ತುರುವೇಕೆರೆ ಪಟ್ಟಣದಲ್ಲಿ ಕಾಣಿಸಿಕೊಂಡ ಚಿರತೆ : ಮನೆ ಮಾಡಿದ ಆತಂಕ

Date:

 ತುರುವೇಕೆರೆ  ತಾಲೂಕಿನಲ್ಲಿ ಚಿರತೆ ಕಾಟ ಅತಿಯಾಗಿದೆ. ಗುರುವಾರ ರಾತ್ರಿ ಪಟ್ಟಣದ ಎಪಿಎಂಸಿ ಹಿಂಭಾಗದಲ್ಲಿ ಚಿರತೆ ಕಾಣಿಸಿಕೊಂಡಿದೆ. ಜನರ ಮುಂದೆಯೇ ಬೀದಿ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಇದರಿಂದಾಗಿ ಜನರು ಭಯಭೀತರಾಗಿದ್ದಾರೆ. 

- Advertisement -

 ಎಪಿಎಂಸಿ ಕಾಂಪೌಂಡ್‌ ಹಿಂಭಾಗ ಹನುಮಂತಪ್ಪ ಎನ್ನುವವರ ಮನೆ ಮುಂದೆ ಸಾಯಂಕಾಲ 7.30 ರ ಸಮಯದಲ್ಲಿ ಬೀದಿ ನಾಯಿಯನ್ನು ಹೊತ್ತೊಯ್ದ ದೃಶ್ಯವನ್ನು ಅವರ ಮನೆಯ ಮೇಲ್ಭಾಗ ನಿಂತಿದ್ದವರು ಕಣ್ಣಾರೆ ನೋಡಿದ್ದಾರೆ. ಈ ದೃಶ್ಯದಿಂದ ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಅಕ್ಕಪಕ್ಕದ ಮನೆಯವರು ಭಯಭೀತರಾಗಿದ್ದಾರೆ. ಮನೆಯಿಂದ ಹೊರಬರಲೂ ಹೆದರುತ್ತಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

 ತಾಲೂಕಿನ ಮಾರಪ್ಪನಹಳ್ಳಿಯಲ್ಲಿಯೂ ಚಿರತೆ ಕಾಣಿಸಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಚಿರತೆ ಮರಿ ಕಾಣಿಸಿಕೊಂಡಿದೆ. ತಾರಾ ಕರೀಗೌಡ ಎಂಬುವವರ ಮನೆಯಲ್ಲಿ ಸಾಕಲಾಗಿದ್ದ ನಾಯಿಯನ್ನೂ ಚಿರತೆ ಹೊತ್ತೊಯ್ದಿದೆ. ಅಲ್ಲದೇ ಮುದ್ದೇಗೌಡ ಎಂಬುವವರ ಮನೆಯಲ್ಲಿ ಸಾಕಲಾಗಿದ್ದ ನಾಯಿಯನ್ನು ಸಹ ತಿಂದು ಹಾಕಿದೆ. ತೋಟದ ಸಾಲಿನಲ್ಲಿ ಚಿರತೆ ಕೂಗುವ ಮತ್ತು ಓಡಾಡುವ ದೃಶ್ಯ ಕಾಣಬರುತ್ತಿದೆ ಎಂದು ಮಾರಪ್ಪನಹಳ್ಳಿಯ ರೈತ ಮಹಿಳೆ ತಾರಮ್ಮ ಆತಂಕ ವ್ಯಕ್ತಡಿಸಿದ್ದಾರೆ. 

ಪಟ್ಟಣದಲ್ಲಿ ಗುರುವಾರ ರಾತ್ರಿ ಚಿರತೆ ಕಾಣಿಸಿಕೊಂಡ ಜಾಗದಲ್ಲಿ ಸಾಕಷ್ಟು ಮನೆಗಳು ಇವೆ. ಅಲ್ಲದೇ ಶಾಲಾ ಕಾಲೇಜುಗಳೂ ಸಹ ಇವೆ. ಚಿರತೆ ಕಾಣಿಸಿಕೊಂಡಿರುವುದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಕೂಡಲೇ ಅರಣ್ಯ ಇಲಾಖಾ ಸಿಬ್ಬಂದಿ ಬೋನು ಇಡುವ ಮೂಲಕ ಚಿರತೆಯನ್ನು ಹಿಡಿಯಬೇಕೆಂದು ನಾಗರೀಕರು ಆಗ್ರಹಿಸಿದ್ದಾರೆ

ವರದಿ – ಎಸ್. ನಾಗಭೂಷಣ್

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ‘ಸಿಂಹಾದ್ರಿ’ ಕೊಲೆ ಖಂಡಿಸಿ ಪ್ರತಿಭಟನೆ :ಎಲ್ಲರ ವಿರುದ್ಧ ಎಫ್‌ಐಆರ್ ದಾಖಲಿಸಲು ಒತ್ತಾಯ

ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ...

ಮಧುಗಿರಿ | ಗಣೇಶ ವಿಸರ್ಜನೆ ವೇಳೆ ಗಲಾಟೆ: ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪ; ಆರೋಪಿ ಬಂಧನ

ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಭಾನುವಾರ ಗಣೇಶ ಮೂರ್ತಿ...

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...