಳಿಗೆಗೆ ನೀಡುವ ಸಾಲ : ಡಾ. ಮಹೇಶ್ ಕುಮಾರ್

ಪರಂಪರೆ ಎಂಬುದು ಪೂರ್ವಜರಿಂದ ಪಡೆದ ಉಡುಗೊರೆಯಲ್ಲ; ಮುಂದಿನ ಪೀಳಿಗೆಗೆ ಉಳಿಸಿ ನೀಡಲು...

ಮಧುಗಿರಿ | ಸ್ವಾವಲಂಬನೆ, ಆತ್ಮವಿಶ್ವಾಸದೊಂದಿಗೆ ಪದವಿ ಪಡೆಯಿರಿ: ಡಾ. ಎಂ. ಗೋವಿಂದರಾಯ

ಪದವಿ ಶಿಕ್ಷಣವು ಕೇವಲ ಅಂಕಗಳನ್ನು ಗಳಿಸುವುದಕ್ಕೆ ಸೀಮಿತವಾಗಿರದೆ, ಸ್ವಾವಲಂಬನೆ, ವೃತ್ತಿಪರತೆ ಹಾಗೂ...

ತಿಪಟೂರು | ಬೋಧಕ ವರ್ಗದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್

 ಕಾಲೇಜಿನ ಗ್ರಂಥಾಲಯದಲ್ಲಿರುವ ಸುಮಾರು 50 ಸಾವಿರ ಪುಸ್ತಕಗಳ ಜ್ಞಾನ ಸಂಪನ್ಮೂಲ ಹಾಗೂ...

ತುಮಕೂರು | ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸ ಆಲೋಚನೆ, ಆವಿಷ್ಕಾರದ ಮನೋಭಾವ ಬೆಳೆಸಿಕೊಳ್ಳಲಿ : ಡಾ.ಜಿ. ಪರಮೇಶ್ವರ

 ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿರಂತರ...