ಮಧುಗಿರಿ | ವೃತ್ತಿ ಗುರಿ ಸ್ಪಷ್ಟವಾಗಿದ್ದರೆ ಯಶಸ್ಸು ಖಚಿತ: ಪ್ರೊ.ರಾಮು ಜೆ

Date:

ವಿದ್ಯಾರ್ಥಿಗಳು ಪದವಿ ಶಿಕ್ಷಣದ ಅವಧಿಯಲ್ಲಿಯೇ ತಮ್ಮ ಆಸಕ್ತಿ, ಸಾಮರ್ಥ್ಯ, ಕೌಶಲ್ಯ ಮತ್ತು ವೃತ್ತಿ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯಕ್ಕೆ ಸೂಕ್ತವಾದ ಯೋಜನೆಯನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

- Advertisement -

ಅವರು ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಬಿ.ಕಾಂ ಹಾಗೂ ಬಿ.ಕಾಂ (ಬಿ ಎಫ್ ಎಸ್ ಐ) ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ ಬಿ.ಕಾಂ ವಿದ್ಯಾರ್ಥಿಗಳಿಗೆ ಚಾಟೆರ್ಡ್ ಅಕೌಂಟೆಂಟ್, ಸಿ ಎಂ ಎ, ಕಂಪನಿ ಕಾರ್ಯದರ್ಶಿ, ಎಂ.ಕಾಂ, ಎಂ.ಬಿ.ಎ, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗ, ಸ್ಪರ್ಧಾತ್ಮಕ ಪರೀಕ್ಷೆಗಳು, ಹಣಕಾಸು ಕ್ಷೇತ್ರ , ವಿಮೆ, ಹಾಗೂ ಉದ್ಯಮಶೀಲತೆ ಸೇರಿದಂತೆ ವಿವಿಧ ವೃತ್ತಿ ಅವಕಾಶಗಳು ಗಳು, ಹಣಕಾಸು ಸಂಸ್ಥೆಗಳು, ಫಿನ್ ಟೆಕ್ ಹಾಗೂ ಡಿಜಿಟಲ್ ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಲಭ್ಯವಿರುವ ಉತ್ತಮ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಪ್ರಾಸ್ತಾವಿಕವಾಗಿ ಮಾತನಾಡಿದ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ರಂಜಿತ ಬಿ.ಆರ್ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ವೃತ್ತಿ ಆಯ್ಕೆಗಳ ಕುರಿತು ಗೊಂದಲಗಳಿಗೆ ಸ್ಪಷ್ಟತೆ ಮೂಡಿಸುವ ನಿಟ್ಟಿನಲ್ಲಿ ವೃತ್ತಿ ಮಾರ್ಗದರ್ಶನ ಸಹಕಾರಿ ಎಂದರು.ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಕೇವಲ ಪದವಿ ಪಡೆದಿರುವುದು ಸಾಕಾಗುವುದಿಲ್ಲ. ವಿದ್ಯಾರ್ಥಿಗಳು ಸಂವಹನ ನಡೆಸುತ್ತಿರುವ ಕೌಶಲ್ಯ, ಕಂಪ್ಯೂಟರ್ ಜ್ಞಾನ, ಡಿಜಿಟಲ್ ಕೌಶಲ್ಯ, ಡೇಟಾ ವಿಶ್ಲೇಷಣೆ, ಹಣಕಾಸು ಜ್ಞಾನ, ಸಮಸ್ಯೆ ಪರಿಹಾರ ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ಮುಂತಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

1004102153

ಬಿ.ಕಾಂ ಬಿ ಎಫ್ ಎಸ್ ಐ ವಿಭಾಗದ ಸಂಚಾಲಕಿ ಡಾ.ಲೀಲಾವತಿ ಎಚ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸಾಧಿಸಲು ಸಮಯ ನಿರ್ವಹಣೆ, ನಿರಂತರ ಅಧ್ಯಯನ, ಪ್ರಾಯೋಗಿಕ ಜ್ಞಾನ, ಇಂಟರ್ನ್‌ಶಿಪ್, ಪ್ರಮಾಣಪತ್ರ ಕೋರ್ಸ್‌ಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಆದ್ಯತೆ ನೀಡಬೇಕು ಎಂದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ.ಗೋವಿಂದರಾಯ ಎಂ ಮಾತನಾಡಿ ಅವಕಾಶಗಳಿಗಾಗಿ ಕಾಯುವುದಕ್ಕಿಂತ, ಅಗತ್ಯ ಕೌಶಲ್ಯಗಳನ್ನು ಬೆಳೆಸಿಕೊಂಡು ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಐಕ್ಯೂಎಸಿ ಸಂಚಾಲಕಿ ಪ್ರೊ.ವೇದಲಕ್ಷ್ಮೀ ಜಿ ಮಾತನಾಡಿ ಶೈಕ್ಷಣಿಕ ಬೆಳವಣಿಗೆಯೊಂದಿಗೆ ವೃತ್ತಿ ಕೌಶಲ್ಯ ಮತ್ತು ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸುವುದು ಇಂತಹ ಕಾರ್ಯಕ್ರಮಗಳ ಪ್ರಮುಖ ಉದ್ದೇಶವಾಗಿದ್ದು,
ಬದಲಾಗುತ್ತಿರುವ ಉದ್ಯೋಗ ಕ್ಷೇತ್ರಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ನಿರಂತರವಾಗಿ ನವೀಕರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಮಂಜುನಾಥ್ ಬಿ, ಪತ್ರಾಂಕಿತ ವ್ಯವಸ್ಥಾಪಕಿ ಚಂದ್ರಕಲಾ, ಪ್ರಾಧ್ಯಾಪಕರಾದ ಡಾ.ದುರ್ಗಪ್ಪ, ರಾಮಮೂರ್ತಿ, ನಟರಾಜು,ಡಾ.ನಂದಿನಿ, ಭಾರ್ಗವಿ, ಡಾ.ಮಂಜುನಾಥ್ ಬುಡಸನಹಳ್ಳಿ, ಮುರುಳಿಧರ್, ಆನಂದ್, ನಾಗೇಂದ್ರ, ಗಿರೀಶ್, ಮಿಸ್ಬಾ ಜಹೇರಾ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

ಮಧುಗಿರಿ | ಸಿಂಹಾದ್ರಿ ಹತ್ಯೆ: ಪೊಲೀಸ್ ನಿರ್ಲಕ್ಷ್ಯ ಆರೋಪ; ಕಸಾಪುರದಲ್ಲಿ ಶಾಂತಿಸಭೆಗೆ ಒತ್ತಾಯ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾದಿಗ ಸಮುದಾಯದ ಯುವಕ...

ತುಮಕೂರು | ಎಸ್‌ಐಆರ್‌ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಆರೋಪ: ಸೆ.28ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬಡವರು, ದಲಿತರು,...