ಕುಣಿಗಲ್ | ಉಪವಿಭಾಗಾಧಿಕಾರಿ ಆದೇಶ ಪಾಲಿಸದ ತಹಶೀಲ್ದಾರ್ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ

Date:

ಪಿಟಿಸಿಎಲ್ ಕಾಯ್ದೆಯಡಿ ದಲಿತರ ಪರವಾಗಿ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ನೀಡಿದ್ದರೂ, ಜಮೀನಿನ ಸ್ವಾಧೀನವನ್ನು ಮೂಲ ಮಂಜೂರುದಾರರ ವಾರಸುದಾರರಿಗೆ ಹಸ್ತಾಂತರಿಸಲು ವಿಫಲವಾಗಿರುವ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಕುಣಿಗಲ್  ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ದಲಿತ ನಾರಾಯಣ್, ಬಲಾಢ್ಯರ ಒತ್ತಡಕ್ಕೆ ಮಣಿದು ಕಂದಾಯ ಅಧಿಕಾರಿಗಳು ಇಲ್ಲಸಲ್ಲದ ಕಾರಣಗಳನ್ನು ನೀಡಿ ದಲಿತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಸರ್ಕಾರದಿಂದ ಮಂಜೂರಾದ ಜಮೀನಿನಲ್ಲಿ ಕೃಷಿ ಮಾಡಿ ಆರ್ಥಿಕವಾಗಿ ಸದೃಢರಾಗಬೇಕಿದ್ದ ದಲಿತರಿಗೆ ಅಧಿಕಾರಿಗಳ ನಡೆ ಅನ್ಯಾಯ ಉಂಟುಮಾಡುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕೊತ್ತಗೆರೆ ಹೋಬಳಿಯ ಕೊರಮರಪಾಳ್ಯ ಗ್ರಾಮದ ಮನು ಬಿನ್ ಲೇಟ್ ನರಸಿಂಹ, ಗಂಗರಂಗಯ್ಯ ಬಿನ್ ವೆಂಕಟರಂಗಯ್ಯ, ದೊಡ್ಡ ಗೋವಿಂದಯ್ಯ ಬಿನ್ ವೆಂಕಟಪ್ಪ ಹಾಗೂ ಹೇಮಾ ಬಿನ್ ವೆಂಕಟಪ್ಪ ಅವರಿಗೆ ಸರ್ಕಾರ ಜಮೀನು ಮಂಜೂರು ಮಾಡಿತ್ತು. ಸರ್ಕಾರದ ಅನುಮತಿ ಇಲ್ಲದೆ ಜಮೀನು ಮಾರಾಟವಾಗಿದ್ದ ಹಿನ್ನೆಲೆಯಲ್ಲಿ ಪಿಟಿಸಿಎಲ್ ಕಾಯ್ದೆಯಡಿ ಮೂಲ ಮಂಜೂರುದಾರರ ವಾರಸುದಾರರು ಜಮೀನು ವಾಪಸ್ ಪಡೆಯಲು ಉಪವಿಭಾಗಾಧಿಕಾರಿಗಳ ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಕರಣ ವಿಚಾರಣೆ ನಡೆಸಿದ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ದಲಿತರ ಪರವಾಗಿ ಆದೇಶ ನೀಡಿ, ಅವರ ಹೆಸರಿಗೆ ಖಾತೆ ಮತ್ತು ಪಹಣಿ ದಾಖಲಿಸುವುದರ ಜೊತೆಗೆ ಜಮೀನಿನ ಸ್ವಾಧೀನವನ್ನು ಹಸ್ತಾಂತರಿಸುವಂತೆ ತಹಶೀಲ್ದಾರ್‌ಗೆ ಸೂಚಿಸಿತ್ತು. ಆದರೆ ಆದೇಶ ಜಾರಿಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಜಮೀನು ಬಿಡಿಸಿಕೊಡಲು ಪೊಲೀಸರು ಸಹಕಾರ ನೀಡುವಂತೆ ತಹಶೀಲ್ದಾರ್ ಕಚೇರಿಯಿಂದ ಮೂರು ಬಾರಿ ಪತ್ರ ಬರೆದು ದಿನಾಂಕ ನಿಗದಿಪಡಿಸಿದ್ದರೂ, ನಿಗದಿತ ದಿನದಂದು ವಿವಿಧ ಕಾರಣಗಳನ್ನು ನೀಡಿ ಅಧಿಕಾರಿಗಳು ಹಿಂದೆ ಸರಿಯುತ್ತಿದ್ದಾರೆ ಎಂದು ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದರು.

“ನ್ಯಾಯಾಲಯದ ಆದೇಶ ಮತ್ತು ದಾಖಲೆಗಳು ದಲಿತರ ಪರವಾಗಿದ್ದರೂ ಜಮೀನು ಬಿಡಿಸಿಕೊಡದಿರುವುದು ಪಿಟಿಸಿಎಲ್ ಕಾಯ್ದೆಯನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ. ಕೂಡಲೇ ಅಧಿಕಾರಿಗಳು ನ್ಯಾಯಾಲಯದ ಆದೇಶ ಪಾಲಿಸಿ ಜಮೀನಿನ ಸ್ವಾಧೀನವನ್ನು ದಲಿತರಿಗೆ ಹಸ್ತಾಂತರಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ತುಮಕೂರು ಜಿಲ್ಲಾ ಸಂಚಾಲಕ ವಿ. ಶಿವಶಂಕರ್, ತಾಲೂಕು ಅಧ್ಯಕ್ಷ ಮಲ್ಲಿಪಾಳ್ಯ ಶ್ರೀನಿವಾಸ್, ದೇವರಾಜು, ರಾಜಣ್ಣ, ರಂಗಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...