ಪ್ರಜಾ ಸೇವೆ ಅಭಿಯಾನ’ಕ್ಕೆ ಸೆ.5ರಂದು ಚಾಲನೆ: ಗುಬ್ಬಿಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

Date:

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾ ಸೇವೆ ಅಭಿಯಾನ’ಕ್ಕೆ ಸೆಪ್ಟೆಂಬರ್ 5ರಂದು ಅಧಿಕೃತ ಚಾಲನೆ ದೊರೆಯಲಿದ್ದು, ಯಶಸ್ವಿ ಅನುಷ್ಠಾನಕ್ಕಾಗಿ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.

- Advertisement -

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ತಿಪ್ಪೇಸ್ವಾಮಿ, ಈ ಹಿಂದೆ ನಡೆದ ಜನಸಂಪರ್ಕ ಸಭೆಗಳಲ್ಲಿ ಸ್ವೀಕರಿಸಲಾದ ಅರ್ಜಿಗಳ ಪ್ರಗತಿ ಹಾಗೂ ಪರಿಹಾರದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸೆ.5ರಂದು ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ನಡೆಯಲಿರುವ ಅಭಿಯಾನದಲ್ಲಿ ಪಂಚ ಗ್ಯಾರಂಟಿ ಯೋಜನೆ, ಕಂದಾಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳ ಸ್ಟಾಲ್‌ಗಳನ್ನು ತೆರೆಯುವಂತೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಶಾಸಕ ಎಸ್.ಆರ್. ಶ್ರೀನಿವಾಸ್ ಅವರ ನೇತೃತ್ವದಲ್ಲಿ ಅಭಿಯಾನ ನಡೆಯಲಿದ್ದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದರು.

ನಿಗದಿತ ಅವಧಿಯಲ್ಲಿ ತಹಶೀಲ್ದಾರ್ ಅಥವಾ ಉಪವಿಭಾಗಾಧಿಕಾರಿ ಮಟ್ಟದಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಅರ್ಜಿಗಳು ಸ್ವಯಂಚಾಲಿತವಾಗಿ ಜಿಲ್ಲಾಧಿಕಾರಿ ಮಟ್ಟಕ್ಕೆ ವರ್ಗಾವಣೆಯಾಗಲಿವೆ. ಪ್ರತಿ ಬುಧವಾರ ಮೂರು ಹಂತದ ಪರಿಶೀಲನಾ ವ್ಯವಸ್ಥೆಯ ಮೂಲಕ ಅರ್ಜಿಗಳ ಪ್ರಗತಿ ಮೇಲ್ವಿಚಾರಣೆ ನಡೆಯಲಿದೆ ಎಂದು ತಿಳಿಸಿದರು.

ಸಣ್ಣಪುಟ್ಟ ಸಮಸ್ಯೆಗಳಿಗಾಗಿ ಸಾರ್ವಜನಿಕರು ಜಿಲ್ಲಾ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಜನರ ಮನೆ ಬಾಗಿಲಿಗೆ ಆಡಳಿತ ತಲುಪಿಸುವುದೇ ‘ಪ್ರಜಾ ಸೇವೆ ಅಭಿಯಾನ’ದ ಆಶಯ ಎಂದು ಹೇಳಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ನಹೀದಾ ಜಂಜಂ, ಡಿಡಿಎಲ್‌ಆರ್ ಭಾವನ, ಜಿಲ್ಲಾ ಪಂಚಾಯಿತಿ ಡಿಎಸ್ ಸಂಜೀವಪ್ಪ, ಆರ್‌ಡಿಪಿಆರ್ ಈಶ್ವರಪ್ಪ, ತಹಶೀಲ್ದಾರ್ ಆರತಿ ಬಿ., ತಾಪಂ ಇಒ ರಂಗನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ತುಮಕೂರು | ಎಸ್‌ಎಸ್‌ಐಟಿ–ಸಿಎಂಟಿಐ ಒಪ್ಪಂದ: ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಸಂಶೋಧನೆಗೆ ಅವಕಾಶ

ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ...

ಮಧುಗಿರಿಯಲ್ಲಿ ಯುವ ಸಂಸತ್ತು ಅಣಕು ಅಧಿವೇಶನ

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...