ಮಧುಗಿರಿ|ಎನ್ಎಚ್ಎಂ ಒಳಗುತ್ತಿಗೆ ನೌಕರರ ಖಾಯಂಗೆ ಒತ್ತಾಯ

Date:

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್ ಎಚ್ ಎಂ ಒಳಗುತ್ತಿಗೆ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಸೇವೆಯನ್ನು ಖಾಯಂ ಮಾಡುವಂತೆ ಆಗ್ರಹಿಸಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಗಂಗಾಧರ್ ರವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಒಳಗುತ್ತಿಗೆ ನೌಕರರು, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುಮಾರು 28,258 ನೌಕರರು ಎನ್‌ಎಚ್‌ಎಂ ಯೋಜನೆ ಅಡಿಯಲ್ಲಿ ಒಳಗುತ್ತಿಗೆ ನೌಕರರಾಗಿ ಕಳೆದ 20 ವರ್ಷದಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವಾರಿಯರ್ ಗಳಂತೆ ಕರ್ತವ್ಯ ನಿರ್ವಹಿಸಿದ್ದು ನಮ್ಮ ಎಲ್ಲಾ ಸೇವೆಗಳನ್ನು ಗುರುತಿಸಿ ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆಯ ತಮ್ಮ ಪ್ರಣಾಳಿಕೆಯಲ್ಲಿ ಎನ್‌ಎಚ್‌ಎಮ್ ಒಳಗುತ್ತಿಗೆ ನೌಕರನ್ನು ಖಾಯಂ ಮಾಡುತ್ತೇವೆ ಎಂದು ಭರವಸೆ ನೀಡಿತ್ತು. ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳಿಗೆ ಹಾಗೂ ಇಲಾಖೆಯ ಎಲ್ಲಾ ಅಧಿಕಾರಿಗಳಿಗೂ ಸಹ ಮನವಿ ಮಾಡಲಾಗಿದೆ. ಘೋಷಿಸಿದಂತೆ ನಮ್ಮನ್ನು ಖಾಯಂ ಮಾಡಬೇಕೆಂಬುದು ನಮ್ಮ ಬಹು ದಿನಗಳ ಏಕೈಕ ಬೇಡಿಕೆಯಾಗಿದೆ ಎಂದು ಸಂಘದ ಪದಾಧಿಕಾರಿಗಳು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನಮ್ಮ ಬೇಡಿಕೆ ಈಡೇರಿಕೆಗಾಗಿ ಆರೋಗ್ಯ ಸಚಿವರು ಸಭೆ ನಡೆಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೌಕರರ ಖಾಯಂ ಕಡತ ಸಿದ್ಧಪಡಿಸಲು ಸೂಚಿಸಿದ್ದು ಅದರಂತೆ ಖಾಯಂಮಾತಿ ಕಡತವು ರಚನೆಯಾಗಿ ಇಲಾಖೆಯ ಹಂತದಲ್ಲಿದೆ ನುಡಿದಂತೆ ನಡೆಯುತ್ತಿರುವ ಘನ ಸರ್ಕಾರವು ಸಚಿವ ಸಂಪುಟದಲ್ಲಿ ಉನ್ನತ ಮಟ್ಟದ ನಿರ್ಣಯ ತೆಗೆದುಕೊಳ್ಳಬೇಕು ಎಂದು ಮನವಿ ಪತ್ರದಲ್ಲಿ ಸರ್ಕಾರ ವನ್ನು ಒತ್ತಾಯಿಸಿದ್ದಾರೆ.

ಅಯ್ಯೂಷ್ ವೈದ್ಯ ಅಬ್ದುರ್ ರೆಹಮಾನ್ ಮಾತನಾಡಿ ರಾಜ್ಯ ಸಂಘದ ಸೂಚನೆಯ ಮೇರೆಗೆ ನಮ್ಮ ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎನ್ ಹೆಚ್ ಎಂ ಒಳಗುತ್ತಿಗೆ ನೌಕರರೆಲ್ಲಾ ಸೇರಿ ಸರ್ಕಾರದ ಮೇಲೆ ಒತ್ತಡ ಹೇರಲು ತಮ್ಮ ತಮ್ಮ ಕೆಲಸದ ಸ್ಥಳಗಳಲ್ಲಿ ಆ.17 ರಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಾಗುತ್ತಿದ್ದು ಸಾಂಕೇತಿಕವಾಗಿ ಶಾಂತಿಯುತವಾಗಿ ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ಕೈಗೊಂಡಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಕೃಷ್ಣ , ಮೋಹನ್ , ಹರೀಶ್ , ನವೀನ್ , ಮಧುರಾಜ್ , ರಾಘವೇಂದ್ರ , ನಾಗರಾಜು , ಶಿವಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ...

ತುಮಕೂರು | ಬೆಳೆ ಕಟಾವು ಪ್ರಯೋಗ ಶೇ.100ರಷ್ಟು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120...