ಕುಣಿಗಲ್ | ಸೆ.19ರಂದು ಹುಲಿಯೂರುದುರ್ಗದಲ್ಲಿ ಜಿಲ್ಲಾ ಮಟ್ಟದ ಪ್ರಜಾ ಸೇವೆ ಆಂದೋಲನ

Date:

ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದಲ್ಲಿ ಸೆಪ್ಟೆಂಬರ್ 19ರಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ತಿಪ್ಪೇಸ್ವಾಮಿ ತಿಳಿಸಿದರು.

- Advertisement -

ಹುಲಿಯೂರುದುರ್ಗದ ಹುಲಿಯೂರಮ್ಮ ಸಮುದಾಯ ಭವನದಲ್ಲಿ ಗುರುವಾರ ನಡೆದ ಪ್ರಜಾ ಸೇವೆ ಆಂದೋಲನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಲು ಕಾರ್ಯಕ್ರಮದಲ್ಲಿ ಅವಕಾಶವಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ಕಾರ್ಯಕ್ರಮದ ಕುರಿತು ಪ್ರಚಾರ ಕೈಗೊಂಡು ಸಾರ್ವಜನಿಕರಿಗೆ ಅರ್ಜಿಗಳನ್ನು ವಿತರಿಸಲಿದ್ದಾರೆ. ಅರ್ಜಿ ಪಡೆದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನಮೂದಿಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಅಥವಾ ಉಪ ಮುಖ್ಯಮಂತ್ರಿಗಳಿಗೆ ಸಲ್ಲಿಸಬಹುದು ಎಂದು ತಿಳಿಸಿದರು.

ಅರ್ಜಿಗಳನ್ನು ಸ್ವೀಕರಿಸಿದ ಬಳಿಕ ಐಪಿಜಿಆರ್‌ಎಸ್ ಮೂಲಕ ಸ್ವೀಕೃತಿ ನೀಡಲಾಗುವುದು. ಕಾರ್ಯಕ್ರಮದ ದಿನದಂದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್‌ಗಳನ್ನು ತೆರೆಯಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಭೆಯಲ್ಲಿ ಭಾಗವಹಿಸಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ನಾಹೀದ್ ಜಮ್ ಜಮ್, ತಹಶೀಲ್ದಾರ್ ಕರಿಯ ನಾಯ್ಕ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಸಂತ್ ಕುಮಾರ್, ಉಪ ತಹಶೀಲ್ದಾರ್ ಜಗದೀಶ್ ಸೇರಿದಂತೆ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಶಾಂತಿಯುತವಾಗಿ ನಡೆದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ

 ಕಳೆದ ಕೆಲ ದಿನಗಳಿಂದ ರಂಗೇರಿದ್ದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ ಮತ...

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ : ತುಮಕೂರು ಜಿಲ್ಲೆಯಲ್ಲಿ ಶೇ.71.56 ಮತದಾನ

 ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ತುಮಕೂರು...

ಅಧಿಕಾರದ ಅಂಕಗಣಿತ vs ಸಂಘಟನೆಯ ರಸಾಯನ: ಪದವೀಧರರ ಮತ ಯಾರ ಕಡೆ?

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ನಾಳೆ (ಶುಕ್ರವಾರ) ನಡೆಯಲಿದೆ. ಆಡಳಿತಾರೂಢ...

ಗಜಪಡೆಯ ಗಾಂಭೀರ್ಯಕ್ಕೆ ತುಮಕೂರು ಫಿದಾ; ಜಂಬೂಸವಾರಿಗೆ ಜನಸಾಗರ

ಗಜಪಡೆಯ ಗಾಂಭೀರ್ಯ, ಅಂಬಾರಿಯಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ, ಭಕ್ತಿಯ ಪರವಶತೆಯಲ್ಲಿ ಮಿಂದೆದ್ದ...