ಕುಣಿಗಲ್ | ಕಡಸಿಂಗನಹಳ್ಳಿಯಲ್ಲಿ ಪಶು ಆರೋಗ್ಯ ಚಿಕಿತ್ಸಾ ಶಿಬಿರ

Date:

ಪಶುಸಂಗೋಪನೆಯಲ್ಲಿ ರಾಸುಗಳು, ಕುರಿ ಹಾಗೂ ಮೇಕೆಗಳನ್ನು ಸಾಕುವಾಗ ರೈತರು ವೈಜ್ಞಾನಿಕ ವಿಧಾನಗಳನ್ನು ಅನುಸರಿಸುವುದು ಅತ್ಯಂತ ಅಗತ್ಯ ಎಂದು ಸಂತೇಪೇಟೆ ಪಶು ವೈದ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದರು.

- Advertisement -

ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ವ್ಯಾಪ್ತಿಯ ಕಡಸಿಂಗನಹಳ್ಳಿ ಗ್ರಾಮದಲ್ಲಿ ಕೃಷಿ ವಿದ್ಯಾಲಯ, ಜಿಕೆವಿಕೆ ಬೆಂಗಳೂರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ, ತುಮಕೂರು ಹಾಲು ಒಕ್ಕೂಟ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಪಶು ಆರೋಗ್ಯ ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದ ಅವರು, ಪಶುಸಂಗೋಪನೆಯ ಮಹತ್ವ, ಜಾನುವಾರುಗಳಿಗೆ ಹರಡುವ ರೋಗಗಳ ಕುರಿತು ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಪಶುಸಂಗೋಪನೆಯಿಂದ ರೈತರಿಗೆ ದೊರೆಯುವ ಆರ್ಥಿಕ ಪ್ರಯೋಜನಗಳ ಕುರಿತು ಸವಿವರವಾಗಿ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಜಾನುವಾರುಗಳ ಆರೋಗ್ಯ ಕಾಪಾಡಲು ಕಾಲಕಾಲಕ್ಕೆ ಆರೋಗ್ಯ ತಪಾಸಣೆ, ಸೂಕ್ತ ಲಸಿಕೆ, ಹುಳು ನಿವಾರಣೆ, ಸಮತೋಲಿತ ಆಹಾರ ಹಾಗೂ ಅಗತ್ಯ ಖನಿಜಾಂಶಗಳನ್ನು ನೀಡಬೇಕು. ರೋಗದ ಲಕ್ಷಣಗಳು ಕಂಡುಬಂದ ಸಂದರ್ಭದಲ್ಲಿ ಸ್ವಯಂ ಚಿಕಿತ್ಸೆ ಮಾಡದೆ ಪಶುವೈದ್ಯರ ಸಲಹೆ ಪಡೆಯಬೇಕು ಎಂದು ಅವರು ರೈತರಿಗೆ ಸಲಹೆ ನೀಡಿದರು.

ಶಿಬಿರದಲ್ಲಿ ರಾಸುಗಳು, ಕುರಿ ಹಾಗೂ ಮೇಕೆಗಳಿಗೆ ಚರ್ಮರೋಗ ಸೇರಿದಂತೆ ವಿವಿಧ ರೋಗಗಳ ತಪಾಸಣೆ ನಡೆಸಲಾಯಿತು. ಗರ್ಭದಾರಣೆ ಪತ್ತೆ, ಸಾಮಾನ್ಯ ರೋಗ ತಪಾಸಣೆ, ಹುಳು ನಿವಾರಣೆ ಹಾಗೂ ಖನಿಜ ಮಿಶ್ರಣ ನೀಡುವ ಕಾರ್ಯ ಕೈಗೊಳ್ಳಲಾಯಿತು. ಅಗತ್ಯ ಲಸಿಕೆ ಮತ್ತು ಚಿಕಿತ್ಸಾ ಸೌಲಭ್ಯಗಳನ್ನು ರೈತರಿಗೆ ಒದಗಿಸಲಾಯಿತು.

ತುಮಕೂರು ಹಾಲು ಒಕ್ಕೂಟದ ವತಿಯಿಂದ ರೈತರಿಗೆ ರಾಸುಗಳಿಗೆ ಉಪಯುಕ್ತವಾದ ಖನಿಜ ಮಿಶ್ರಣ, ಕೆಚ್ಚಲು ಬಾವು ಪರೀಕ್ಷಾ ಕಿಟ್, ಔಷಧಿಗಳು, ಲಸಿಕೆಗಳು ಹಾಗೂ ಚಿಕಿತ್ಸಾ ಕಿಟ್‌ಗಳನ್ನು ಉಚಿತವಾಗಿ ವಿತರಿಸಲಾಯಿತು.

ಶಿಬಿರದಲ್ಲಿ ಡಾ. ವಿಕ್ರಂ, ಡಾ. ಚಿಕ್ಕಣ್ಣ, ಕ್ರೆಡಿಟ್ ಆಕ್ಸಿಸ್ ಸಂಸ್ಥೆಯ ಶಾಖಾ ವ್ಯವಸ್ಥಾಪಕ ಸುಂದರ್‌ರಾಜು, ಚೇತನ್, ಪದವಿ ವಿದ್ಯಾರ್ಥಿ ಸಾಗರ್, ಕೃಷಿ ವಿಸ್ತರಣಾಧಿಕಾರಿ ಹಾಗೂ ಜಿಕೆವಿಕೆ ಬೆಂಗಳೂರಿನ ಸಹಾಯಕ ಪ್ರಾಧ್ಯಾಪಕ ಡಾ. ಸಾಗರ್ ಎಸ್. ಪೂಜಾರ್, ಅಂತಿಮ ವರ್ಷದ ವಿದ್ಯಾರ್ಥಿಗಳು, ಕಡಸಿಂಗನಹಳ್ಳಿ ಗ್ರಾಮದ ರೈತ ಮುಖಂಡರು, ರೈತ ಮಹಿಳೆಯರು ಹಾಗೂ ಪಂಚಾಯಿತಿ ಅಧಿಕಾರಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

ಮಧುಗಿರಿ | ಸಿಂಹಾದ್ರಿ ಹತ್ಯೆ: ಪೊಲೀಸ್ ನಿರ್ಲಕ್ಷ್ಯ ಆರೋಪ; ಕಸಾಪುರದಲ್ಲಿ ಶಾಂತಿಸಭೆಗೆ ಒತ್ತಾಯ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾದಿಗ ಸಮುದಾಯದ ಯುವಕ...

ತುಮಕೂರು | ಎಸ್‌ಐಆರ್‌ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಆರೋಪ: ಸೆ.28ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬಡವರು, ದಲಿತರು,...