ಮಧುಗಿರಿ | ‘ಸಿಂಹಾದ್ರಿ’ ಕೊಲೆ ಖಂಡಿಸಿ ಪ್ರತಿಭಟನೆ :ಎಲ್ಲರ ವಿರುದ್ಧ ಎಫ್‌ಐಆರ್ ದಾಖಲಿಸಲು ಒತ್ತಾಯ

Date:

ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ ಮಾದಿಗ ಸಮುದಾಯದ ಯುವಕ ಸಿಂಹಾದ್ರಿ ಮೃತಪಟ್ಟಿರುವುದನ್ನು ಖಂಡಿಸಿ ದಲಿತಪರ ಸಂಘಟನೆಗಳು ಹಾಗೂ ಗ್ರಾಮಸ್ಥರು ಭಾನುವಾರ ಮಧುಗಿರಿ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಉಪವಿಭಾಗಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದರು.

- Advertisement -

ಸೆ.20ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಗಣೇಶ ವಿಸರ್ಜನೆ ಕಾರ್ಯಕ್ರಮದ ಸಂದರ್ಭದಲ್ಲಿ ಸಿಂಹಾದ್ರಿ ಮೇಲೆ ಅದೇ ಗ್ರಾಮದ ಮಾರುತೇಶ್ ಎಂಬಾತ ಜಾತಿ ಕಾರಣದಿಂದ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸಿಂಹಾದ್ರಿ ಮೃತಪಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರ ವಿರುದ್ಧ ಮಾತ್ರ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಗೆ ಕಾರಣರಾದ ಹಾಗೂ ಇದರ ಹಿಂದೆ ಇರುವ ಎಲ್ಲರ ವಿರುದ್ಧವೂ ಪ್ರಕರಣ ದಾಖಲಿಸಿ ಸಮಗ್ರ ತನಿಖೆ ನಡೆಸಬೇಕು. ಗಣೇಶೋತ್ಸವ ಆಯೋಜನಾ ಸಮಿತಿಯ ಪಾತ್ರದ ಬಗ್ಗೆಯೂ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

1004041773

ಘಟನೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿ ಪೊಲೀಸರು ಇರಲಿಲ್ಲ. ಪೊಲೀಸ್ ಇಲಾಖೆಯ ವೈಫಲ್ಯದಿಂದಲೇ ಘಟನೆ ಸಂಭವಿಸಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕರ್ತವ್ಯದಲ್ಲಿ ವೈಫಲ್ಯ ಎಸಗಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

‘ನನ್ನ ಮಗ ಏನು ತಪ್ಪು ಮಾಡಿದ್ದ?’

ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯುತ್ತಿದ್ದ ವೇಳೆ ಸಿಂಹಾದ್ರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

“ನನ್ನ ಮಗ ಏನು ತಪ್ಪು ಮಾಡಿದ್ದ? ಅವನ ಪ್ರಾಣವನ್ನೇ ತೆಗೆದುಬಿಟ್ಟರಲ್ಲ… ಇದ್ದ ಒಬ್ಬ ಮಗನನ್ನೂ ಕಿತ್ತುಕೊಂಡುಬಿಟ್ಟರು” ಎಂದು ಕುಟುಂಬಸ್ಥರು ಕಣ್ಣೀರಿಟ್ಟರು. ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರ ಮುಖದಲ್ಲೂ ದುಃಖ ಮಡುಗಟ್ಟಿತ್ತು.

ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವೈ. ಎಚ್. ಹುಚ್ಚಯ್ಯ ಮಾತನಾಡಿ, “ಒಬ್ಬರ ಮೇಲೆ ಮಾತ್ರ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ. ಪ್ರಕರಣದ ಹಿಂದೆ ಇರುವ ಎಲ್ಲರ ಮೇಲೂ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಗಣೇಶೋತ್ಸವ ಆಯೋಜನಾ ಸಮಿತಿಯ ಪಾತ್ರದ ಬಗ್ಗೆಯೂ ತನಿಖೆ ನಡೆಯಬೇಕು. ಘಟನೆ ನಡೆದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಇರದಿರುವುದು ಗಂಭೀರ ವಿಷಯವಾಗಿದ್ದು, ಪೊಲೀಸ್ ವೈಫಲ್ಯಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಕ್ಕೆ ಕೂಡಲೇ ₹50 ಲಕ್ಷ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

1004041775

ಮಧುಗಿರಿ ತಾಲೂಕಿನಲ್ಲಿ ಮಾದಿಗ ಸಮುದಾಯಕ್ಕೆ ಸೇರಿದವರ ಮೇಲೆ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಆರೋಪಿಸಿದ ಅವರು, ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರೆಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನ್ಯಾಯ ಸಿಗುವವರೆಗೆ ಅಂತ್ಯಕ್ರಿಯೆ ಇಲ್ಲ

ತಪ್ಪಿತಸ್ಥರೆಲ್ಲರ ವಿರುದ್ಧ ಪ್ರಕರಣ ದಾಖಲಿಸಿ, ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸುವವರೆಗೆ ಮೃತ ಸಿಂಹಾದ್ರಿಯ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಕುಟುಂಬಸ್ಥರು ಪ್ರತಿಭಟನಾ ಸ್ಥಳದಲ್ಲಿ ತಿಳಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಅವರು ಪ್ರತಿಭಟನಾಕಾರರ ಮನವಿ ಆಲಿಸಿದರು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸರ್ಕಾರದಿಂದ ಸಂತ್ರಸ್ತ ಕುಟುಂಬಕ್ಕೆ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಗಂಗಾನುಮಯ್ಯ, ಹೆತ್ತೇನಹಳ್ಳಿ ಮಂಜುನಾಥ್, ಹರಿರಾಮ್, ಮಧುಗಿರಿ ಕಣಿಮಯ್ಯ ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳ ಮುಖಂಡರು, ಗ್ರಾಮಸ್ಥರು ಹಾಗೂ ಸಿಂಹಾದ್ರಿ ಕುಟುಂಬದ ಸದಸ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...

ಮಧುಗಿರಿ | ಪರಂಪರೆ ಮತ್ತು ಐತಿಹಾಸಿಕ ಮಹತ್ವ ಅರಿಯುವುದು ಯುವಜನರ ಜವಾಬ್ದಾರಿ : ಡಾ. ಎಸ್.ವಿ. ವೆಂಕಟೇಶಯ್ಯ

ಐತಿಹಾಸಿಕ ಪರಂಪರೆ ನಮ್ಮ ಗತಕಾಲದ ಸಾಧನೆ, ಸಂಸ್ಕೃತಿ ಮತ್ತು ಅನನ್ಯತೆಯನ್ನು ಪ್ರತಿಬಿಂಬಿಸುವ...

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು : ಸಚಿವ ಎನ್. ಚಲುವರಾಯಸ್ವಾಮಿ

ಬರುವ ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ಯೋಜನೆಯ ನೀರು ಹರಿಸಲಾಗುವುದು ಎಂದು...

ಪಾವಗಡ | ರೈತನಿಗೆ ಬಾಂಬ್ ಬೆದರಿಕೆ; ಶಂಕಿತ ನಕ್ಸಲ್ ಬಂಧನ

ರೈತರ ಪಂಪ್‌ಸೆಟ್ ಬಳಿ ನಾಡಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ ಆರೋಪ ಹಾಗೂ...